ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Trashi: ಭದ್ರತಾ ಪಡೆಗಳಿಂದ ಮುಂದುವರಿದ ಉಗ್ರರ ಬೇಟೆ; ಇಬ್ಬರು ಭಯೋತ್ಪಾದಕರ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ (Terrorist Encounter) ಕಾರ್ಯಾಚರಣೆ ಜೋರಾಗಿದೆ. ಕಿಶ್ವಾರದಲ್ಲಿ ( Operation Trashi) ಬೆಳ್ಳಂಬೆಳಿಗ್ಗೆ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈಗ ಸಿಂಗ್‌ಪೋರಾ ಚತ್ರೂದಲ್ಲಿ ಸೇನೆ ಉಗ್ರರ ಬೇಟೆಯಾಡಿದೆ. ಆಪರೇಷನ್ ಟ್ರಾಶಿ' ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಭದ್ರತಾ ಪಡೆಗಳಿಂದ ಮುಂದುವರಿದ ಉಗ್ರರ ಬೇಟೆ; ಇಬ್ಬರ ಎನ್‌ಕೌಂಟರ್‌

Profile Vishakha Bhat May 22, 2025 12:22 PM

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ (Terrorist Encounter) ಕಾರ್ಯಾಚರಣೆ ಜೋರಾಗಿದೆ. ಕಿಶ್ವಾರದಲ್ಲಿ (Operation Trashi) ಬೆಳ್ಳಂಬೆಳಿಗ್ಗೆ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈಗ ಸಿಂಗ್‌ಪೋರಾ ಚತ್ರೂದಲ್ಲಿ ಸೇನೆ ಉಗ್ರರ ಬೇಟೆಯಾಡಿದೆ. ಆಪರೇಷನ್ ಟ್ರಾಶಿ' ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿಯ ಬಳಿಕ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಭಯೋತ್ಪಾದಕರನ್ನು ತಟಸ್ಥಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ 'ಎಕ್ಸ್' ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಸಿಂಗ್‌ಪೋರಾ ಚಟ್ರೂದಲ್ಲಿ ಎರಡು ಪ್ಯಾರಾ ಎಸ್‌ಎಫ್, ಸೇನೆಯ 11 ಆರ್‌ಆರ್, 7 ನೇ ಅಸ್ಸಾಂ ರೈಫಲ್ಸ್ ಮತ್ತು ಎಸ್‌ಒಜಿ ಕಿಶ್ತ್ವಾರ್ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಎನ್‌ಕೌಂಟರ್ ಪ್ರಾರಂಭವಾಯಿತು. ಆರಂಭಿಕ ವರದಿಗಳ ಪ್ರಕಾರ, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಮೂರರಿಂದ ನಾಲ್ಕು ಭಯೋತ್ಪಾದಕರಿರುವ ತಾಣವನ್ನು ಸುತ್ತುವರಿದಿತ್ತು. ಇದೀಗ ಅದರಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಒಂದು ವಾರದ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಪ್ರತ್ಯೇಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಿದ ಬಳಿಕ ಭದ್ರತಾ ಪಡೆಗಳ ಜಂಟಿ ತಂಡವು ಇಂದಿನ ಕಾರ್ಯಾಚರಣೆಯನ್ನು ನಡೆಸಿದೆ. ಎನ್‌ಕೌಂಟರ್‌ನಲ್ಲಿ ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು.

ಈ ಸುದ್ದಿಯನ್ನೂ ಓದಿ: Terrorist Arrest: ಭಾರೀ ಗುಂಡಿನ ಚಕಮಕಿ- ಮೂವರು ಉಗ್ರರು ಟ್ರ್ಯಾಪ್

ಏಪ್ರಿಲ್ 22 ರ ಪಹಲ್ಗಾಮ್ ದಾಳಿಯ ನಂತರ ಭದ್ರತಾ ಪಡೆಗಳು ತಮ್ಮ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ದಕ್ಷಿಣ ಕಾಶ್ಮೀರದಾದ್ಯಂತ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಹತನಾಗಿದ್ದಾರೆ ಎಂದು ತಿಳಿದು ಬಂದಿದೆ. ಇತರ ಇಬ್ಬರು ಲಷ್ಕರ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದೆ.