ಪಾಕಿಸ್ತಾನದ 4 ಏರ್ ಬೇಸ್ ಉಡೀಸ್, ಭಾರತೀಯ ಸೇನೆ ಸರ್ವ ಸನ್ನದ್ಧ; ಸುದ್ದಿಗೋಷ್ಠಿಯಲ್ಲಿ ಸೇನೆ ಮಾಹಿತಿ
ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಮತ್ತೆ ಪಾಕಿಸ್ತಾನದಿಂದ ಡ್ರೋನ್ ದಾಳಿಯನ್ನು (Operation Sindoor) ವಿಫಲಗೊಳಿಸಿದ ನಂತರ, ವಿದೇಶಾಂಗ ಸಚಿವಾಲಯ ಹಾಗೂ ರಕ್ಷಣಾ ಇಲಾಖೆ ಮಹತ್ವದ ಸುದ್ದಿಗೋಷ್ಠಿ ನಡೆಸಿದೆ. ಪತ್ರಿಕಾ ಗೋಷ್ಠಿಯಲ್ಲಿ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಕರ್ನಲ್ ಸೋಫಿಯಾ ಖುರೀಷಿ, ಹಾಗೂ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ ಮಿಸ್ರಿ ಮಾಹಿತಿಯನ್ನು ನೀಡಿದ್ದಾರೆ.


ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಭಾರತ ಮತ್ತೆ ಪಾಕಿಸ್ತಾನದಿಂದ ಡ್ರೋನ್ ದಾಳಿಯನ್ನು (Operation Sindoor) ವಿಫಲಗೊಳಿಸಿದ ನಂತರ, ವಿದೇಶಾಂಗ ಸಚಿವಾಲಯ ಹಾಗೂ ರಕ್ಷಣಾ ಇಲಾಖೆ ಮಹತ್ವದ ಸುದ್ದಿಗೋಷ್ಠಿ ನಡೆಸಿದೆ. ಪತ್ರಿಕಾ ಗೋಷ್ಠಯಲ್ಲಿ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಕರ್ನಲ್ ಸೋಫಿಯಾ ಖುರೀಷಿ, ಹಾಗೂ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ ಮಿಸ್ರಿ ಮಾಹಿತಿಯನ್ನು ನೀಡಿದ್ದಾರೆ. ಮೊದಲು ಮಾತನಾಡಿದ ಕರ್ನಲ್ ಸೋಫಿಯಾ ಖುರೇಷಿ ಪಾಕಿಸ್ತಾನ ಭಾರತದ ವಾಯುನೆಲೆ ಹಾಗೂ ಶಾಲೆ ಹಾಗೂ ಆಸ್ಪತ್ರೆಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿತ್ತು.
ಆ ಎಲ್ಲಾ ದಾಳಿಗಳನ್ನು ಭಾರತ ಯಶಸ್ವಿಯಾಗಿ ಹಿಮ್ಮೆಟ್ಟಿಸಿದೆ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ ಪಾಕಿಸ್ತಾನದ ನಾಲ್ಕು ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ ಎಂದು ಮಾಹಿತಿ ನೀಡಿದ್ದಾರೆ. ರಫೀಕ್ಯೂ ಏರ್ ಬೇಸ್, ನೂರ್ ಖಾನ್ ಏರ್‌ಬೇಸ್, ರಹೀಮ್‌ಯಾರ್ ಖಾನ್ ಏರ್‌ಬೇಸ್, ಮುರೀದ್ ವಾಯುನೆಲೆ ಮೇಲೆ ಭಾರತ ದಾಳಿ ನಡೆಸಿದೆ. ಭಾರತೀಯ ಸೇನೆಯನ್ನು ಗುರಿಯಾಗಿಸಿ, ಉಧಮ್‌ಪುರ, ಆದಮ್‌ಪುರ, ಪಠಾಣ್‌ಕೋಟ್ ಮತ್ತು ಬಟಿಂಡಾದಲ್ಲಿನ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಹೇಳಿದೆ. ಆದರೆ ಅದು ಸುಳ್ಳು ಮಾಹಿತಿ ನಮ್ಮ ಸೇನಾ ನೆಲೆಗಳು ಸುರಕ್ಷಿತವಾಗಿದೆ ಎಂದು ಅವರು ತಿಳಿಸಿದ್ದಾರೆ. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಮಾತನಾಡಿ, ಕಾಶ್ಮೀರಲ್ಲಿ ಶೆಲ್‌ಗಳ ಮೂಲಕ ಪಾಕಿಸ್ತಾನ ದಾಳಿ ಮಾಡಿದೆ. ಬಾರಾಮುಲ್ಲಾ, ಪೂಂಚ್ ಸೇರಿದಂತೆ ಹಲವು ಕಡೆ ಅಪ್ರಚೋದಿತ ಗುಂಡಿನ ದಾಳಿಗಳು ನಡೆದಿದೆ. ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಹೇಳಿದ್ದಾರೆ. ಭಾರತದ ವಾಯುನೆಲೆಯ ಇಂದಿನ ಫೋಟೋ ಬಿಡುಗಡೆ ಮಾಡಿ ನಾವು ಸುರಕ್ಷಿತ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಬರುವ ವಿಷಯಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದ್ದಾರೆ
ಈ ಸುದ್ದಿಯನ್ನೂ ಓದಿ: India Pakistan Attack: ಭಾರತದ ಕ್ಷಿಪಣಿ ದಾಳಿಗೆ ಪಾಕ್‌ನ 4 ವಾಯುನೆಲೆ ಧ್ವಂಸ
ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮಾಹಿತಿಯನ್ನು ನೀಡಿ ಪಾಕಿಸ್ತಾನವು ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ರಜೌರಿಯಲ್ಲಿ ಆದ ಶೆಲ್ ದಾಳಿಯಲ್ಲಿ ಆಡಳಿತಾಧಿಕಾರಿ ಸೇರಿದಂತೆ ಹಲವರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ.