ಜಮ್ಮು, ಸೆ.30: ಭದ್ರತಾ ಪಡೆಗಳು ನಡೆಸಿದ ಆಪರೇಷನ್ ಕೊರಾಗ್ (Operation Korag) ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೈಬಾದ ಪ್ರಮುಖ ಭಯೋತ್ಪಾದಕ ಮೂಸಾನನ್ನು ಹತ್ಯೆ ಮಾಡಲಾಗಿದೆ. ಹಲವು ದಾಳಿಗಳ ಪ್ರಕರಣಗಳಲ್ಲಿ ಬೇಕಾಗಿದ್ದ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಪ್ರಮುಖ ಉಗ್ರನೊಬ್ಬನನ್ನು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬುಡ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಮೊಹಮ್ಮದ್ ಆಸಿಫ್ ಅಲಿಯಾಸ್ ಹಾಶಿಮ್ ಮೂಸಾ ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಪಿರ್ ಪಂಜಾಲ್ ಶ್ರೇಣಿಯ ಎರಡೂ ಕಡೆಗಳಲ್ಲಿ ನಡೆದ ದಾಳಿಗಳಲ್ಲಿ ಭಾಗಿಯಾಗಿದ್ದ, ಈ ಉಗ್ರ ಮೋಸ್ಟ್ ವಾಂಟೆಡ್ ಲಿಸ್ಟ್‌ಗೆ ಸೇರಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಯೂಸ್ಮಾರ್ಗ್ ಬೆಟ್ಟಗಳಲ್ಲಿ ನಡೆದ ಭದ್ರತಾ ಕಾರ್ಯಾಚರಣೆಯಿಂದಲೂ ಆತ ತಪ್ಪಿಸಿಕೊಂಡಿದ್ದ. ಇದೀಗ ಬುಡ್ಗಾಮ್‌ನ ಯೂಸ್ಮಾರ್ಗ್ ಬಳಿಯ ಕೊರಾಗ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್ ನಡೆಸಿದ ಜಂಟಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಾದ ಆಪರೇಷನ್ ಕೊರಾಗ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಶಂಕಿತ ಭಯೋತ್ಪಾದಕರ ಚಲನವಲನಗಳನ್ನು ಗಮನಿಸಿದ ಯೋಧರು, ಅವರಿಗೆ ಸವಾಲು ಹಾಕಿದರು. ಇದಕ್ಕೆ ಪ್ರತಿಯಾಗಿ ಉಗ್ರಗಾಮಿಗಳು ಗುಂಡು ಹಾರಿಸಿದರು. ಯೋಧರು ಪ್ರತ್ಯುತ್ತರ ನೀಡಿದಾಗ ಭಾರಿ ಗುಂಡಿನ ಚಕಮಕಿಗೆ ಕಾರಣವಾಯಿತು. ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಯಿತು ಎಂದು ಸೇನೆಯು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
ಇಲ್ಲಿದೆ ಪೋಸ್ಟ್:
ನಂತರ ಶೋಧ ಕಾರ್ಯಾಚರಣೆಯಲ್ಲಿ ಆತನ ಮೃತದೇಹ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ. ಪಿರ್ ಪಂಜಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಸಾ ಭದ್ರತಾ ಪಡೆಗಳಿಗೆ ಬೇಕಾಗಿದ್ದ. ಅಧಿಕಾರಿಗಳ ಪ್ರಕಾರ, ಆತ ಸಂಪರ್ಕ ಹೊಂದಿದ್ದ ಗುಂಪು 2021ರಿಂದ 2024ರ ನಡುವೆ ಪೂಂಚ್ ಮತ್ತು ಜಮ್ಮು-ಕಾಶ್ಮೀರದ ಇತರ ಭಾಗಗಳಲ್ಲಿ ನಡೆದ ದಾಳಿಗಳಿಗೆ ಸಂಬಂಧಿಸಿತ್ತು. ಆ ದಾಳಿಗಳಲ್ಲಿ ಹಲವು ಸೇನಾ ಮತ್ತು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.
ಕಾಶ್ಮೀರದ ಉಧಂಪುರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಮುಂದುವರಿದ ಶೋಧ ಕಾರ್ಯ
ಜಮ್ಮು-ಕಾಶ್ಮೀರದಲ್ಲಿ CISF ಸಿಬ್ಬಂದಿಯಿಂದಲೇ ಗುಂಡಿನ ದಾಳಿ
ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಸೇವಾ-2 ಜಲವಿದ್ಯುತ್ ಯೋಜನೆಯ ಶಿಬಿರದಲ್ಲಿ ಸಹೋದ್ಯೋಗಿಯೊಬ್ಬರು ನಡೆಸಿದ ಗುಂಡಿನ ದಾಳಿಗೆ ಸಹಾಯಕ ಕಮಾಂಡೆಂಟ್ ಸೇರಿ ನಾಲ್ವರು ಸಿಐಎಸ್ಎಫ್ (CISF) ಸಿಬ್ಬಂದಿ ಮೃತಪಟ್ಟಿದ್ದಾರೆ. ಕರ್ತವ್ಯ ಬದಲಾವಣೆಯ ಸಂದರ್ಭದಲ್ಲಿ ಸಿಐಎಸ್ಎಫ್ ಸಿಬ್ಬಂದಿ ನಡುವೆ ವಾಗ್ವಾದ ಉಂಟಾಗಿದ್ದು, ಅದು ವಿಕೋಪಕ್ಕೆ ತಿರುಗಿ ಗುಂಡಿನ ದಾಳಿಗೆ ಕಾರಣವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಸಿಬ್ಬಂದಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಯೋಜನೆಯ ಕ್ಯಾಂಪ್‌ನಲ್ಲಿದ್ದಾಗ ಅವಧೇಶ್ ಸಿಂಗ್, ಸರ್ವಿಸ್ ರಿವಾಲ್ವರ್‌ನಿಂದ ತಮ್ಮ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಅವರನ್ನು ಬಂಧಿಸಲಾಗಿದೆ.