ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನವೆಂಬರ್ 19 ಅಥವಾ 20 ರಂದು ಬಿಹಾರದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

New Bihar government: ಚುನಾವಣೆಗೂ ಮೊದಲು ತಮ್ಮ ಸಿಎಂ ಅಭ್ಯರ್ಥಿಯನ್ನು ಎನ್‌ಡಿಎ ಮೈತ್ರಿಕೂಟ ಘೋಷಿಸಿರಲಿಲ್ಲ. ಈಗ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳನ್ನು ಗೆದ್ದಿರುವುದರಿಂದ ಸಿಎಂ ಗಾದಿ ಯಾರ ಪಾಲಾಗಲಿದೆ ಎಂಬ ಕುತೂಹಲವೂ ಇದೆ. 89 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಬಿಜೆಪಿ ಬಿಹಾರದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2020ರಲ್ಲಿ ಕೇವಲ 1 ಸ್ಥಾನದಿಂದ ಅತಿದೊಡ್ಡ ಪಕ್ಷ ಸ್ಥಾನವನ್ನು ಆರ್‌ಜೆಡಿ ಎದುರು ಕಳೆದುಕೊಂಡಿತ್ತು.

ನ.19 ಅಥವಾ 20ಕ್ಕೆ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ?

ನ.19 ಅಥವಾ 20ಕ್ಕೆ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ? -

Abhilash BC
Abhilash BC Nov 16, 2025 12:32 PM

ಪಟನಾ: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಆಡಳಿತಾರೂಢ ಎನ್‍ಡಿಎ ಕೂಟ ಬಿಹಾರದಲ್ಲಿ ನೂತನ ಸರಕಾರ ರಚನೆಗೆ ಮಾತುಕತೆ ಆರಂಭಿಸಿದೆ. ಹೊಸ ಸರಕಾರ ರಚನೆಗೆ ಅನುವು ಮಾಡಿಕೊಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ರಾಜೀನಾಮೆ ನೀಡಲಿದ್ದಾರೆ ಎಂದು ಹಿರಿಯ ಜೆಡಿಯು ಮುಖಂಡರೊಬ್ಬರು ಹೇಳಿದ್ದಾರೆ. ಈ ಮಧ್ಯೆ ಇದೇ ನ.19 ಅಥವಾ 20 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಗುಸುಗುಸು ಎದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಅಂತಿಮ ವೇಳಾಪಟ್ಟಿಯನ್ನು ಅವಲಂಬಿಸಿ ನವೆಂಬರ್ 19 ಅಥವಾ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ನಿರೀಕ್ಷೆಯಿದೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು, ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

ಹಾಲಿ ಸಿಎಂ ಆಗಿರವ ನಿತೀಶ್‌ ಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದು ಸಾಧ್ಯವಾದರೆ 10ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಇತಿಹಾಸವನ್ನು ನಿತೀಶ್‌ ಬರೆಯಲಿದ್ದಾರೆ.

ಚುನಾವಣೆಗೂ ಮೊದಲು ತಮ್ಮ ಸಿಎಂ ಅಭ್ಯರ್ಥಿಯನ್ನು ಎನ್‌ಡಿಎ ಮೈತ್ರಿಕೂಟ ಘೋಷಿಸಿರಲಿಲ್ಲ. ಈಗ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳನ್ನು ಗೆದ್ದಿರುವುದರಿಂದ ಸಿಎಂ ಗಾದಿ ಯಾರ ಪಾಲಾಗಲಿದೆ ಎಂಬ ಕುತೂಹಲವೂ ಇದೆ. 89 ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಬಿಜೆಪಿ ಬಿಹಾರದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2020ರಲ್ಲಿ ಕೇವಲ 1 ಸ್ಥಾನದಿಂದ ಅತಿದೊಡ್ಡ ಪಕ್ಷ ಸ್ಥಾನವನ್ನು ಆರ್‌ಜೆಡಿ ಎದುರು ಕಳೆದುಕೊಂಡಿತ್ತು.

ಇದನ್ನೂ ಓದಿ Bihar Election 2025: ಬಿಹಾರದಲ್ಲಿ ಗೆಲುವಿನ ಮರುದಿನವೇ ಬಿಜೆಪಿಯಿಂದ ಮೂವರು ಅಮಾನತು

2020ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 125 ಸ್ಥಾನ ಗೆದ್ದಿತ್ತು. ಆರ್‌ಜೆಡಿ-ಕಾಂಗ್ರೆಸ್‌ ಮಹಾಮೈತ್ರಿಕೂಟ 110 ಸ್ಥಾನದಲ್ಲಿ ಜಯಭೇರಿ ಸಾಧಿಸಿತ್ತು. ಆ ಚುನಾವಣೆಯಲ್ಲಿ ಎನ್‌ಡಿಎ ಮತಗಳಿಕೆ ಶೇ.37.26ರಷ್ಟಿದ್ದರೆ, ಮಹಾಮೈತ್ರಿಕೂಟ ಮತಗಳಿಕೆ ಶೇ.36.58ರಷ್ಟಿತ್ತು. ಅಂದರೆ ಎರಡೂ ಮೈತ್ರಿಕೂಟಗಳ ನಡುವಿನ ಮತಗಳಿಕೆ ಅಂತರ ಕೇವಲ ಶೇ.0.03 ಆಗಿತ್ತು.