ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿಪಕ್ಷಗಳಿಗೆ ಸವಾಲ್‌; ನೀಟ್‌ ವಿವಾದದ ಕುರಿತು ಚರ್ಚೆಗೆ ಆಹ್ವಾನ ನೀಡಿದ ಕಿರಣ್‌ ರಿಜುಜು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಕುರಿತು ಯಾವುದೇ ಪೂರ್ವಭಾವಿ ಷರತ್ತುಗಳನ್ನು ವಿಧಿಸದೆ ಚರ್ಚೆಯಲ್ಲಿ ಭಾಗವಹಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ರಿಜಿಜು, ಸರ್ಕಾರವು ಚರ್ಚೆಯನ್ನು ತಕ್ಷಣವೇ ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET Exam) ವಿಷಯದ ಕುರಿತು ಯಾವುದೇ ಪೂರ್ವಭಾವಿ ಷರತ್ತುಗಳನ್ನು ವಿಧಿಸದೆ ಚರ್ಚೆಯಲ್ಲಿ ಭಾಗವಹಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijuju) ಗುರುವಾರ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ರಿಜಿಜು, ಸರ್ಕಾರವು ಚರ್ಚೆಯನ್ನು ತಕ್ಷಣವೇ ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಹೇಳಿದರು ಮತ್ತು ಚರ್ಚೆ ನಡೆಯುವ ಮೊದಲು ಯಾವುದೇ ಷರತ್ತುಗಳ ಅಗತ್ಯವನ್ನು ಪ್ರಶ್ನಿಸಿದರು.

"ನಾನು ನಿಮ್ಮನ್ನು ವಿನಂತಿಸುತ್ತೇನೆ, ಷರತ್ತುಗಳನ್ನು ಹಾಕಬೇಡಿ. ಪೂರ್ವಭಾವಿ ಷರತ್ತುಗಳಿಲ್ಲದೆ ಚರ್ಚಿಸೋಣ. ನಾವು ಇಂದೇ ಪ್ರಾರಂಭಿಸಬಹುದು. ನಾವು ಇಂದಿನಿಂದಲೇ ಚರ್ಚೆಯನ್ನು ಪ್ರಾರಂಭಿಸಬಹುದು" ಕೇಂದ್ರ ಸಚಿವರು ವಿಪಕ್ಷಗಳಿಗೆ ಹೇಳಿದ್ದಾರೆ. ವಿವಾದಕ್ಕೆ ಕೇಂದ್ರದ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ರಿಜಿಜು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ದೇಶಕ್ಕೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಎನ್ ಡಿಎ ಸಂಸದೀಯ ಸಭೆಯಲ್ಲಿ ಮಂಗಳವಾರ ಮಾತನಾಡಿದ ಪ್ರಧಾನಿ ಮೋದಿಯವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಯಲಾದ ತಕ್ಷಣವೇ 13 ಜನರನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಆಕಾಂಕ್ಷಿಗಳ ಭವಿಷ್ಯದ ಸುರಕ್ಷತೆ ದೃಷ್ಟಿಯಿಂದ ಮರುಪರೀಕ್ಷೆ ನಡೆಸಿ ಫಲಿತಾಂಶ ನೀಡಲಾಗಿದೆ, ಇದರಲ್ಲಿ ಯಾವುದೇ ವಿಳಂಬ ಮಾಡಿಲ್ಲ ಎಂಬುದಾಗಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದರು.

ಪ್ರತಿಭಟನೆ ಜೋರಾದ ಬೆನ್ನಲ್ಲೇ ಇಂದು, ಪ್ರಧಾನಿ ನರೇಂದ್ರ ಮೋದಿ, ವಿದ್ಯಾರ್ಥಿಗಳ ಭವಿಷ್ಯದ ಕುರಿತು ಸರ್ಕಾರದ ದೃಢ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ವಿಧಿಸಲು ದೇಶಾದ್ಯಂತ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು (Fast-Track Courts) ಸ್ಥಾಪಿಸುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ನಮ್ಮ ಯುವಜನರ ಕಲ್ಯಾಣ ಮತ್ತು ಭವಿಷ್ಯ ಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಯುವಕರ ಭವಿಷ್ಯದ ಜೊತೆ ಆಟವಾಡಲು ಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂಬ ಭರವಸೆಯನ್ನು ನೀಡಿದ್ದಾರೆ.

ದೆಹಲಿ ಪ್ರತಿಭಟನೆ ಕಾವಿನ ನಡುವೆ ನೀಟ್‌ ಸಂಪೂರ್ಣ ರದ್ದುಗೊಳಿಸಬೇಕು ಎಂದ ತಮಿಳುನಾಡು ಸಿಎಂ ವಿಜಯ್

ವಿಪಕ್ಷಗಳ ಒತ್ತಡ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿದ್ದು, ಈ ವಿವಾದವನ್ನು ನಿಭಾಯಿಸುವಲ್ಲಿ ವಿಫಲವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿವೆ.

Vishakha Bhat Heggar

View all posts by this author