ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Assault: ಕೊಲ್ಕತ್ತಾ ಅತ್ಯಾಚಾರ ಕೇಸ್‌ನಲ್ಲಿ ಭಾರೀ ಟ್ವಿಸ್ಟ್‌! ಸಂತ್ರಸ್ತೆ ತಂದೆಯಿಂದ ಅಚ್ಚರಿ ಹೇಳಿಕೆ!

ಕಲ್ಕತ್ತಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ-ಸಿ) ನಲ್ಲಿ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂದೆ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ. ಅತ್ಯಾಚಾರವೇ ನಡೆದಿಲ್ಲ ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ. ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತನ್ನ ಮಗಳು ಹೇಳಿದ್ದಾಳೆಂದು ಎಂದು ಸಂತ್ರಸ್ತೆಯ ತಂದೆ ಹೇಳಿಕೆ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ನನಗೆ ಹೇಳಿದರು.

ರೇಪ್‌ ಕೇಸ್‌ನಲ್ಲಿ ಭಾರೀ ಟ್ವಿಸ್ಟ್‌! ಸಂತ್ರಸ್ತೆ ತಂದೆ ಹೇಳಿದ್ದೇನು?

Profile Vishakha Bhat Jul 12, 2025 5:23 PM

ಕೋಲ್ಕತ್ತಾ: ಕಲ್ಕತ್ತಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ-ಸಿ) ನಲ್ಲಿ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂದೆ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ. ಅತ್ಯಾಚಾರವೇ ನಡೆದಿಲ್ಲ ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ. ಅಂತಹದ್ದೇನೂ ನಡೆದಿಲ್ಲ, ತಮ್ಮ ಮಗಳು ಆಟೋ ರಿಕ್ಷಾದಿಂದ ಬಿದ್ದಿದ್ದಾಳೆ ಎಂದು ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ತಂದೆ, ಶುಕ್ರವಾರ ರಾತ್ರಿ 9:34 ಕ್ಕೆ ತಮ್ಮ ಮಗಳು ಆಟೋದಿಂದ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ ಎಂದು ಕರೆ ಮಾಡಿ ತಿಳಿಸಿದ್ದರು. ಆಕೆಯನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿದೆ ಮತ್ತು ಪೊಲೀಸರು ಆಕೆಯನ್ನು ರಕ್ಷಿಸಿ ಅಲ್ಲಿಗೆ ಕರೆದೊಯ್ದರು ಎಂದು ಹೇಳಿದರು.

ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತನ್ನ ಮಗಳು ಹೇಳಿದ್ದಾಳೆಂದು ಎಂದು ಸಂತ್ರಸ್ತೆಯ ತಂದೆ ಹೇಳಿಕೆ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ನನಗೆ ಹೇಳಿದರು. ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಪೊಲೀಸರು ಕೇಳಿದಾಗ ಆಕೆ ಏನೂ ಹೇಳಲಿಲ್ಲ. ನಾನು ನನ್ನ ಮಗಳ ಜೊತೆ ಮಾತನಾಡಿದ್ದೇನೆ. ಯಾರೂ ಅವಳನ್ನು ಹಿಂಸಿಸಿಲ್ಲ ಅಥವಾ ಅವಳೊಂದಿಗೆ ಅನುಚಿತವಾಗಿ ವರ್ತಿಸಿಲ್ಲ ಎಂದು ಅವಳು ಹೇಳಿದಳು. ನನಗೆ ನನ್ನ ಮಗಳು ಮರಳಿ ಬಂದಿದ್ದಾಳೆ, ಅವಳು ಸಾಮಾನ್ಯಳಾಗಿದ್ದಾಳೆ. ಬಂಧಿಸಲ್ಪಟ್ಟ ವ್ಯಕ್ತಿಯೊಂದಿಗೆ ಅವಳಿಗೆ ಯಾವುದೇ ಸಂಬಂಧವಿಲ್ಲ. ನನಗೆ ಅವಳೊಂದಿಗೆ ಹೆಚ್ಚು ಹೊತ್ತು ಮಾತನಾಡಲು ಸಾಧ್ಯವಾಗಿಲ್ಲ. ಅವಳು ನಿದ್ರಿಸುತ್ತಿದ್ದಾಳೆ. ಅವಳು ಎಚ್ಚರವಾದ ನಂತರ ನಾನು ಅವಳೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Physical Abuse: ತುತ್ತು ಕೊಟ್ಟು ಸಾಕಿದ ಅಜ್ಜಿ ಅಂತಾನು ನೋಡ್ಲಿಲ್ಲಈ ನೀಚ ... ಪಾಪಿ ಮೊಮ್ಮಗನಿಂದಲೇ ಅತ್ಯಾಚಾರ!

ನಿಮ್ಮ ಮಗಳು ಆಘಾತಕ್ಕೊಳಗಾಗಿದ್ದಾಳೆಯೇ ಎಂದು ವರದಿಗಾರರೊಬ್ಬರು ಕೇಳಿದಾಗ, "ಇಲ್ಲ, ಅವಳು ಸಂಪೂರ್ಣವಾಗಿ ಆರೋಗ್ಯವಾಗಿದ್ದಾಳೆ ಎಂದು ಅವರು ಹೇಳಿದ್ದರು. ಈ ಹಿಂದಿನ ವರದಿಗಳ ಪ್ರಕಾರ, ಬಿಸಿನೆಸ್ ಸ್ಕೂಲ್‌ನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಹೇಳಲಾಗಿತ್ತು. ಹರಿದೇವಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ದಾಖಲಿಸಿದ ದೂರಿನ ಆಧಾರದ ಮೇಲೆ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿತ್ತು. ಮಾದಕ ವಸ್ತುವನ್ನು ನೀಡಿ ಯುವತಿಗೆ ಪ್ರಜ್ಞೆ ತಪ್ಪಿಸಿ ನಂತರ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದು ಬಂದಿತ್ತು. ಇದೀಗ ಯುವತಿ ತಂದೆಯೇ ಈ ಆರೋಪವನ್ನು ಅಲ್ಲಗಳೆದಿದ್ದಾರೆ.