ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pak Ceasefire: ಭಾರತ ಪಾಕ್‌ ಕದನ ವಿರಾಮಕ್ಕೆ ಅವಧಿಯ ಮಿತಿ ಇಲ್ಲ; ಭಾರತೀಯ ಸೇನೆ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನ ನಡುವೆ ಮೇ 18 ರ (India Pak Ceasefire) ಭಾನುವಾರದಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ಮಟ್ಟದ ಮಾತುಕತೆ ನಿಗದಿಯಾಗಿಲ್ಲ ಎಂದು ಭಾರತೀಯ ಸೇನೆ ದೃಢಪಡಿಸಿದೆ ಎಂದು ತಿಳಿದು ಬಂದಿದೆ.

ಭಾರತ ಪಾಕ್‌ ಕದನ ವಿರಾಮಕ್ಕೆ ಅವಧಿಯ ಮಿತಿ ಇಲ್ಲ; ಸೇನೆ

Profile Vishakha Bhat May 18, 2025 3:39 PM

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಮೇ 18 ರ (India Pak Ceasefire) ಭಾನುವಾರದಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ಮಟ್ಟದ ಮಾತುಕತೆ ನಿಗದಿಯಾಗಿಲ್ಲ ಎಂದು ಭಾರತೀಯ ಸೇನೆ ದೃಢಪಡಿಸಿದೆ. ಡಿಜಿಎಂಒಗಳ ಸಂವಾದದ ಸಮಯದಲ್ಲಿ ಕದನ ವಿರಾಮ ನಿಲ್ಲಿಸುವ ಕುರಿತು ಮಾತುಕತೆ ನಡೆದಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಎರಡೂ ದೇಶಗಳ ನಡುವಿನ ಕದನ ವಿರಾಮ ಒಪ್ಪಂದವು ಮೇ 18 ರಂದು ಕೊನೆಗೊಳ್ಳುತ್ತದೆ ಎಂದು ಕೆಲವು ಮಾಧ್ಯಮ ವರದಿಗಳು ಸೂಚಿಸಿದ ನಂತರ ಈ ಸ್ಪಷ್ಟೀಕರಣ ಬಂದಿದೆ.

ಇಂದು ಯಾವುದೇ ಡಿಜಿಎಂಒ ಮಾತುಕತೆ ನಿಗದಿಯಾಗಿಲ್ಲ. ಮೇ 12 ರಂದು ನಡೆದ ಡಿಜಿಎಂಒಗಳ ಸಂವಾದದಲ್ಲಿ ನಿರ್ಧರಿಸಿದಂತೆ ಯುದ್ಧ ವಿರಾಮದ ಮುಂದುವರಿಕೆಗೆ ಸಂಬಂಧಿಸಿದಂತೆ, ಅದಕ್ಕೆ ಯಾವುದೇ ಮುಕ್ತಾಯ ದಿನಾಂಕವಿಲ್ಲ" ಎಂದು ಭಾರತೀಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೇ 10 ರಂದು ನಡೆಸಿರುವ ಮಾತುಕತೆ ವೇಳೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರುಗಳ ನಡುವಿನ ಒಪ್ಪಂದದ ಬಳಿಕ ಎರಡು ರಾಷ್ಟ್ರಗಳು ಭದ್ರತೆ ಮಟ್ಟವನ್ನು ಕಡಿಮೆ ಮಾಡಿ ವಿಶ್ವಾಸ ವರ್ಧನೆಯ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಮೇ 7ರಿಂದ 10ರವರೆಗೆ ನಾಲ್ಕು ದಿನಗಳ ಕಾಲ ನಡೆದ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಅನಂತರ ಉದ್ವಿಗ್ನಗೊಂಡಿದ್ದ ಸಂಘರ್ಷ ಪರಿಸ್ಥಿತಿಯನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಮೇ 10ರಂದು ಒಪ್ಪಂದ ಮಾಡಿಕೊಂಡಿತ್ತು.

ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಒಪ್ಪಂದ ಮಾಡಿಕೊಂಡರೂ ಪಾಕಿಸ್ತಾನವು ಒಪ್ಪಂದ ಜಾರಿಯಾದ ಕೆಲವೇ ಗಂಟೆಗಳಲ್ಲಿ ಅದನ್ನು ಉಲ್ಲಂಘಿಸಿತು. ಬಳಿಕ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಪಾಕಿಸ್ತಾನ ಶಾಂತಿಗಾಗಿ ಮಾತುಕತೆ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದರು. ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿದ ಬಳಿಕ ಭಾರತೀಯ ಸೇನೆಯು ಉಗ್ರರನ್ನು ಬೇಟೆಯಾಡಲು ಪ್ರಾರಂಭಿಸಿತ್ತು. ಮೇ 7 ಮತ್ತು 8ರಂದು ಮಧ್ಯರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಲು ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ನಡೆಸಿತು. ಇದರೊಂದಿಗೆ ಭಾರತವು ಬಲವಾದ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿತು. ಅದರಲ್ಲಿ ಮುಖ್ಯವಾಗಿ ಪಾಕಿಸ್ತಾನದೊಂದಿಗಿನ ದಶಕಗಳ ಕಾಲದಿಂದ ಇದ್ದ ಸಿಂಧೂ ಜಲ ಒಪ್ಪಂದ ರದ್ದು ಮತ್ತು ಪಾಕಿಸ್ತಾನ ಪ್ರಜೆಗಳ ವೀಸಾ ರದ್ದು ಸೇರಿದೆ.

ಈ ಸುದ್ದಿಯನ್ನೂ ಓದಿ: Javed Akhtar: ನರಕ ಮತ್ತು ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದರೆ ನಾನು ... ಇದನ್ನ ಆಯ್ಕೆ ಮಾಡಿಕೊಳ್ಳುತ್ತೇನೆ ; ಜಾವೇದ್‌ ಅಖ್ತರ್‌ ಹೇಳಿದ್ದೇನು?

ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ಭಾರತ ಹೇಳಿದೆ. ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂದು ಪಾಕ್ ಗೆ ಸ್ಪಷ್ಟ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಕ್ರಮವನ್ನು ಸ್ವಲ್ಪ ಸಮಯ ನಿಲ್ಲಿಸಿದೆ ಮತ್ತು ಅದರ ಮುಂದಿನ ಕ್ರಮಗಳು ಪಾಕಿಸ್ತಾನದ ಕ್ರಮಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.