Operation Bihali: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ; ಓರ್ವ ಉಗ್ರನ ಎನ್ಕೌಂಟರ್
ಜಮ್ಮು ಮತ್ತು ಕಾಶ್ಮೀರದ ಬಸಂತ್ಗಢದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ (Operation Bihali) ಚಕಮಕಿ ಏರ್ಪಟ್ಟಿದ್ದು, ಓರ್ವ ಭಯೋತ್ಪಾದಕನನ್ನು ಎನ್ಕೌಂಟರ್ ಮಾಡಲಾಗಿದೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಬಸಂತ್ಗಢದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ (Operation Bihali) ಚಕಮಕಿ ಏರ್ಪಟ್ಟಿದ್ದು, ಓರ್ವ ಭಯೋತ್ಪಾದಕನನ್ನು ಎನ್ಕೌಂಟರ್ ಮಾಡಲಾಗಿದೆ. ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪಹಲ್ಗಾಮ್ ದಾಳಿಯ ಬಳಿಕ ಸೇನೆ ಉಗ್ರರ ವಿರುದ್ಧ ಮತ್ತಷ್ಟು ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.
ಜೆಎಂಯುಕೆಎಂಆರ್ಪೋಲಿಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಇಲ್ಲಿಯವರೆಗೆ ಓರ್ವಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. ಎನ್ಕೌಂಟರ್ ಬೆಳಿಗ್ಗೆ ಬೇಗನೆ ಪ್ರಾರಂಭವಾಯಿತು, ಮತ್ತು ಕಾರ್ಯಾಚರಣೆ ಮುಂದುವರೆದಿದೆ" ಎಂದು ಬಸಂತ್ಗಢದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮ್ಮು ವಲಯದ ಐಜಿಪಿ ಭೀಮ್ ಸೇನ್ ಟುಟಿ ಹೇಳಿದರು.
ಏತನ್ಮಧ್ಯೆ, ಜುಲೈ 3 ರಿಂದ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಗೆ ಪೂರ್ವಸಿದ್ಧತಾ ಕಾರ್ಯವಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ನಲ್ಲಿರುವ ಬಾಲ್ಟಾಲ್ ಬೇಸ್ ಕ್ಯಾಂಪ್ನಲ್ಲಿ ಬುಧವಾರ ಅಣಕು ಡ್ರಿಲ್ ಅನ್ನು ನಡೆಸಲಾಯಿತು. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಗಂಡರ್ಬಾಲ್ ಅವರ ಮೇಲ್ವಿಚಾರಣೆಯಲ್ಲಿ ಈ ಡ್ರಿಲ್ ನಡೆಸಲಾಯಿತು.
ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ (Pahalgam Terror Attack) 26 ಅಮಾಯಕರು ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿದ್ದರು. ಅದರ ತನಿಖೆಯನ್ನು NIA ವಹಿಸಿಕೊಂಡಿದೆ. ಇದೀಗ ಪ್ರಮುಖ ಪ್ರಗತಿಯಲ್ಲಿ , ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಯೋತ್ಪಾದಕರಿಗೆ ಆಶ್ರಯ ನೀಡಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಬಂಧಿತ ಇಬ್ಬರು ವ್ಯಕ್ತಿಗಳನ್ನು ಪಹಲ್ಗಾಮ್ನ ಬಟ್ಕೋಟ್ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಗಾಮ್ನ ಹಿಲ್ ಪಾರ್ಕ್ನ ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ; ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಸ್ಥಳೀಯರ ಬಂಧನ
ವಿಚಾರಣೆಯ ಸಮಯದಲ್ಲಿ, ಈ ಇಬ್ಬರೂ ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಗುರುತನ್ನು ಬಹಿರಂಗಪಡಿಸಿದ್ದಾರೆ. ಅವರು ಲಷ್ಕರ್-ಎ-ತೈಬಾ (ಎಲ್ಇಟಿ) ಗೆ ಸಂಬಂಧಿಸಿದ ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ಅವರು ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.