ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಅವರು ನನ್ನ ತಾಯಿಯನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ; ಘಟನೆ ನೆನೆದು ಭಾವುಕರಾದ ಮೋದಿ

ಬಿಹಾರದಲ್ಲಿ ನಡೆದ ಆರ್‌ಜೆಡಿ-ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆಯಿಂದ ತಮ್ಮ ದಿವಂಗತ ತಾಯಿಯ ವಿರುದ್ಧ ಮಾಡಿದ ಹೇಳಿಕೆಗಳನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭಾವುಕರಾದರು. ಈ ದೌರ್ಜನ್ಯಗಳು ನನ್ನ ತಾಯಿಗೆ ಮಾತ್ರ ಆದ ಅವಮಾನವಲ್ಲ. ಇದು ದೇಶದ ತಾಯಂದಿರಗೆ ಮಾಡಿದ ಅವಮಾನ ಎಂದು ಅವರು ಹೇಳಿದರು.

ಪಾಟನಾ: ಬಿಹಾರದಲ್ಲಿ ನಡೆದ ಆರ್‌ಜೆಡಿ-ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆಯಿಂದ ತಮ್ಮ ದಿವಂಗತ ತಾಯಿಯ ವಿರುದ್ಧ ಮಾಡಿದ ಹೇಳಿಕೆಗಳನ್ನು ಖಂಡಿಸಿ ಪ್ರಧಾನಿ ನರೇಂದ್ರ (Narendra Modi) ಮೋದಿ ಮಂಗಳವಾರ ಭಾವುಕರಾದರು. ಬಿಹಾರದಲ್ಲಿ ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇಂಡಿಯಾ ಬಣದ ಪ್ರಚಾರದ ವೇದಿಕೆಯಲ್ಲಿ ನನ್ನ ಮೃತ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಇದು ಪ್ರತಿಯೊಬ್ಬ ತಾಯಿ ಮತ್ತು ಸಹೋದರಿಯನ್ನು ಅವಮಾನಿಸಿದೆ ಎಂದು ಹೇಳಿದರು.

ಬಿಹಾರದಲ್ಲಿ ಮಹಿಳಾ ಉದ್ಯಮಿಗಳಿಗೆ ಸುಲಭವಾಗಿ ಆರ್ಥಿಕ ನೆರವು ಒದಗಿಸುವ ರಾಜ್ಯ ಜೀವಿಕಾ ನಿಧಿ ಸಹಕಾರಿ ಸಂಘ ಲಿಮಿಟೆಡ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಆರ್‌ಜೆಡಿ-ಕಾಂಗ್ರೆಸ್ ಪ್ರಚಾರ ವೇದಿಕೆಯಲ್ಲಿ ನನ್ನ ತಾಯಿಗೆ ಅವಾಚ್ಯ ಶಬ್ದ ಬಳಸಿ ನಿಂದಿಸಲಾಗಿದೆ ಎಂದು ಮೋದಿ ಹೇಳಿದರು. ನನ್ನ ತಾಯಿಯನ್ನು ಮಾತ್ರ ಅವಮಾನಿಸಿಲ್ಲ, ಭಾರತದ ಪ್ರತಿಯೊಬ್ಬ ತಾಯಿ ಮತ್ತು ಅಕ್ಕ- ತಂಗಿಯರನ್ನು ಅವಮಾನಿಸಿದ್ದಾರೆ. ಇದನ್ನು ಕೇಳಿದ ನಂತರ ನೀವು ಕೂಡಾ ನನ್ನಷ್ಟೇ ನೋವು ಅನುಭವಿಸಿದ್ದೀರಿ ಎಂದು ನನಗೆ ತಿಳಿದಿದೆ ಎಂದು ಮೋದಿ ಭಾವುಕರಾಗಿದ್ದಾರೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 20 ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ಅವರು, "ಈ ದೌರ್ಜನ್ಯಗಳು ನನ್ನ ತಾಯಿಗೆ ಮಾತ್ರ ಅವಮಾನವಲ್ಲ. ಇದು ದೇಶದ ತಾಯಂದಿರಗೆ ಮಾಡಿದ ಅವಮಾನ. ನನ್ನ ತಾಯಿಯಂತಹ ಅನೇಕ ಮಹಿಳೆಯರು ಬಡತನದ ವಿರುದ್ಧ ತನ್ನನ್ನು ಮತ್ತು ತನ್ನ ಒಡಹುಟ್ಟಿದವರನ್ನು ಸಾಕಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಅನಾರೋಗ್ಯ ಇದ್ದರೂ ಕೆಲಸ ಮಾಡಿ, ಪ್ರತಿಯೊಂದು ಪೈಸೆಯನ್ನು ಕೂಡಿಟ್ಟು ನಮಗೆ ಬಟ್ಟೆ ಕೊಡಿಸುತ್ತಿದ್ದರು. ನಮ್ಮ ದೇಶದಲ್ಲಿ ಅಂತಹ ಕೋಟಿ ಕೋಟಿ ತಾಯಂದಿರಿದ್ದಾರೆ. ದೇವರು ಮತ್ತು ದೇವತೆಗಳಿಗಿಂತ ತಾಯಿಯ ಸ್ಥಾನವು ಉನ್ನತವಾಗಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ: Modi-Putin: ತೈಲ ಒಪ್ಪಂದದ ಮಾತುಕತೆ; ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್‌

ಶ್ರೀಮಂತರ ಕುಟುಂಬದಲ್ಲಿ ಹುಟ್ಟಿದವರಿಗೆ ಬಡ ತಾಯಿಯ ನೋವು ಎಂದಿಗೂ ಕಾಣುವುದಿಲ್ಲ. ಅವರೆಲ್ಲ ಚಿನ್ನ, ಬೆಳ್ಳಿ ಚಮಚವನ್ನು ಬಾಯಿಯಲ್ಲಿ ಇಟ್ಟುಕೊಂಡು ಹುಟ್ಟಿದ್ದಾರೆ. ಬಿಹಾರದಲ್ಲಿ ತಮ್ಮ ಕುಟುಂಬವೇ ಅಧಿಕಾರದಲ್ಲಿ ಇರಬೇಕು ಅಂದುಕೊಂಡಿದ್ದಾರೆ. ಆದರೆ ದುರ್ಬಲ ಮಹಿಳೆಯೊಬ್ಬರ ಮಗನನ್ನು ನೀವು ಪ್ರಧಾನಿಯನ್ನಾಗಿ ಮಾಡಿದ್ದೀರಿ. ನಿಮ್ಮ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ ಎಂದು ನನಗೆ ತಿಳಿದಿದೆ ಎಂದು ಅವರು ಹೇಳಿದರು.