ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vijay's Rally Stampede: ನನ್ನ ಹೃದಯ ಒಡೆದುಹೋಗಿದೆ; ಕಾಲ್ತುಳಿತದ ಬಳಿಕ ವಿಜಯ್‌ ಮೊದಲ ರಿಯಾಕ್ಷನ್‌

ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ (Vijay)ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಭಾರೀ ಅನಾಹುತ ಸಂಭವಿಸಿದ್ದು, ಕಾಲ್ತುಳಿತದಲ್ಲಿ ಒಟ್ಟು 39 ಜನರು ಮೃತಪಟ್ಟಿದ್ದಾರೆ. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ಜನಪ್ರಿಯ ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಸಂತಾಪ ಸೂಚಿಸಿದ್ದಾರೆ.

ಕಾಲ್ತುಳಿತದ ಬಳಿಕ ವಿಜಯ್‌ ಹೇಳಿದ್ದೇನು?

-

Vishakha Bhat Vishakha Bhat Sep 28, 2025 8:41 AM

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ (Vijay)ಆಯೋಜಿಸಿದ್ದ ಪ್ರಚಾರದ ರ‍್ಯಾಲಿಯ ವೇಳೆ ಭಾರೀ ಅನಾಹುತ ಸಂಭವಿಸಿದ್ದು, ಕಾಲ್ತುಳಿತದಲ್ಲಿ ಒಟ್ಟು 39 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದ್ದು, 60 ಕ್ಕೂ ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಕುರಿತು ವಿಜಯ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ ಅವರು ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ಜನಪ್ರಿಯ ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಸಂತಾಪ ಸೂಚಿಸಿದ್ದಾರೆ. "ನನ್ನ ಹೃದಯ ಮುರಿದುಹೋಗಿದೆ; ನಾನು ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿದ್ದೇನೆ. ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಮತ್ತು ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ" ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.



ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಈ ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಘೋಷಿಸಿದ್ದಾರೆ. ಘಟನೆ ಬಗ್ಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟ್ಯಾಲಿನ್‌ ಪ್ರತಿಕ್ರಿಯಿಸಿದ್ದು, ಕರೂರಿನಿಂದ ಬರುತ್ತಿರುವ ಸುದ್ದಿ ಆತಂಕಕಾರಿಯಾಗಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮಾಜಿ ಸಚಿವ ವಿ. ಸೆಂಥಿಲ್‌ಬಾಲಾಜಿ, ಸಚಿವ ಸುಬ್ರಮಣಿಯನ್ ಮಾ ಮತ್ತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದೇನೆ. ಹತ್ತಿರದ ತಿರುಚ್ಚಿ ಜಿಲ್ಲೆಯ ಸಚಿವ ಅನ್ಬಿಲ್ ಮಹೇಶ್ ಅವರಿಗೂ ಯುದ್ಧೋಪಾದಿಯಲ್ಲಿ ಅಗತ್ಯ ಸಹಾಯ ನೀಡುವಂತೆ ಆದೇಶಿಸಿದ್ದೇನೆ ಎಂದರು.

ಈ ಸುದ್ದಿಯನ್ನೂ ಓದಿ: Vijay's Rally Stampede: 6 ಗಂಟೆ ವಿಳಂಬ... 30ಸಾವಿರಕ್ಕೂ ಅಧಿಕ ಜನ; ವಿಜಯ್‌ ರ‍್ಯಾಲಿಯಲ್ಲಿ ಅಷ್ಟಕ್ಕೂ ನಡೆದಿದ್ದೇನು?

ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ʼʼತಮಿಳುನಾಡಿನ ಕರೂರಿನಲ್ಲಿ ಆಯೋಜಿಸಿದ್ದ ರಾಜಕೀಯ ರ‍್ಯಾಲಿಯಲ್ಲಿ ನಡೆದ ಘಟನೆ ತಿಳಿದು ದುಃಖವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದ ಜತೆಗೆ ನಾವಿದ್ದೇವೆ. ಈ ಸಂಕಷ್ಟದ ಸಮಯದಲ್ಲಿ ಅವರಿಗಾಗಿ ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಆದಷ್ಟು ಶೀಘ್ರವಾಗಿ ಚೇತರಿಕೊಳ್ಳಲಿʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.