Impeachment Motion Notice: ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಪದಚ್ಯುತಗೊಳ್ತಾರಾ? ಪ್ರತಿಪಕ್ಷಗಳ ಮಾಸ್ಟರ್ ಪ್ಲ್ಯಾನ್ ಏನು?
EC v/s Opposition Patries: ಮತಗಳ್ಳತನ ಆಗಿರುವುದಕ್ಕೆ ಸಂಬಂಧಿಸಿದ ಆರೋಪಗಳಿಗೆ ಅಫಿಡವಿಟ್ ಸಲ್ಲಿಸಿ, ಇಲ್ಲವೇ ಬಹಿರಂಗವಾಗಿ ಕ್ಷಮೆಯಾಚಿಸಿ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿರುವ ಬೆನ್ನಲ್ಲೇ ಇದೀಗ ಚುನಾವಣಾ ಆಯೋಗವನ್ನು ಮಣಿಸಲು ಪ್ರತಿಪಕ್ಷಗಳು ರಣತಂತ್ರ ಹೆಣೆದಿವೆ. ಆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ.


ನವದೆಹಲಿ: ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಳ ನಡುವಿನ ಸಮರ ತಾರಕಕ್ಕೇರಿದೆ. ಮತಗಳ್ಳತನ ಆಗಿರುವುದಕ್ಕೆ ಸಂಬಂಧಿಸಿದ ಆರೋಪಗಳಿಗೆ ಅಫಿಡವಿಟ್ ಸಲ್ಲಿಸಿ, ಇಲ್ಲವೇ ಬಹಿರಂಗವಾಗಿ ಕ್ಷಮೆಯಾಚಿಸಿ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿರುವ ಬೆನ್ನಲ್ಲೇ ಇದೀಗ ಚುನಾವಣಾ ಆಯೋಗವನ್ನು ಮಣಿಸಲು ಪ್ರತಿಪಕ್ಷಗಳು ರಣತಂತ್ರ ಹೆಣೆದಿವೆ. ಆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು(Impeachment Motion Notice) ಮಂಡಿಸಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ವಿರೋಧ ಪಕ್ಷಗಳು ಇಂದು ಬೆಳಿಗ್ಗೆ ಸಂಸತ್ತಿನಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಚುನಾವಣಾ ಆಯೋಗದ ಮುಖ್ಯಸ್ಥರನ್ನು ಪದಚ್ಯುತಗೊಳಿಸುವ ಪ್ರಸ್ತಾವನೆಯನ್ನು ಮಂಡಿಸುವ ಬಗ್ಗೆ ಚರ್ಚಿಸಲಾಗಿದೆ.
ಪದಚ್ಯುತಕ್ಕೆ ಅವಕಾಶ ಇದೆಯೇ?
ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆಯು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಂತೆಯೇ ಇರುತ್ತದೆ. ಅಂತಹ ಪ್ರಸ್ತಾವನೆಯನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ. ಅಧಿಕಾರ ದುರುಪಯೋಗ ಅಥವಾ ಅಸಮರ್ಥತೆಯ ಕಾರಣಗಳಿಗಾಗಿ ಮಾತ್ರ ಪದಚ್ಯುತಗೊಳಿಸಲು ಅವಕಾಶ ಇದೆ.
ಈ ಸುದ್ದಿಯನ್ನೂ ಓದಿ: Election Commission: ಚುನಾವಣಾಧಿಕಾರಿ ರಾಜೀವ್ ಕುಮಾರ್ ಅವಧಿ ಮುಕ್ತಾಯ: ಶೀಘ್ರದಲ್ಲೇ ಹೊಸ ಚುನಾವಣಾ ಆಯುಕ್ತರ ನೇಮಕ
ಚುನಾವಣಾ ಆಯೋಗದ ಮುಖ್ಯಸ್ಥರ ಪದಚ್ಯುತಿಗೆ ಒತ್ತಾಯಿಸುವ ನಿರ್ಧಾದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ, ಕಾಂಗ್ರೆಸ್ ಸಂಸದ ಸೈಯದ್ ನಾಸೀರ್ ಹುಸೇನ್, "ಮುಖ್ಯ ಚುನಾವಣಾ ಆಯುಕ್ತರು ಬಿಜೆಪಿ ವಕ್ತಾರರಂತೆ ಮಾತನಾಡುತ್ತಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ನಮಗೆ ಲಭ್ಯವಿರುವ ಪ್ರತಿಯೊಂದು ಆಯ್ಕೆಯನ್ನು ನಾವು ಬಳಸುತ್ತೇವೆ" ಎಂದು ಹೇಳಿದರು.
ಇನ್ನು ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ಕೊಟ್ಟಿದ್ದು, ಈ ಮೂರ್ಖರಿಂದ ನಾವು ಬೇರೆ ಏನನ್ನು ನಿರೀಕ್ಷಿಸಬಹುದು? ಅವರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ವಿರುದ್ಧ ವಾಗ್ದಂಡಣೆಗೆ ಮುಂದಾಗದಿರವುದೇ ಆಶ್ಚರ್ಯ ಎಂದಿದ್ದಾರೆ.