Narendra Modi: ದೇಶವನ್ನೇ ಬೆಚ್ಚಿ ಬೀಳಿಸಿದ ಗ್ಯಾಂಗ್‌ರೇಪ್ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿ ಮೋದಿ ಆದೇಶ
Varanasi physical Abuse Case: ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅವರು ಆದೇಶಿಸಿದ್ದಾರೆ. 19 ವರ್ಷದ ಯುವತಿಯ ಮೇಲೆ ಮೇಲೆ ಆರು ದಿನಗಳ ಕಾಲ 23 ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಶುಕ್ರವಾರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಬಂದಿದ್ದ ಪ್ರಧಾನಿ ಮೋದಿ ಈ ಘಟನೆ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ವಿವರ ಪಡೆದರು.


ವಾರಾಣಸಿ: ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ (Varanasi Physical Abuse) ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅವರು ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಾಣಸಿಯಲ್ಲಿ (Varanasi) 19 ವರ್ಷದ ಯುವತಿಯ ಮೇಲೆ ಮೇಲೆ ಆರು ದಿನಗಳ ಕಾಲ 23 ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಶುಕ್ರವಾರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಬಂದಿದ್ದ ಪ್ರಧಾನಿ ಮೋದಿ ಈ ಘಟನೆ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ವಿವರ ಪಡೆದರು.
ಪೊಲೀಸರು ಇಲ್ಲಿಯವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿಸಲಾಗಿದ್ದು, ಉಳಿದ ಶಂಕಿತರನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪ್ರಧಾನಿಯವರಿಗೆ ಭರವಸೆ ನೀಡಿದ್ದಾರೆ. ಪ್ರಕರಣದ ಕುರಿತು ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಪ್ರಧಾನಿಯವರಿಗೆ ವಿವರಿಸಿದರು. ಅನಂತರ ಮೋದಿಯವರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರಲು ಆದೇಶಿಸಿದರು.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರ, ವಾರಾಣಸಿಗೆ ಬಂದಿಳಿದ ತಕ್ಷಣ ನಗರದಲ್ಲಿ ಇತ್ತೀಚೆಗೆ ನಡೆದ ಕ್ರಿಮಿನಲ್ ಅತ್ಯಾಚಾರ ಘಟನೆಯ ಬಗ್ಗೆ ಪ್ರಧಾನಿಗೆ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿವರಿಸಿದರು. ಅಪರಾಧಿಗಳ ವಿರುದ್ಧ ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಜಾರಿಗೆ ತರಲು ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದೆ.
ಇದನ್ನೂ ಓದಿ: Physical Abuse: ರಾಜ್ಯದಲ್ಲಿ ಮತ್ತೊಂದು ನೀಚ ಕೃತ್ಯ; ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿ ಮಾಡಿದ ಪಾಪಿ ತಂದೆ!
ವಾರಾಣಸಿ ಸಾಮೂಹಿಕ ಅತ್ಯಾಚಾರ ಪ್ರಕರಣ
ಸಂತ್ರಸ್ತಳ ತಂದೆ ಈ ಕುರಿತು ಮಾಹಿತಿ ನೀಡಿದ್ದು, ತನ್ನ 19 ವರ್ಷದ ಮಗಳು ಮಾರ್ಚ್ 29 ರಂದು ಸ್ನೇಹಿತನನ್ನು ಭೇಟಿ ಮಾಡಲು ಮನೆಯಿಂದ ಹೊರಗೆ ಹೋಗಿದ್ದಾಳೆ ಎಂದು ತಿಳಿಸಿದ್ದಾರೆ. ಈ ವೇಳೆ ಅವಳಿಗೆ ಕೆಲವು ಹುಡುಗರ ಗುಂಪಿನ ಸಂಪರ್ಕವಾಗಿದೆ, ಹುಡುಗಿಗೆ ಆಮಿಷವೊಡ್ಡಿ ಕರೆದುಕೊಂಡು ಹೋಗಿ ಹಲವಾರು ದಿನಗಳವರೆಗೆ ಅತ್ಯಾಚಾರ ಎಸಗಿದ್ದಾರೆ. ಏಳು ದಿನಗಳ ಅವಧಿಯಲ್ಲಿ 23 ಮಂದಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿದ್ದಾಳೆ ಎಂದು ಅವರು ತಿಳಿಸಿದರು.
ಏಪ್ರಿಲ್ 4 ರಂದು ಪೊಲೀಸರು ಸಂತ್ರಸ್ತೆಯನ್ನು ಪತ್ತೆ ಹಚ್ಚಿದ್ದು, ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದಳು. ಅವಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವಳ ಆರೋಗ್ಯ ಸುಧಾರಿಸಿದ ಬಳಿಕ ಆಕೆ ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಸಂತ್ರಸ್ತೆಗೆ ಮಾದಕ ದ್ರವ್ಯ ನೀಡಿ, ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಸಂತ್ರಸ್ತೆಯನ್ನು ಬೇರೆ ಬೇರೆ ಹೊಟೇಲ್‌ಗಳಿಗೆ ಕರೆದೊಯ್ದು ಅಲ್ಲಿ ಪೈಶಾಚಿಕ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.