Pahalgam Terror Attack: ಓರ್ವ ಪ್ರವಾಸಿಗ ಸಾವು, ದಾಳಿ ಹೊಣೆ ಹೊತ್ತ ಲಷ್ಕರ್ ಫ್ರಂಟ್ ಟಿಆರ್‌ಎಫ್
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಪ್ರವಾಸಿಗ ಮೃತಪಟ್ಟಿದ್ದರೆ, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.


ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಪ್ರವಾಸಿಗ ಮೃತಪಟ್ಟಿದ್ದರೆ, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಗಾಯಾಳುಗಳನ್ನು ಅನಂತ್‌ನಾಗ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದಾಳಿ ನಡೆದ ಸ್ಥಳವನ್ನು ತಲುಪಲು ಪ್ರಯತ್ನಿಸುತ್ತಿವೆ ಆದರೆ ಕಠಿಣ ಭೂಪ್ರದೇಶದಿಂದಾಗಿ ತೊಂದರೆಗಳನ್ನು ಎದುರಿಸುತ್ತಿವೆ. ಇನ್ನು ಲಷ್ಕರ್-ಎ-ತೈಬಾದ ಒಂದು ಶಾಖೆಯು ಘಟನೆಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.
Terrorists attack tourists in Pahalgam, resulting in death of one and injuring 5 others. KRF strongly condemns this cowardly act of violence targeting innocent tourists. Security forces are on job to apprehend perpetrators. #PahalgamAttack @ChinarcorpsIA @JmuKmrPolice pic.twitter.com/WNeUywNv04
— Kashmir Rights Forum🍁 (@kashmir_right) April 22, 2025
ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ.
ಭಯೋತ್ಪಾದಕ ದಾಳಿಯ ನಂತರ, ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸುತ್ತಾರೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ದಾಳಿಯನ್ನು ಖಂಡಿಸಿ "ನನಗೆ ನಂಬಲಾಗದಷ್ಟು ಆಘಾತವಾಗಿದೆ. ಪ್ರವಾಸಿಗರ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ನಾನು ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದರು.
ಈ ಸುದ್ದಿಯನ್ನೂ ಓದಿ: Terrorist Arrest: ಮಣಿಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 6 ಉಗ್ರರು, 3 ಕಳ್ಳಸಾಗಣೆದಾರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, "ಪಹಲ್ಗಾಮ್‌ನಲ್ಲಿ ದಾಖಲಾಗಿರುವವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡ ಪ್ರವಾಸಿಗರನ್ನು ಅನಂತನಾಗ್‌ನ ಜಿಎಂಸಿಗೆ ಸ್ಥಳಾಂತರಿಸಲಾಗಿದೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.