ಪ್ರಧಾನಿ ಮೋದಿ, ಅಮಿತ್ ಶಾ ಭೇಟಿಗಾಗಿ ದೆಹಲಿಗೆ ತೆರಳಿದ ನಿತೀಶ್ ಕುಮಾರ್; ಬಿಹಾರ ರಾಜಕೀಯದಲ್ಲಿ ಬೀಸುತ್ತಾ ಬದಲಾವಣೆ ಗಾಳಿ?
ಹತ್ತನೇ ಅವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ನಿತೀಶ್ ಕುಮಾರ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಲುವಾಗಿ ಭಾನುವಾರ ನವದೆಹಲಿಗೆ ತೆರಳಿದ್ದಾರೆ ಎಂದು ಜನತಾದಳ (ಯುನೈಟೆಡ್)ದ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿತೀಶ್ ಕುಮಾರ್ (ಸಂಗ್ರಹ ಚಿತ್ರ) -
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರನ್ನು ಭೇಟಿ ಮಾಡುವ ಸಲುವಾಗಿ ಬಿಹಾರದ (Bihar) ಮುಖ್ಯಮಂತ್ರಿ (CM) ನಿತೀಶ್ ಕುಮಾರ್ (Nitish Kumar) ಅವರು ಭಾನುವಾರ ದೆಹಲಿಗೆ (Delhi) ತೆರಳಿದ್ದಾರೆ. ಇವರು ಸೋಮವಾರ ಪ್ರಧಾನಿ ಮೋದಿ, ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿ ಬಳಿಕ ಇತರ ಹಿರಿಯ ಬಿಜೆಪಿ ನಾಯಕರನ್ನು ಭೇಟಿಯಾಗಲಿದ್ದಾರೆ. ಅನಂತರ ಸಂಜೆ ಪಾಟ್ನಾಗೆ (patana) ಹಿಂದಿರುಗಲಿದ್ದಾರೆ ಎಂದು ಜನತಾದಳ ಯುನೈಟೆಡ್ ನ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ತನೇ ಅವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ನಿತೀಶ್ ಕುಮಾರ್ ಅವರು ಸೋಮವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಪ್ರಮಾಣವಚನ ಸ್ವೀಕಾರದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ, ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿರುವ ನಿತೀಶ್ ಕುಮಾರ್, ಬಿಹಾರದ ಅಭಿವೃದ್ಧಿಗೆ ಉತ್ತೇಜನ ನೀಡಲು ಏಳು ಪರಿಹಾರ ಕಾರ್ಯಕ್ರಮಗಳ ಕುರಿತು ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.
ಹೂಡಿಕೆ ಮತ್ತು ಕೈಗಾರಿಕೀಕರಣದ ಭರವಸೆಗಳನ್ನು ಈಡೇರಿಸಲು ಅಭಿವೃದ್ಧಿಗಾಗಿ ಸ್ಪಷ್ಟ ಮಾರ್ಗಸೂಚಿಯೊಂದಿಗೆ ಕೇಂದ್ರ-ರಾಜ್ಯ ಸಮನ್ವಯವು ಸುಗಮವಾಗಿರಬೇಕು. ಬಿಹಾರಕ್ಕೆ ಹಣವನ್ನು ನೀಡುವಲ್ಲಿ ಕೇಂದ್ರವು ಉದಾರವಾಗಿದೆ ಮತ್ತು ಹೆಚ್ಚಿನದನ್ನು ನೀಡಬೇಕಾಗುತ್ತದೆ. ಈ ಕುರಿತು ನಿತೀಶ್ ಕುಮಾರ್ ಮಾತುಕತೆ ನಡೆಸಲಿದ್ದಾರೆ ಎಂದರು.
ನಿತೀಶ್ ಕುಮಾರ್ ಅವರ ಸಂಪುಟದಲ್ಲಿ ಈ ಹಿಂದೆ ಸಚಿವರಾಗಿದ್ದ ನಿತಿನ್ ನಬಿನ್ ಅವರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಬಡ್ತಿ ನೀಡಿರುವುದು ಹಾಗು ಸಂಜಯ್ ಸರೋಗಿ ಅವರನ್ನು ಬಿಹಾರ ಬಿಜೆಪಿಯ ಹೊಸ ಮುಖ್ಯಸ್ಥನಾಗಿ ನೇಮಕ ಮಾಡಿರುವುದಕ್ಕೆ ಸಂಬಂಧಿಸಿ ಹಾಗೂ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಮಾರ್ಗಸೂಚಿಯ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಈ ಹಿಂದೆ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಿತೀಶ್ ಕುಮಾರ್ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.