ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Tahawwur Rana: 26/11 ಮುಂಬೈ ದಾಳಿಯ ಆರೋಪಿ ತಹವ್ವುರ್ ರಾಣಾ ಭಾರತಕ್ಕೆ ಹಸ್ತಾಂತರ; NIA ಅಮೆರಿಕಕ್ಕೆ

ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಸುಪ್ರೀಂಕೋರ್ಟ್‌ ಒಪ್ಪಿಗೆ ನೀಡಿದೆ. ಆತನನ್ನು ಕರೆತರಲು ರಾಷ್ಟ್ರೀಯ ತನಿಖಾ ಸಂಸ್ಥೆಯ ನಾಲ್ಕು ಅಧಿಕಾರಿಗಳ ತಂಡ ಗುರುವಾರ, ಅಮೆರಿಕಕ್ಕೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ. ಈಗಾಗಲೇ ತಿಹಾರ್‌ ಜೈಲಿನಲ್ಲಿ ಆತನನ್ನು ಇರಿಸಲು ನಿರ್ಧರಿಸಲಾಗಿದ್ದು, ಆತನ ಸೆಲ್‌ ಬಳಿ ಬಿಗಿ ಭದ್ರತೆಯನ್ನು ಒದಗಿಸಲಾಗುವುದು.

26/11 ಮುಂಬೈ ದಾಳಿಯ ಆರೋಪಿ ಭಾರತಕ್ಕೆ ಕರೆತರಲು ಎನ್‌ಐಎ ಸಜ್ಜು

Tahawwur Rana

Profile Vishakha Bhat Jan 30, 2025 10:35 AM

ವಾಷಿಂಗ್ಟನ್‌ : ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು (Tahawwur Rana) ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ. ಪಾಕಿಸ್ತಾನಿ-ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಹಸ್ತಾಂತರ ಮಾಡಬೇಕು ಎಂದು ಭಾರತ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿತ್ತು. ಇದೀಗ ರಾಣಾ ಭಾರತಕ್ಕೆ ಆಗಮಿಸಲಿದ್ದಾನೆ. ಆತನನ್ನು ಕರೆತರಲು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯ ನಾಲ್ಕು ಅಧಿಕಾರಿಗಳ ತಂಡ ಗುರುವಾರ, ಅಮೆರಿಕಕ್ಕೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.

ಎನ್ಐಎ ತಂಡವು ಪ್ರಸ್ತುತ ಅಮೆರಿಕದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ವಿದೇಶಾಂಗ ಇಲಾಖೆಯಿಂದ ಅನುಮತಿ ಪತ್ರ ದೊರೆತ ಕೂಡಲೇ ಐಜಿ , ಡಿಐಜಿ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಅಮೆರಿಕಕ್ಕೆ ತೆರಳಲಿದ್ದಾರೆ.

ಏತನ್ಮಧ್ಯೆ, ದೆಹಲಿ ಕಾರಾಗೃಹ ಇಲಾಖೆಯು ತಿಹಾರ್ ಜೈಲಿನಲ್ಲಿ ಆತನನ್ನು ಇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆತ ಇರುವ ಸೆಲ್‌ಗೆ ಹೆಚ್ಚಿನ ಭದ್ರತೆ ಒದಗಿ, ಸಿಸಿಟಿವಿಯನ್ನು ಅಳವಡಿಸಲಾಗುತ್ತದೆ. ಸದಾ ಆತನ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಸೆಲ್‌ನಲ್ಲಿಯೇ ಆತನಿಗೆ ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.

2024ರಲ್ಲಿಯೇ ಭಾರತಕ್ಕೆ ತಹವ್ವುರ್ ಹುಸೇನ್ ರಾಣಾನನ್ನು ಹಸ್ತಾಂತರ ಮಾಡಲಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ ಈ ಪ್ರಕ್ರಿಯೆಗಳನ್ನು ಕೈಗೊಳ್ಳಲು ಅಮೆರಿಕ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿರಲಿಲ್ಲ. ಸೆಪ್ಟೆಂಬರ್‌ನಲ್ಲಿ ಗಡಿಪಾರು ಮಾಡದಂತೆ ಕೋರಿ ತಹವ್ವುರ್ ಹುಸೇನ್ ರಾಣಾ ಸಲ್ಲಿಕೆ ಮಾಡಿದ್ದ ಮನವಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಲು ಅವಕಾಶವಿದೆ ಎಂದು ಹೇಳಿತ್ತು.

ಈ ಸುದ್ದಿಯನ್ನೂ ಓದಿ : Tahawwur Rana: ಮುಂಬೈ ಅಟ್ಯಾಕ್‌ನ ಆರೋಪಿ ತಹವ್ವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್!

2008 ರಲ್ಲಿ ಮುಂಬೈನ ತಾಜ್‌ ಹೋಟೆಲ್‌ ಮೇಲೆ ನಡೆದ ದಾಳಿಯಲ್ಲಿ 166 ಜನ ಅಮಾಯಕರು ಜೀವ ಬಿಟ್ಟಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಹೊತ್ತಿದ್ದಾನೆ. ದಾಳಿಯ ಹಿಂದಿನ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.