Voice President: ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಪಿ ರಾಧಾಕೃಷ್ಣನ್
ನೂತನ ಉಪ ರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

-

ನವದೆಹಲಿ: ನೂತನ ಉಪ ರಾಷ್ಟ್ರಪತಿಯಾಗಿ (Voice President) ಸಿಪಿ ರಾಧಾಕೃಷ್ಣನ್ ( CP Radhakrishnan) ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 67 ವರ್ಷದ ಸಿಪಿ ರಾಧಾಕೃಷ್ಣನ್ ಇತ್ತೀಚೆಗೆ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, (Narendra Modi) ಮಾಜಿ ಉಪರಾಷ್ಟ್ರಪತಿಗಳಾದ ಜಗದೀಪ್ ಧಂಖರ್ ಮತ್ತು ಎಂ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲ ಹೊಂದಿರುವ ಇವರ ವಿರುದ್ಧ ಇಂಡಿಯಾ ಮೈತ್ರಿ ಒಕ್ಕೂಟದ ಅಭ್ಯರ್ಥಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ ರೆಡ್ಡಿ ಸ್ಪರ್ಧಿಸಿದ್ದರು. ಎನ್‌ಡಿಎ ಮೈತ್ರಿ ಪಕ್ಷಗಳ ಸದಸ್ಯರು ರಾಧಾಕೃಷ್ಣನ್‌ಗೆ ಮತ ಹಾಕಿದ್ದರೆ, ಇಂಡಿಯಾ ಒಕ್ಕೂಟದ ಸದಸ್ಯರು ಅಡ್ಡ ಮತದಾನ ಮಾಡಿದ್ದರು. ಈ ಮೂಲಕ 752 ಒಟ್ಟು ಮತಗಳ ಪೈಕಿ 452 ಮತ ಪಡೆದು ಗೆಲುವು ಸಾಧಿಸಿದ್ದರು. 152 ಮತಗಳ ಅಂತರದಲ್ಲಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ಎಸ್ ರಾಧಾಕೃಷ್ಣನ್ (1952 ರಿಂದ 1962) ಮತ್ತು ಆರ್ ವೆಂಕಟರಾಮನ್ (1984 ರಿಂದ 1987) ನಂತರ ರಾಧಾಕೃಷ್ಣನ್ ತಮಿಳುನಾಡಿನ ಮೂರನೇ ಉಪಾಧ್ಯಕ್ಷರಾಗಿದ್ದಾರೆ.
ರಾಧಾಕೃಷ್ಣನ್ ಅವರು ಗುರುವಾರ ಮಹಾರಾಷ್ಟ್ರದ ರಾಜ್ಯಪಾಲರಾಗಿ ಅಧಿಕಾರ ತ್ಯಜಿಸಿದರು. ಅಧಿಕೃತ ಹೇಳಿಕೆಯ ಪ್ರಕಾರ, ರಾಷ್ಟ್ರಪತಿ ಮುರ್ಮು ಅವರು ತಮ್ಮ ಕರ್ತವ್ಯಗಳ ಜೊತೆಗೆ ಮಹಾರಾಷ್ಟ್ರ ರಾಜ್ಯಪಾಲರ ಕಾರ್ಯಗಳನ್ನು ನಿರ್ವಹಿಸಲು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ನೇಮಿಸಿದ್ದಾರೆ. ಸಿಪಿ ರಾಧಾಕೃಷ್ಣನ್ ಆರ್‌ಎಸ್ಎಸ್ ಹಿರಿಯ ಸದಸ್ಯ ಮಾತ್ರವಲ್ಲ, ಸಕ್ರೀಯ ಸದಸ್ಯ. ಜನಸಂಘ ಬಳಿಕ ಭಾರತೀಯ ಜನತಾ ಪಾರ್ಟಿ ಮೂಲಕ ರಾಜಕೀಯದಲ್ಲಿ ಪಯಣ ಮುಂದುವರಿಸಿದ ಸಿಪಿ ರಾಧಾಕೃಷ್ಣನ್ ಅತ್ಯಂತ ಶಿಸ್ತಿನ ಶಿಪಾಯಿ ಎಂದೇ ಹೆಸರಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: Vice President of India: ಉಪರಾಷ್ಟ್ರಪತಿಗಳ ಚುನಾವಣೆ ಹೇಗೆ ನಡೆಯಿತು..? ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಯಾವೆಲ್ಲಾ ಸೌಲಭ್ಯಗಳು ಸಿಗುತ್ತೆ?
ಫಲಿತಾಂಶ ಘೋಷಣೆಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸಿಪಿ ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದರು ಮತ್ತು ಹೊಸದಾಗಿ ಆಯ್ಕೆಯಾದ ಉಪರಾಷ್ಟ್ರಪತಿಗಳು ಭಾರತದ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುತ್ತಾರೆ ಮತ್ತು ಸಂಸದೀಯ ಚರ್ಚೆಗೆ ಸಕಾರಾತ್ಮಕ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.