Operation in Kishtwar: ಕಣಿವೆ ರಾಜ್ಯದಲ್ಲಿ ಗುಂಡಿನ ಚಕಮಕಿ- ಸೇನೆಯ ಮೇಲೆ ಉಗ್ರರಿಂದ ಫೈರಿಂಗ್
ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆಯಿಂದಲೇ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಗುಪ್ತಚರ ಮಾಹಿತಿ ಆಧಾರದಲ್ಲಿ ಡೂಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಈ ವೇಳೆ ಭದ್ರತಾ ಸಿಬ್ಬಂದಿಯನ್ನು ಗಮನಿಸಿದ ಇಬ್ಬರು ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದರಿಂದ ಗುಂಡಿನ ಚಕಮಕಿ ಪ್ರಾರಂಭವಾಗಿದೆ


ಕಿಶ್ತ್ವಾರ್: ಗುಪ್ತಚರ ಮಾಹಿತಿ (Intelligence information) ಹಿನ್ನೆಲೆಯಲ್ಲಿ ಭಾನುವಾರ ಮುಂಜಾನೆಯಿಂದ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ (Kishtwar) ಜಿಲ್ಲೆಯ ದುಲ್ ಪ್ರದೇಶದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದ ಭಾರತೀಯ ಸೇನೆಯು (Indian army) ಭಯೋತ್ಪಾದಕರ (terrorist) ಮೇಲೆ ಗುಂಡಿನ ದಾಳಿ (gunfight) ನಡೆಸುತ್ತಿದೆ. ಕೆಲವು ಭಯೋತ್ಪಾದಕರು ಭಾರತೀಯ ಸೇನೆಯ ಮೇಲೂ ದಾಳಿ ನಡೆಸುತ್ತಿದ್ದಾರೆ. ಎರಡು ಕಡೆಯಿಂದಲೂ ಹಲವು ಸುತ್ತಿನ ಗುಂಡಿನ ಹಾರಾಟ ನಡೆದಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವೈಟ್ ನೈಟ್ ಕಾರ್ಪ್ಸ್ ಭಾನುವಾರದ ಟ್ವೀಟ್‌ನಲ್ಲಿ ತಿಳಿಸಿದೆ.
ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆಯಿಂದಲೇ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ದೊರೆತ ಬಳಿಕ ಗುಡ್ಡಗಾಡು ಜಿಲ್ಲೆಯ ದುಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಭದ್ರತಾ ಸಿಬ್ಬಂದಿಯನ್ನು ಗಮನಿಸಿದ ಇಬ್ಬರು ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದರಿಂದ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
#WATCH | Indian Army troops launched an anti-terror operation in the general area of Dul in Kishtwar, Jammu and Kashmir
— ANI (@ANI) August 10, 2025
Gunfire exchanged. Operation under progress: White Knight Corps, Indian Army
(Visuals deferred by unspecified time; no live operational details disclosed) pic.twitter.com/4FigXgH3g7
ಈ ಕುರಿತು ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಪ್ತಚರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭಾನುವಾರ ಮುಂಜಾನೆ ಇಬ್ಬರು ಭಯೋತ್ಪಾದಕರನ್ನು ಪತ್ತೆ ಮಾಡಲಾಗಿದೆ. ಅವರು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ್ದರಿಂದ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ತಿಳಿಸಿದೆ.
ಆಪರೇಷನ್ ಅಖಾಲ್
ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ನಡೆದ ಆಪರೇಷನ್ ಅಖಾಲ್ ಕಾರ್ಯಾಚರಣೆಯ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದರು. ಇದಾದ ಒಂದು ದಿನದ ಬಳಿಕ ಕಣಿವೆ ಪ್ರದೇಶದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಈ ಸುದ್ದಿಯನ್ನೂ ಓದಿ: Operation Akhal: ಕಾಶ್ಮೀರದಲ್ಲಿ ಉಗ್ರರು, ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ; ಇಬ್ಬರು ಯೋಧರು ಹುತಾತ್ಮ
ಆಪರೇಷನ್ ಅಖಾಲ್ ನ ಒಂಬತ್ತನೇ ದಿನದಲ್ಲಿ ಭದ್ರತಾ ಸಿಬ್ಬಂದಿಗಳಾದ ಪ್ರೀತ್ಪಾಲ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಹುತಾತ್ಮರಾಗಿದ್ದರು.. ಕುಲ್ಗಮ್ ಜಿಲ್ಲೆಯ ಅಖಲ್ ದೇವ್ಸರ್ ಅರಣ್ಯ ಪ್ರದೇಶದಲ್ಲಿ ಸುದೀರ್ಘ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾದ ಆಪರೇಷನ್ ಅಖಾಲ್ 10 ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೆ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಸ್ಥಳೀಯ ಭಯೋತ್ಪಾದಕ ಮತ್ತು ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. ನಾಲ್ವರು ಸೈನಿಕರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಗಸ್ಟ್ 1ರಿಂದ ಪ್ರಾರಂಭಿಸಿರುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸಿಆರ್ ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡಗಳು ಭಾಗವಹಿಸಿದ್ದವು.
ಅಡಗಿರುವ ಭಯೋತ್ಪಾದಕರು ತಪ್ಪಿಸಿಕೊಳ್ಳಲು ಸಾಧ್ಯವಾಗದಂತೆ ನೋಡಿಕೊಳ್ಳಲು ಸೇನೆಯು ರುದ್ರ ಹೆಲಿಕಾಪ್ಟರ್, ಡ್ರೋನ್ ಮತ್ತು ಪ್ಯಾರಾ ಕಮಾಂಡೋಗಳನ್ನು ನಿಯೋಜಿಸಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯಲ್ಲಿ ಗರಿಷ್ಠ ಪ್ರಮಾಣದ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
#WhiteKnightCorps
— White Knight Corps (@Whiteknight_IA) August 10, 2025
Contact with #Terrorists
Alert Indian Army troops while carrying out an intelligence based operation have established contact with terrorists in general area of Dul in Kishtwar in early hours of 10 Aug 2025. Gunfire exchanged. Operation under progress.@adgpi… pic.twitter.com/KOUpa208MN
ಆಪರೇಷನ್ ಮಹಾದೇವ್
ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಆರಂಭಿಸಿರುವ ಈ ಕಾರ್ಯಾಚರಣೆಯಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸುಲೇಮಾನ್ ಶಾ ಮತ್ತು ಆತನ ಇಬ್ಬರು ಸಹಚರರಾದ ಪಹಲ್ಗಾಮ್ ದಾಳಿಗೆ ಕಾರಣರಾದ ಅಬು ಹಮ್ಜಾ ಮತ್ತು ಜಿಬ್ರಾನ್ ಭಾಯ್ ಸೇರಿದಂತೆ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಜುಲೈ 28 ರಂದು ಶ್ರೀನಗರದ ಹರ್ವಾನ್ ಪ್ರದೇಶದ ಮಹಾದೇವ್ ಪರ್ವತ ಶಿಖರದ ತಪ್ಪಲಿನಲ್ಲಿರುವ ಡಚಿಗಮ್ ರಾಷ್ಟ್ರೀಯ ಉದ್ಯಾನದ ಎತ್ತರದ ಪ್ರದೇಶಗಳಲ್ಲಿ ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಗೆ 'ಆಪರೇಷನ್ ಮಹಾದೇವ್' ಎನ್ನುವ ಹೆಸರು ನೀಡಲಾಗಿದೆ.
ಇದನ್ನೂ ಓದಿ: PM Narendra Modi: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಗಡಿ ಭಾಗದಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ಪಣ ತೊಟ್ಟಿರುವ ಭಾರತೀಯ ಸೇನೆಯು ಮಾದಕವಸ್ತು ಕಳ್ಳಸಾಗಣೆ ಮತ್ತು ಮಾರಾಟಗಾರರ ಮೇಲೆ ನಿಗಾ ಇರಿಸಿದ್ದಾರೆ.