ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Modi: ನಿತೀಶ್‌ ಕುಮಾರ್‌ ನೇತೃತ್ವದಲ್ಲಿ ಎನ್‌ಡಿಎ ಮುನ್ನಡೆಯುತ್ತದೆ; ಪ್ರಧಾನಿ ಮೋದಿಯಿಂದ ಘೋಷಣೆ

ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೇತೃತ್ವದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಎಲ್ಲಾ ದಾಖಲೆಗಳನ್ನು ಮುರಿದು ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಧ್ಯಾಹ್ನ ಹೇಳಿದ್ದಾರೆ.

ಪಟನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಎಲ್ಲಾ ದಾಖಲೆಗಳನ್ನು ಮುರಿದು ಮುಂದಿನ (PM Modi) ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಧ್ಯಾಹ್ನ ಹೇಳಿದ್ದಾರೆ. ಬಿಹಾರದಲ್ಲಿ ತಮ್ಮ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ನಿತೀಶ್‌ ಕುಮಾರ್‌ ಮುಂದುವರಿಯಲಿದ್ದಾರೆ ಎಂಬ ಪ್ರಶ್ನೆಗೆ ಸೂಕ್ಷ್ಮವಾಗಿ ಮೋದಿ ಉತ್ತರಿಸಿದಂತೆ ಕಾಣಿಸುತ್ತದೆ. ಆಡಳಿತಾರೂಢ ಮೈತ್ರಿಕೂಟದ ಪ್ರಚಾರದ ಮುಖವಾಗಿ ಜನತಾದಳ ಯುನೈಟೆಡ್ ಮುಖ್ಯಸ್ಥರೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪ್ರಧಾನಿ ಮಾತನಾಡುತ್ತಿರುವುದು ಇದೇ ಮೊದಲು.

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸಲು ಆಡಳಿತ ಪಕ್ಷಗಳು ಹಿಂಜರಿಯುತ್ತಿರುವ ಬಗ್ಗೆ ವಿರೋಧ ಪಕ್ಷದ ಮಹಾಘಟಬಂಧನ್ ಮೈತ್ರಿಕೂಟ ತೀವ್ರ ಟೀಕೆ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗುರುವಾರ ಮಹಾಘಟಬಂಧನ್ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರನ್ನು ತನ್ನ ಸಂಭಾವ್ಯ ಮುಖ್ಯಮಂತ್ರಿ ಎಂದು ದೃಢಪಡಿಸಿದೆ. ಪಾಟ್ನಾದಲ್ಲಿ ಯಾದವ್ ಮತ್ತು ಅವರ ತಂದೆ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿಯಾದ ಒಂದು ದಿನದ ನಂತರ ಕಾಂಗ್ರೆಸ್ ಟ್ರಬಲ್‌ಶೂಟರ್ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Bihar Election: ಏಕಾಂಗಿ ಹೋರಾಟ ಇಲ್ಲ; ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಜೆಎಂಎಂ

ಕೇಂದ್ರ ಚನಾವಣಾ ಆಯೋಗವು ಬಹುಚರ್ಚಿತ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಚುನಾವಣೆ ಕಾವು ಮತ್ತಷ್ಟು ಏರಿದೆ. 6 ನವೆಂಬರ್‌ ರಿಂದ 11 ನವೆಂಬರ್‌ವರೆಗೆ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ನವೆಂಬರ್‌ 14ರಂದು ಫಲಿತಾಂಶ ಘೋಷಣೆಯಾಗಲಿದೆ. 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ 7.43 ಕೋಟಿ ಮತದಾರರಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತದಾರರಿದ್ದರೆ, 3.50 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 14 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದರೇ ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ನಡೆಯಲಿದೆ.