ನವದೆಹಲಿ: ಭಯೋತ್ಪಾದನೆಗೆ ಸಂಚು (Terror case) ರೂಪಿಸಲಾಗುತ್ತಿದೆ ಎನ್ನುವ ನಿಖರ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಮಂಗಳವಾರ ದೇಶಾದ್ಯಂತ ಐದು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ದಾಳಿ ನಡೆಸಿತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಒಟ್ಟು 21 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿತು. ಐಸಿಸ್ (ISIS) ಸಂಬಂಧಿತ ಭಯೋತ್ಪಾದನಾ ಸಂಘಟನೆ ದೇಶಾದ್ಯಂತ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎನ್ನುವುದು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿದುಬಂದಿದ್ದರಿಂದ ಈ ದಾಳಿ ನಡೆಸಲಾಗಿದೆ.
ಭಯೋತ್ಪಾದಕ ಅಖ್ಲಾಥೂರ್ ಮೊಹಮ್ಮದ್ ಅಖ್ಲಾಕ್ ಮುಜಾಹಿದ್ ಎಂಬಾತ ಸಾಮಾಜಿಕ ಮಾಧ್ಯಮಗಳ ಮೂಲಕ ಐಸಿಸ್ ಮತ್ತು ಇತರ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದನು. ಪಾಕಿಸ್ತಾನ ಮತ್ತು ಸಿರಿಯಾದಲ್ಲಿನ ಸಂಸ್ಥೆಗಳೊಂದಿಗೆ ಸಂಪರ್ಕ ನಡೆಸಲು ಸಹಾಯ ಮಾಡಿದ್ದನು. ಭಾರತದ ವಿರುದ್ಧ ಜಿಹಾದ್‌ಗೆ ಮಾನವಶಕ್ತಿ ಮತ್ತು ವಸ್ತು ಬೆಂಬಲವನ್ನು ಪಡೆಯಲು ಆತ ಇತರರೊಂದಿಗೆ ಸಹಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಐಸಿಸ್ ಮತ್ತು ಇತರ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಪಿತೂರಿಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಐದು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟುವಿನ ಸ್ಥಳೀಯ ಪೊಲೀಸರಿಂದ ದೂರು ಪಡೆದಿರುವ ಭಯೋತ್ಪಾದನಾ ನಿಗ್ರಹ ಸಂಸ್ಥೆ ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಅಖ್ಲಾಥೂರ್ ಮೊಹಮ್ಮದ್ ಅಖ್ಲಾಕ್ ಮುಜಾಹಿದ್‌ನ ಚಟುವಟಿಕೆಗಳ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ.
ದಾಳಿಗಳ ಸಮಯದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಮೊಬೈಲ್ ಫೋನ್‌ಗಳು ಸೇರಿದಂತೆ ಹಲವಾರು ಡಿಜಿಟಲ್ ಸಾಧನಗಳು, ಅಪರಾಧ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಆರೋಪಿಯು ಸಾಮಾಜಿಕ ಮಾಧ್ಯಮಗಳ ಮೂಲಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದನು. ಪಾಕಿಸ್ತಾನ ಮತ್ತು ಸಿರಿಯಾದಲ್ಲಿನ ಸಂಸ್ಥೆಗಳೊಂದಿಗೆ ಸಂಪರ್ಕಕ್ಕೆ ದಾರಿ ಮಾಡುತ್ತಿದ್ದನು. ರಾಷ್ಟ್ರೀಯ ತನಿಖಾ ಸಂಸ್ಥೆಗಳ ತನಿಖೆಗಳ ಪ್ರಕಾರ ಆರೋಪಿಯು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದನು ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ: Kidnap case: ಬಲವಂತವಾಗಿ ಇಸ್ಲಾಂಗೆ ಮಂತಾತರ ಮಾಡಿ ಆರು ವರ್ಷದ ಮಗುವಿನ ತಾಯಿಯನ್ನು ವಿವಾಹವಾದ ವ್ಯಕ್ತಿ!
ಮುಜಾಹಿದ್ ಪಾಕಿಸ್ತಾನ ಮತ್ತು ಸಿರಿಯಾದೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಹೇಳಲಾಗುತ್ತಿರುವುದರಿಂದ ಅವನ ಕಾರ್ಯಾಚರಣೆಗಳ ಬಗ್ಗೆ ಅಂತಾರಾಷ್ಟ್ರೀಯ ಸಂಸ್ಥೆಗಳು ಬೆಂಬಲ ಸಿಕ್ಕಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.