ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Nimisha Priya: ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌; ಗಲ್ಲು ಶಿಕ್ಷೆ ರದ್ದಾಗಿಲ್ಲ ಎಂದ ವಿದೇಶಾಂಗ ಸಚಿವಾಲಯ

ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ನಿಮಿಷಾ ಪ್ರಿಯಾ ಪ್ರಕರಣ ಸೂಕ್ಷ್ಮ ಪ್ರಕರಣವಾಗಿದೆ. ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿದೆ.

ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದತಿ ಇಲ್ಲ; ವಿದೇಶಾಂಗ ಸಚಿವಾಲಯ

-

Vishakha Bhat Heggar
Vishakha Bhat Heggar Aug 4, 2025 9:54 AM

ನವದೆಹಲಿ: ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ನಿಮಿಷಾ ಪ್ರಿಯಾ ಪ್ರಕರಣ ಸೂಕ್ಷ್ಮ ಪ್ರಕರಣವಾಗಿದೆ. ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಯಮೆನ್ ಗಲ್ಲು ಶಿಕ್ಷೆಯನ್ನು ಮುಂದೂಡಿದೆ, ಆದರೆ ರದ್ದುಪಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ನಾವು ಈ ವಿಷಯವನ್ನು ಗಮನಿಸುತ್ತಿದ್ದೇವೆ, ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ ಎಂದು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಮಾತುಕತೆ ನಡೆಸಲು ಐದು ಸದಸ್ಯರ ನಿಯೋಗವನ್ನು ಯೆಮೆನ್‌ಗೆ ಕಳುಹಿಸುವಂತೆ ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ವಿನಂತಿಯನ್ನು ವಿದೇಶಾಂಗ ಸಚಿವಾಲಯ (MEA) ನಿರಾಕರಿಸಿದೆ. ಗಂಭೀರ ಭದ್ರತಾ ಕಾಳಜಿಗಳು ಮತ್ತು ದೇಶದ ಪ್ರಸ್ತುತ ಆಡಳಿತದೊಂದಿಗೆ ರಾಜತಾಂತ್ರಿಕ ಸಂಬಂಧಗಳ ಕೊರತೆಯನ್ನು ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದ್ದು, ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ಐದು ಸದಸ್ಯರ ನಿಯೋಗಕ್ಕೆ ಯೆಮೆನ್‌ಗೆ ಪ್ರಯಾಣಿಸಲು ಅನುಮತಿ ನಿರಾಕರಿಸಿದೆ.

ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸಾಲಿಯಾರ್ ಹೇಳಿದ್ದರು. ಆದರೆ ವಿದೇಶಾಂಗ ಸಚಿವಾಲಯ ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಹದಗೆಟ್ಟಿರುವ ಭದ್ರತಾ ಪರಿಸ್ಥಿತಿಯಿಂದಾಗಿ ಯೆಮೆನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ರಿಯಾದ್‌ಗೆ ಸ್ಥಳಾಂತರಿಸಲಾಗಿದೆ. ಸನಾದಲ್ಲಿ ಪ್ರಸ್ತುತ ಆಡಳಿತದೊಂದಿಗೆ ಯಾವುದೇ ರಾಜತಾಂತ್ರಿಕ ಸಂಬಂಧವಿಲ್ಲ ಎಂದು ಹೇಳಿದೆ.

ಈ ಸುದ್ದಿಯನ್ನೂ ಓದಿ: Nimisha Priya: ನಿಮಿಷಾ ಪ್ರಿಯಾಗೆ ಮರಣದಂಡನೆ ರದ್ದತಿ ಹೇಳಿಕೆ ಸುಳ್ಳಾ? ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದೇನು?

ಸದ್ಯ ಪ್ರಕರಣದಲ್ಲಿ ಪರಿಹಾರವನ್ನು ತಲುಪುವ ಪ್ರಯತ್ನಗಳ ಭಾಗವಾಗಿ ಕೆಲವು ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 2017ರಲ್ಲಿ ಯೇಮನ್‌ನ ನಾಗರಿಕ ತಲಾಲ್‌ ಅಬ್ದೋ ಮಹ್ದಿ ಹತ್ಯೆ ಮಾಡಿದ ಆರೋಪದ ಮೇಲೆ ನರ್ಸ್‌ ಆಗಿದ್ದ ಕೇರಳದ ಪಾಲಕ್ಕಾಡ್‌ ಜಿಲ್ಲೆಯ ಕೊಲ್ಲಂಗೋಡ್‌ನ ನಿವಾಸಿ ನಿಮಿಷಾ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿತ್ತು. 2017 ರಲ್ಲಿ ಶಿಕ್ಷೆಗೊಳಗಾಗಿ ಸನಾದಲ್ಲಿ ಜೈಲಿನಲ್ಲಿ ಸೆರೆ ವಾಸ ಅನುಭವಿಸುತ್ತಿದ್ದಾರೆ.