ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shubhanshu Shukla: ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಸಚಿವರಿಂದ ಅದ್ಧೂರಿ ಸ್ವಾಗತ, ಮೋದಿ ಭೇಟಿ ಸಾಧ್ಯತೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹಾಗೂ ದೆಹಲಿ ಸಿಎಂ ರೇಖಾ ಗುಪ್ತಾ ವಿದ್ಯಾರ್ಥಿಗಳ ಗುಂಪು ಶುಭಾಂಶು ಅವರಿಗೆ ಭವ್ಯ ಸ್ವಾಗತ ಕೋರಿದರು.

ಶುಭಾಂಶು ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದಾದ ನಂತರ ಅವರು ಲಖನೌಗೆ ಹೋಗಲಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೊಬ್ಬ ಗಗನಯಾತ್ರಿ ಶುಭಾಂಶು ಜೊತೆಗೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ.ಆಕ್ಸಿಯಂ-4 ಮಿಷನ್‍ಗಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.



ನಿನ್ನೆ ಭಾರತಕ್ಕೆ ಬರುತ್ತಿರುವ ಕುರಿತು ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದ ಶುಕ್ಲಾ, ನಾನು ಭಾರತಕ್ಕೆ ಹಿಂತಿರುಗಲು ವಿಮಾನದಲ್ಲಿ ಕುಳಿತಾಗ, ನನ್ನ ಹೃದಯದಲ್ಲಿ ಭಾವನೆಗಳ ಮಿಶ್ರಣವಿದೆ. ಕಳೆದ ಒಂದು ವರ್ಷದಿಂದ ಈ ಕಾರ್ಯಾಚರಣೆಯ ಸಮಯದಲ್ಲಿ ನನ್ನ ಸ್ನೇಹಿತರು ಮತ್ತು ಕುಟುಂಬವಾಗಿದ್ದ ಅದ್ಭುತ ಜನರ ಗುಂಪನ್ನು ಬಿಟ್ಟು ಹೋಗುವುದು ನನಗೆ ದುಃಖ ತಂದಿತ್ತು. ಕಾರ್ಯಾಚರಣೆಯ ನಂತರ ಮೊದಲ ಬಾರಿಗೆ ನನ್ನ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ದೇಶದ ಪ್ರತಿಯೊಬ್ಬರನ್ನು ಭೇಟಿಯಾಗಲು ತುಂಬಾ ಉತ್ಸುಕನಾಗಿದ್ದೇನೆ. ಜೀವನ ಎಂದರೆ ಇದೇ ಎಂದು ನಾನು ಭಾವಿಸುತ್ತೇನೆ ಎಂದು ಬರೆದಕೊಂಡಿದ್ದರು.

ಈ ಸುದ್ದಿಯನ್ನೂ ಓದಿ: PM Narendra Modi: ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಜನಿಕಾಂತ್‌; ಪ್ರಧಾನಿ ಮೋದಿ ಅಭಿನಂದನೆ

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಜೂನ್ 25 ರಂದು ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಹೊರಟು ಜೂನ್ 26 ರಂದು ISS ನೊಂದಿಗೆ ಸಂಪರ್ಕ ಸಾಧಿಸಿದ ನಾಸಾದ ಆಕ್ಸಿಯಮ್ -4 ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದರು.