ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆಗೂ ಮೊದಲೇ 1000ಕ್ಕೂ ಜನರ ಬಂಧನ

ದೆಹಲಿಯ ಜಂತರ್ ಮಂತರ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಪ್ರತಿಭಟನೆಗೂ ಮೊದಲೇ ಸಾವಿರಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಶನಿವಾರ 20,000ಕ್ಕೂ ಹೆಚ್ಚು ಪ್ರತಿಭಟನಾಕಾರರು ದೆಹಲಿಗೆ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ಶುಕ್ರವಾರವೇ ಕಾರ್ಯಾಚರಣೆ ಪ್ರಾರಂಭಿಸಿದ ಪೊಲೀಸರು ಹಲವಾರು ಮಂದಿಯನ್ನು ವಶಕ್ಕೆ ಪಡೆದರು.

ಸಂಗ್ರಹ ಚಿತ್ರ

ದೆಹಲಿ: ಚುನಾವಣಾ ಆಯೋಗದ (Election Commission) ಮುಖ್ಯ ಚುನಾವಣಾ ಆಯುಕ್ತರ (Chief Election Commissioner Gyanesh Kumar) ವಿರುದ್ಧ ಕಾಕ್ರೋಚ್ ಜನತಾ ಪಕ್ಷದಿಂದ (Cockroach Janta Party) ದೆಹಲಿಯ (Delhi) ಜಂತರ್ ಮಂತರ್ (Jantar Mantar)ನಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಟನೆಗೂ (Delhi protest) ಮೊದಲೇ 1,000ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯಲ್ಲಿ ಹೆಚ್ಚು ಜನದಟ್ಟಣೆಯಾಗುವುದನ್ನು ನಿಯಂತ್ರಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಗ್ಗೆ ವಿವಿಧ ಜಿಲ್ಲೆಗಳು, ಗಡಿ ಪ್ರದೇಶಗಳು ಹಾಗೂ ಸಾರಿಗೆ ಕೇಂದ್ರಗಳ ಬಳಿ ಸೇರಿದ್ದ ಜನರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ನಡೆದಿರುವ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆ ನಡೆಸುವುದಾಗಿ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೂ ಮೊದಲೇ ದೆಹಲಿಯಾದ್ಯಂತ ಸುಮಾರು 1,000 ಜನರನ್ನು ವಶಕ್ಕೆ ಪಡೆಯಲಾಗಿದೆ.

ಜಂತರ್ ಮಂತರ್ ಪ್ರತಿಭಟನೆಗೂ ಮುನ್ನವೇ ಶಾಕ್‌; CJP ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ, ಸೌರವ್ ದಾಸ್ ವಶಕ್ಕೆ

ಆಗ್ನೇಯ ದೆಹಲಿಯ ಶಾಹೀನ್ ಬಾಗ್, ಜಾಮಿಯಾ ನಗರದ ಸುತ್ತಮುತ್ತ 250ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ. ಪೂರ್ವ ಮತ್ತು ಈಶಾನ್ಯ ದೆಹಲಿಯಿಂದ 100ಕ್ಕೂ ಹೆಚ್ಚು ಜನರನ್ನು ಹಾಗೂ ರೈಲು, ಬಸ್ ಮತ್ತು ವಿಮಾನ ನಿಲ್ದಾಣಗಳ ಸುತ್ತಮುತ್ತ ಸೇರಿದ್ದ ಹಲವಾರು ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಸಹ-ಸಂಯೋಜಕ ಸೌರವ್ ದಾಸ್, ಪಕ್ಷದ ಕಾರ್ಯಕರ್ತರು ಶನಿವಾರ ಬೆಳಗ್ಗೆ ದೆಹಲಿಗೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದರು. ಇದರ ಬಳಿಕ ವಿಮಾನ ನಿಲ್ದಾಣದ ಹೊರಗೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ಜನ ಸೇರುವುದನ್ನು ತಡೆಯಲು ಮತ್ತು ಕಾನೂನು-ಸುವ್ಯವಸ್ಥೆಯನ್ನು ಕಾಪಾಡಲು ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 20,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಆಗಮಿಸುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಾಟ್ ಪ್ಲೇಸ್ ಮತ್ತು ಲ್ಯೂಟಿಯನ್ಸ್ ದೆಹಲಿಯಲ್ಲಿ ಶನಿವಾರ ಮುಂಜಾನೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಅನೇಕರು ಗುರುದ್ವಾರ ಬಾಂಗ್ಲಾ ಸಾಹಿಬ್‌ನಲ್ಲೂ ತಂಗಿದ್ದರು.

ಇವಿಎಂ ಬದಲಿಗೆ ಮತಪತ್ರ ಪದ್ಧತಿ ಬಳಕೆಗೆ ಆಗ್ರಹ: ರಾಷ್ಟ್ರಪತಿಗೆ ಇಂಡಿಯಾ ಒಕ್ಕೂಟದಿಂದ ಮನವಿ

ಬಹು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಜಂತರ್ ಮಂತರ್, ಕನ್ನಾಟ್ ಪ್ಲೇಸ್, ಸಂಸದ್ ಮಾರ್ಗ, ಅಶೋಕ ರಸ್ತೆ, ಜನಪಥ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ. ಭದ್ರತೆಗಾಗಿ 30,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ವಿದ್ಯಾ ಇರ್ವತ್ತೂರು

View all posts by this author