ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ: ವ್ಯಕ್ತಿಯ ಬಂಧನ

ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ: ವ್ಯಕ್ತಿಯ ಬಂಧನ

ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ: ವ್ಯಕ್ತಿಯ ಬಂಧನ

Profile Vishwavani News Aug 15, 2022 3:48 PM
image-1c5c1cc8-f9c7-47db-a7f4-8956dc9596c6.jpg
image-dcdb0569-f076-406d-bfe5-65b233c7e79f.jpg
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀ ಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಲ್ಯಾಂಡ್‌ಲೈನ್ ಸಂಖ್ಯೆಗೆ ಅಫ್ಜಲ್ ಎಂದು ಗುರುತಿಸ ಲಾದ ವ್ಯಕ್ತಿ ಬೆದರಿಕೆ ಕರೆಗಳನ್ನು ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಕರೆ ಮಾಡಿದ ಫೋನ್ ಸಂಖ್ಯೆ ಯನ್ನು ಗುರುತಿಸಿದ ನಂತರ ಶಂಕಿತನನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ಮಾನಸಿಕವಾಗಿ ಅಸ್ಥಿರನಾಗಿದ್ದ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿ ಮಾಡಿದೆ. ಅಪರಿಚಿತ ವ್ಯಕ್ತಿಯಿಂದ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆಯ ಒಟ್ಟು 8 ಕರೆಗಳನ್ನು ಮಾಡಲಾಗಿತ್ತು. ಕರೆ ಮಾಡಿದ ವ್ಯಕ್ತಿ ತಾನು ನಂಬರ್ 1 ಉಗ್ರಗಾಮಿ ಎಂದು ಕರೆದುಕೊಂಡಿದ್ದಾನೆ. ಕಳೆದ ತಿಂಗಳು ಮುಂಬೈನಲ್ಲಿರುವ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಭದ್ರತೆಯನ್ನು ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.