Narendra Modi: ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ
ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿಯನ್ನು ಅನುಮೋದಿಸಿದೆ.


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಖಾಸಗಿ ಕಾರ್ಯದರ್ಶಿಯಾಗಿ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಪ್ರಧಾನಿಯವರ ಕಚೇರಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ, ನಿಧಿ ತಿವಾರಿ ಅವರನ್ನು ಪ್ರಧಾನ ಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿಯನ್ನು ಅನುಮೋದಿಸಿದೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿ ಪ್ರಸ್ತುತ ಉಪ ಕಾರ್ಯದರ್ಶಿಯಾಗಿ ಅಗರ್ವಾಲ್ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಕ್ಷಣದಿಂದ ಜಾರಿಗೆ ಬರುವಂತೆ ಮಾರ್ಚ್ 29 ರಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.
ನಿಧಿ ತಿವಾರಿ ಯಾರು?
ವಾರಣಾಸಿಯ ಮೆಹಮುರ್ಗಂಜ್ ಮೂಲದ ನಿಧಿ ತಿವಾರಿ 2013 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್ ಗಳಿಸಿದ್ದರು. ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರಧಾನಿ ಮೋದಿ 2014ರಿಂದ ಪ್ರತಿನಿಧಿಸುತ್ತಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೊದಲು, ಅವರು ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ (ವಾಣಿಜ್ಯ ತೆರಿಗೆ) ಕೆಲಸ ಮಾಡುತ್ತಿದ್ದರು ಮತ್ತು ಉದ್ಯೋಗದ ಸಮಯದಲ್ಲಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. 2016ರಲ್ಲಿ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಬಿಮಲ್ ಸನ್ಯಾಲ್ ಸ್ಮಾರಕ ಪದಕವನ್ನು ನೀಡಿ ಪುರಸ್ಕರಿಸಲಾಗಿತ್ತು. ತಿವಾರಿ ಅವರು ಜನವರಿ 6, 2023 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 2022ರಲ್ಲಿ ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇರ್ಪಡೆಯಾದರು. ಈ ಹಿಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು. ತಿವಾರಿ ಅವರು ಪ್ರಧಾನಿ ಸಚಿವಾಲಯದಲ್ಲಿ ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Narendra Modi : ಪ್ರಧಾನಿ ನರೇಂದ್ರ ಮೋದಿ ಯೂಟ್ಯೂಬ್‌ನಿಂದ ಪ್ರತೀ ತಿಂಗಳು ಗಳಿಸುವ ಆದಾಯವೆಷ್ಟು? ಕೇಳಿದ್ರೆ ಶಾಕ್ ಆಗ್ತೀರಾ!
ನಿಧಿ ತಿವಾರಿ ಅವರು 2022 ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಅಧೀನ ಕಾರ್ಯದರ್ಶಿಯಾಗಿ ಸೇರಿದರು ಮತ್ತು ಜನವರಿ 6, 2023 ರಿಂದ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನ ಮಂತ್ರಿ ಕಚೇರಿಯಲ್ಲಿ, ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರಿಗೆ ವರದಿ ಮಾಡುವ 'ವಿದೇಶಾಂಗ ಮತ್ತು ಭದ್ರತೆ'ಯಲ್ಲಿ ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.