India Pakistan news live Update: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಸೂಕ್ತ ಕ್ರಮ: ವಿಕ್ರಮ್ ಮಿಸ್ರಿ
ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮಾರಣಹೋಮಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರನ್ನು ಸದೆ ಬಡೆದಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಮತ್ತೆ ಭಾರತದ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದ್ದು, ಭಾರತದ ಗಡಿ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ಮತ್ತು ಡ್ರೋನ್ ದಾಳಿಗಳನ್ನು ಮುಂದುವರೆಸಿದೆ. ಭಾರತೀಯ ಸೇನಾ ಪಡೆ ಕೂಡ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಪ್ರಕ್ಷುಬ್ದತೆ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
-
Rakshita Karkera
May 10, 2025 6:06 PM
ನವದೆಹಲಿ: ಕಳೆದೊಂದು ವಾರದಿಂದ ಯುದ್ದೋನ್ಮಾದದಲ್ಲಿರುವ ಭಾರತ ಮತ್ತು ಪಾಕಿಸ್ತಾನ ಇದೀಗ ಯುದ್ಧಕ್ಕೆ ಬ್ರೇಕ್ ಹಾಕಿ ಪರಸ್ಪರ ಒಪ್ಪಂದ ಮಾಡಿಕೊಂಡಿರುವ ಮಹತ್ವದ ಸಂಗತಿಯೊಂಧು ಬೆಳಕಿಗೆ ಬಂದಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿರುವ ಪಕ್ಷುಬ್ದತೆ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆಯೊಂದನ್ನ ಹೊರಡಿಸಿದ್ದಾರೆ. ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆಸಹಿ ಒಪ್ಪಿಗೆ ಸೂಚಿಸಿವೆ ಎಂದು ಹೇಳಿದ್ದಾರೆ. ವಾರಗಳಿಂದ ನಡೆಯುತ್ತಿದ್ದ ಭಾರತ ಹಾಗೂ ಪಾಕಿಸ್ತಾನ ನಡುವೆ ಕೊನೆಗೂ ಕದನ ವಿರಾಮ ಘೋಷಣೆ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿದ ಟ್ರಂಪ್ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದಾರೆ.ಇದರ ಬೆನ್ನಲ್ಲೇ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಇದನ್ನು ಖಚಿತಪಡಿಸಿದೆ.