ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಕೇಸ್‌; ಆರೋಪಿಗಳ ಜೊತೆ ಸೋನಿಯಾ ಗಾಂಧಿ ನಂಟು? ಕೇರಳ ಸಿಎಂ ಹೊಸ ಬಾಂಬ್‌

Sabarimala Gold Theft: ಶಬರಿಮಲೆ ಚಿನ್ನ ಮತ್ತು ವಿಗ್ರಹ ಕಳ್ಳಸಾಗಣೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. ದೇವಾಲಯದ ಚಿನ್ನ ನಾಪತ್ತೆ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಮತ್ತು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಂಟಿದೆ ಎಂದು ಅವರು ಆರೋಪಿಸಿದರು.

ಸಿಎಂ ಪಿಣರಾಯಿ ವಿಜಯನ್‌

ತಿರುವನಂತಪುರಂ: ಶಬರಿಮಲೆ ಚಿನ್ನ ಮತ್ತು ವಿಗ್ರಹ ಕಳ್ಳಸಾಗಣೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ (Pinarayi Vijayan) ಪಿಣರಾಯಿ ವಿಜಯನ್ (Sabarimala Gold Theft) ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. ದೇವಾಲಯದ ಚಿನ್ನ ನಾಪತ್ತೆ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಮತ್ತು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ನಂಟಿದೆ ಎಂದು ಅವರು ಆರೋಪಿಸಿದರು. ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ನಿಂದ ಕಠಿಣ ಪರೀಕ್ಷೆಯನ್ನು ಎದುರಿಸುತ್ತಿರುವ ಎಡ ಪ್ರಜಾಸತ್ತಾತ್ಮಕ ರಂಗ ಮೈತ್ರಿಕೂಟದ ಸಿಪಿಎಂ ನಾಯಕ, ಗೋವರ್ಧನ್ ಅವರು ಸೋನಿಯಾ ಗಾಂಧಿಯವರಿಂದ ಉಡುಗೊರೆಯನ್ನು ಸ್ವೀಕರಿಸುತ್ತಿರುವ ಮತ್ತು ಸೋನಿಯಾ ಗಾಂಧಿಯವರೊಂದಿಗೆ ಪೊಟ್ಟಿಯವರ ಮತ್ತೊಂದು ಫೋಟೊವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ.

ಕೇರಳದ ಮಾಜಿ ಸಿಎಂ ಕರುಣಾಕರನ್‌, ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೋನಿಯಾ ಗಾಂಧಿ ಅಪಾಯಿಂಟ್ಮೆಂಟ್‌ ಸಿಕ್ಕಿರಲಿಲ್ಲ. ಆದರೆ ಉನ್ನಿಕೃಷ್ಣನ್‌ ಪೊಟ್ಟಿಗೆ ಅಪಾಯಿಂಟ್ಮೆಂಟ್‌ ಸಿಕ್ಕಿದೆಯೇ? ಸೋನಿಯಾ ಹೆಚ್ಚಿನ ಭದ್ರತೆಯಿರುವ ನಾಯಕಿ. ಆರೋಪಿಗೆ ಹೇಗೆ ಅವರ ಭೇಟಿ ಸಾಧ್ಯವಾಯಿತು. ಕಾಂಗ್ರೆಸ್‌ ನಾಯಕರಿಗೂ ಗೊತ್ತು ಅವರ ಭೇಟಿ ಎಷ್ಟು ಕಷ್ಟ ಎನ್ನುವುದು. ಹಾಗಿದ್ದರೆ ಆರೋಪಿಗೆ ಹೇಗೆ ಸಿಕ್ಕಿತು ಅವರ ಭೇಟಿ ಅವಕಾಶ?’ ಎಂದು ಪ್ರಶ್ನಿಸಿದ್ದಾರೆ.

ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನವು ಹಲವಾರು ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಳೆದುಕೊಂಡಿರುವ ಬಗ್ಗೆ ಭಾರಿ ರಾಜಕೀಯ ವಿವಾದದ ಕೇಂದ್ರಬಿಂದುವಾಗಿದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ದೇವಸ್ಥಾನವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿಯ ಇಬ್ಬರು ಅಧ್ಯಕ್ಷರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

ಇತ್ತೀಚೆಗೆ, ಸ್ಮಾರ್ಟ್ ಕ್ರಿಯೇಷನ್ಸ್‌ನ ಪಂಕಜ್ ಭಂಡಾರಿ ಮತ್ತು ಬಳ್ಳಾರಿ ಮೂಲದ ಆಭರಣ ವ್ಯಾಪಾರಿ ಗೋವರ್ಧನ್ ದೇವಾಲಯದ ಕಲಾಕೃತಿಗಳಿಂದ ಚಿನ್ನವನ್ನು ಕದಿಯುವ ಪಿತೂರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿದೆ. 2019ರಲ್ಲಿ, ಈ ಹಿಂದೆ ಶಬರಿಮಲೆಯಲ್ಲಿ ಅರ್ಚಕನಾಗಿ ಸೇವೆ ಸಲ್ಲಿಸಿದ್ದ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿ ವಿಗ್ರಹಗಳ ಚಿನ್ನಲೇಪಿತ ಕವಚಗಳ ಮರುಲೇಪನ ಕಾರ್ಯ ವಹಿಸಿಕೊಂಡಿದ್ದ.

Sabarimala Gold Theft: ಶಬರಿಮಲೆ ದೇಗುಲದಲ್ಲಿ ಚಿನ್ನಾಭರಣ ಕಳವು; ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಅರೆಸ್ಟ್‌

ಮರುಲೇಪನದ ಬಳಿಕ ಅವುಗಳನ್ನು ಮರಳಿಸುವಾಗ ಸುಮಾರು 4 ಕೆಜಿ ಚಿನ್ನದಲ್ಲಿ ಕಡಿಮೆ ಆಗಿತ್ತು. ಈ ವೇಳೆ, ಈ ಪೈಕಿ 400 ಗ್ರಾಂ ಚಿನ್ನವನ್ನು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಪೊಟ್ಟಿ ಹಸ್ತಾಂತರಿಸಿದ್ದ ಎಂದು ಆರೋಪಿಸಲಾಗಿದೆ. ಹೀಗಾಗಿ ಬಳ್ಳಾರಿ ಚಿನ್ನದ ಉದ್ಯಮಿ ಗೋವರ್ಧನ್‌ರ ಬಂಧನವಾಗಿದೆ. ಈ ಹಿಂದೆ ಗೋವರ್ಧನ್‌ ಅವರ ಬಳ್ಳಾರಿ ಚಿನ್ನದಂಗಡಿ ಮೇಲೆ ಕೇರಳ ಎಸ್‌ಐಟಿ ದಾಳಿ ಮಾಡಿತ್ತು. ಮರುಲೇಪನ ಮಾಡಿದ ಚೆನ್ನೈ ಮೂಲದ ಸ್ಮಾರ್ಟ್‌ ಕ್ರಿಯೇಶನ್ಸ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಂಕಜ್‌ ಭಂಡಾರಿ ಅವರ ಕಂಪನಿಯಲ್ಲಿ ಕವಚಗಳ ಎಲೆಕ್ಟ್ರೋಪ್ಲೇಟಿಂಗ್‌ ಮಾಡಲಾಗಿತ್ತು. ಈಗಾಗಲೇ ಕೇಸಲ್ಲಿ ಪೊಟ್ಟಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.