ನವದೆಹಲಿ, ಅ.11: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಾದ್ಯಂತ ವಿಧಿಸಲಾಗಿದ್ದ ನಿರ್ಬಂಧಗಳ ಕುರಿತು ಸುಪ್ರೀಂ ಕೋರ್ಟ್ ಭಾನುವಾರ (ಅ.11) ವಿಶೇಷ ವಿಚಾರಣೆ ನಡೆಸಿತು. ಈ ವೇಳೆ, ಮೆಟ್ರೋ ಮತ್ತು ರೈಲು ಸೇವೆಗಳನ್ನು ಎಂದಿನಂತೆ ಪುನರಾರಂಭಿಸಬೇಕು ಹಾಗೂ ದೆಹಲಿಯಲ್ಲಿ ಯಾವುದೇ ಅಕ್ರಮ ಬಂಧನಗಳು ನಡೆಯಬಾರದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
ಶಾಂತಿಯುತವಾಗಿ ಮತ್ತು ನಿರಾಯುಧರಾಗಿ ಪ್ರತಿಭಟನೆ ನಡೆಸುವವರನ್ನು ಕಾನೂನುಬದ್ಧ ಪ್ರಕ್ರಿಯೆ ಅನುಸರಿಸದೆ ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ (ಮೇ.10) ನಡೆದ ಪ್ರತಿಭಟನೆಗೂ ಮುನ್ನ, ಸಾಮೂಹಿಕ ಬಂಧನಗಳು, ಜನರ ಸಂಚಾರಕ್ಕೆ ನಿರ್ಬಂಧಗಳು, ಇಂಟರ್‌ನೆಟ್ ಸೇವೆಗಳ ಸ್ಥಗಿತ ಹಾಗೂ ಸಾರಿಗೆ ನಿರ್ಬಂಧಗಳ ಕುರಿತು ಅಕ್ಟೋಬರ್ 9ರಂದು ನೀಡಿದ್ದ ನ್ಯಾಯಾಲಯದ ಆದೇಶವನ್ನು ಪಾಲಿಸದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಭಾನುವಾರ (ಅ.11) ನಡೆಸಿತು.
ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ವಿಶೇಷ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಿದ ಬಳಿಕ ಮೇಲಿನ ನಿರ್ದೇಶನಗಳನ್ನು ನೀಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ (ಅ.10) ನಡೆದ ಪ್ರತಿಭಟನೆಗೂ ಮುನ್ನ, ಸಾಮೂಹಿಕ ಬಂಧನಗಳು, ಜನರ ಸಂಚಾರಕ್ಕೆ ನಿರ್ಬಂಧಗಳು, ಇಂಟರ್‌ನೆಟ್ ಸೇವೆಗಳ ಸ್ಥಗಿತ ಹಾಗೂ ಸಾರಿಗೆ ನಿರ್ಬಂಧಗಳ ಕುರಿತು ಅಕ್ಟೋಬರ್ 9ರಂದು ನೀಡಿದ್ದ ನ್ಯಾಯಾಲಯದ ಆದೇಶವನ್ನು ಪಾಲಿಸದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಭಾನುವಾರ (ಅ.11) ನಡೆಸಿತು.
ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ವಿಶೇಷ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಿದ ಬಳಿಕ ಈ ನಿರ್ದೇಶನಗಳನ್ನು ನೀಡಿದೆ. ನ್ಯಾಯಾಲಯದ ನಿರ್ದೇಶನಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗಿದೆ ಎಂದು ಹಿರಿಯ ವಕೀಲರು ವಾದಿಸಿದರು.
“ಮೆಟ್ರೋ ರೈಲು ಸೇವೆಗಳು ಸ್ಥಗಿತಗೊಂಡಿದ್ದವು. ನವದೆಹಲಿ ಮತ್ತು ನಿಜಾಮುದ್ದೀನ್ ರೈಲು ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಸಂಚಾರಕ್ಕೆ ಸಂಬಂಧಿಸಿದ ಯಾವುದೇ ಮುನ್ಸೂಚನೆಗಳನ್ನು ನೀಡಿರಲಿಲ್ಲ. ಅಲ್ಲದೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದ ಪ್ರದೇಶದ ಹೊರಗೂ ಹೆಚ್ಚಿನ ಸಂಖ್ಯೆಯ ಜನರಿಗೆ ಅನಗತ್ಯ ಕಿರುಕುಳ ನೀಡಲಾಗಿದ್ದು, ಅಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು” ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್‌ನ ಐದು ಪ್ರಮುಖ ನಿರ್ದೇಶನಗಳು
- ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಂವಿಧಾನದ 19(2)ನೇ ವಿಧಿಯಡಿ ಅಗತ್ಯ ನಿರ್ಬಂಧಗಳನ್ನು ವಿಧಿಸುವ ಸಂದರ್ಭಗಳನ್ನು ಹೊರತುಪಡಿಸಿ, ಮೆಟ್ರೋ ಮತ್ತು ರೈಲು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು.
- ಸಂಚಾರ ನಿಯಮಗಳಿಗೆ ಒಳಪಟ್ಟು ನಗರದಾದ್ಯಂತ ಜನರ ಮುಕ್ತ ಸಂಚಾರಕ್ಕೆ ಅವಕಾಶ ನೀಡಬೇಕು. ಕಾನೂನು ಸುವ್ಯವಸ್ಥೆ ಹಾಗೂ ಇತರ ಸಂಚಾರ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ರಸ್ತೆ ತಡೆಗಳಿಗೆ ಹಾಕಿರುವ ಬ್ಯಾರಿಕೇಡ್‌ಗಳನ್ನು ತಕ್ಷಣವೇ ಮರುಪರಿಶೀಲಿಸಬೇಕು.
- ಇಂಟರ್‌ನೆಟ್ ಸೇವೆಗಳಿಗೆ ಯಾವುದೇ ಅಡ್ಡಿ ಉಂಟುಮಾಡಬಾರದು.
- ಕಾನೂನಿಗೆ ಅನುಗುಣವಾಗಿ ನಗರದಾದ್ಯಂತ ಜನರು ಸುಗಮವಾಗಿ ಸಂಚರಿಸಲು ಅವಕಾಶ ನೀಡಬೇಕು.
- ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯನ್ನು ಅನುಸರಿಸದೆ ಯಾರನ್ನೂ ವಶಕ್ಕೆ ಪಡೆಯಬಾರದು. ವಿಶೇಷವಾಗಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದ ಹೊರಗೆ ಶಾಂತಿಯುತವಾಗಿ, ನಿರಾಯುಧರಾಗಿ ಸಭೆ ಸೇರುವ ಜನರನ್ನು ವಶಕ್ಕೆ ಪಡೆಯುವಂತಿಲ್ಲ.
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ ಶನಿವಾರ (ಅ. 10) ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ಇದಕ್ಕೆ ಒಂದು ದಿನ ಮುಂಚಿತವಾಗಿ, ಅಂದರೆ ಶುಕ್ರವಾರ (ಅ.9), ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅಲ್ಲದೆ, ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ಕಡಿಮೆ ಮಾಡಲು ಮೆಟ್ರೋ ಮತ್ತು ರೈಲು ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಬದಲು, ಅವುಗಳ ಸಂಚಾರವನ್ನು ನಿಯಂತ್ರಿಸುವಂತೆ ನಿರ್ದೇಶನ ನೀಡಿದ್ದರು.
ಅಕ್ಟೋಬರ್ 10 ರಂದು, ಸುಮಾರು 41,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯನ್ನು ಕೋಟೆಯಂತೆ ಬಿಗಿ ಭದ್ರತೆಯಿಂದ ಸುತ್ತುವರಿಯಲಾಯಿತು. ಅಭೂತಪೂರ್ವ ನಿರ್ಬಂಧಗಳನ್ನು ವಿಧಿಸಿ, ಉದ್ದೇಶಿತ ಪ್ರತಿಭಟನೆಯನ್ನು ತಡೆಯಲಾಯಿತು. ಈ ಸಂದರ್ಭದಲ್ಲಿ ಸುಮಾರು 7,000 ಜನರನ್ನು ವಶಕ್ಕೆ ಪಡೆಯಲಾಗಿದ್ದು, ದೆಹಲಿಯ ಹಲವು ಪ್ರದೇಶಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.