ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

"ಕರ್ನಾಟಕವನ್ನು ದೇವರು ಮಾತ್ರ ಉಳಿಸಬೇಕು:"; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಹೆಚ್.ಡಿ. ದೇವೇಗೌಡ ವಾಗ್ದಾಳಿ

ಕೈಗಾರಿಕಾ ವಲಯದ ಬಗ್ಗೆ ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರ ತೋರುತ್ತಿರುವ 'ನಿರ್ಲಕ್ಷ್ಯ'ವನ್ನು ಟೀಕಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು, ಸದ್ಯದ ಪರಿಸ್ಥಿತಿಯನ್ನು ನೋಡಿದರೆ 'ಕರ್ನಾಟಕವನ್ನು ದೇವರೇ ಕಾಪಾಡಬೇಕು" ಎಂದು ರಾಜ್ಯಸಭೆಯಲ್ಲಿ ಕಿಡಿ ಕಾರಿದ್ದಾರೆ. ರಾಜ್ಯಸಭೆಯಲ್ಲಿ ವಿನಿಯೋಗ ಮಸೂದೆಯ ಮೇಲಿನ ಚರ್ಚೆಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಹಾಗೂ ಹೆಚ್‌ ಡಿ ದೇವೆಗೌಡ

ನವದೆಹಲಿ: ಕೈಗಾರಿಕಾ ವಲಯದ ಬಗ್ಗೆ ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರ ತೋರುತ್ತಿರುವ 'ನಿರ್ಲಕ್ಷ್ಯ'ವನ್ನು ಟೀಕಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Deve Gowda) ಸದ್ಯದ ಪರಿಸ್ಥಿತಿಯನ್ನು ನೋಡಿದರೆ 'ಕರ್ನಾಟಕವನ್ನು ದೇವರೇ ಕಾಪಾಡಬೇಕು" ಎಂದು ರಾಜ್ಯಸಭೆಯಲ್ಲಿ ಕಿಡಿ ಕಾರಿದ್ದಾರೆ. ರಾಜ್ಯದ ಕೈಗಾರಿಕಾ ವಲಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೇರವಾಗಿ ಹಸ್ತಕ್ಷೇಪ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ವಿನಿಯೋಗ ಮಸೂದೆಯ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ ರಾಜ್ಯದ ಕಾಂಗ್ರೆಸ್ ಸರ್ಕಾರವು ಕೈಗಾರಿಕಾ ವಲಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕಕ್ಕಾಗಿ ಏನಾದರೂ ಮಾಡಿ. ಈ ಕರ್ನಾಟಕ ಸರ್ಕಾರದ ಬಗ್ಗೆ ಚಿಂತಿಸಬೇಡಿ" ,ಕರ್ನಾಟಕದ ಕೈಗಾರಿಕೆಗಳನ್ನು ಉಳಿಸಲು ನೀವೇ ಏನಾದರೂ ಮಾಡಿ ಎಂದು ಮೋದಿಯವನ್ನರು ವಿನಂತಿಸಿಕೊಂಡಿದ್ದಾರೆ.

ತಮ್ಮ ಪುತ್ರ ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಿದರು. ಅವರು ಅಧಿಕಾರದಿಂದ ಕೆಳಗಿಳಿದ ನಂತರ, ಕೇವಲ ಒಂದು ಸಣ್ಣ ಘಟಕ ಮಾತ್ರ ಉಳಿದಿತ್ತು ಎಂದು ದೇವೇ ಗೌಡ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಬ್ಬ ಪ್ರಬುದ್ಧ ನಾಯಕ ಎಂದು ಬಣ್ಣಿಸಿದ ದೇವೆ ಗೌಡ, ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಮೋದಿ ಅವರ ನಾಯಕತ್ವದ ಮೇಲೆ ಜಗತ್ತಿಗೆ ನಂಬಿಕೆಯಿದೆ ಎಂದರು. 'ನಾನು ಅಧಿಕಾರಕ್ಕಾಗಿ ಹಪಹಪಿಸುವ ರಾಜಕಾರಣಿಯಲ್ಲ. ಕಾಂಗ್ರೆಸ್ ಜೊತೆಗಿನ ಮೈತ್ರಿಯಲ್ಲಿ ನಾನು ಸಾಕಷ್ಟು ನೋವು ಅನುಭವಿಸಿದ್ದೇನೆ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ

ಖರ್ಗೆ ಅವರ ನಮ್ಮನ್ನ ಪ್ರೀತಿಸಿ ಮೋದಿಯವರನ್ನು ವಿವಾಹವಾದರು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಗೌಡರು, ಅವರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನಗಿಲ್ಲ. ಆದರೆ, ನಾನು ರಾಜ್ಯಸಭೆಗೆ ಆಯ್ಕೆಯಾಗಲು ಕಾಂಗ್ರೆಸ್ ಮತ್ತು ಬಿಜೆಪಿಯ ಉಳಿಕೆ ಮತಗಳೇ ಕಾರಣ ಎಂಬುದು ಸತ್ಯ. ಸ್ವತಃ ಖರ್ಗೆ ಅವರೇ ನನಗೆ ಸಂದೇಶ ಕಳುಹಿಸಿ ಚುನಾವಣೆಗೆ ಸ್ಪರ್ಧಿಸುವಂತೆ ಕೇಳಿದ್ದರು. ಕಾಂಗ್ರೆಸ್ ನಮ್ಮ ಸರ್ಕಾರವನ್ನು ತೆಗೆದಾಗ ನನಗೆ ನೋವಾಗಿದೆ, ಆದರೆ ನಾನು ಯಾರನ್ನೂ ವೈಯಕ್ತಿಕವಾಗಿ ಟೀಕಿಸುವುದಿಲ್ಲ ಎಂದು ಹೇಳಿದ್ದಾರೆ.

Vishakha Bhat Heggar

View all posts by this author