ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷದ ಸಂಸದರು ಸಿದ್ಧತೆ

ಲೋಕಸಭೆಯಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷದ ಸಂಸದರು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ನಡುವೆ ಕೊಲ್ಲಿ ರಾಷ್ಟ್ರಗಳ ಸಂಘರ್ಷದ ಕುರಿತು ಕೂಡ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ಅವಿಶ್ವಾಸ

ಸಂಗ್ರಹ ಚಿತ್ರ -

ನವದೆಹಲಿ: ಲೋಕಸಭೆಯಲ್ಲಿ (Loksabha) ಎರಡನೇ ಹಂತದ ಬಜೆಟ್ ಅಧಿವೇಶನ (second half of the Budget session) ಸೋಮವಾರ ಆರಂಭವಾಗಲಿದೆ. ಈ ಬಾರಿ ಅಧಿವೇಶನದಲ್ಲಿ ಮಧ್ಯಪ್ರಾಚ್ಯದಲ್ಲಿ (Middle East conflict) ಉಲ್ಬಣಗೊಂಡಿರುವ ಸಂಘರ್ಷದ ಕುರಿತು ಸರ್ಕಾರ ಎರಡೂ ಸದನಗಳಿಗೆ ವಿವರಿಸುವ ನಿರೀಕ್ಷೆಯಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ (External Affairs Minister S Jaishankar) ಈ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇದರೊಂದಿಗೆ ಸ್ಪೀಕರ್ ಓಂ ಬಿರ್ಲಾ (Speaker Om Birla) ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷದ ಸಂಸದರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಬಜೆಟ್ ಅಧಿವೇಶನ ಏಪ್ರಿಲ್ 2 ರವರೆಗೆ ನಡೆಯಲಿದೆ.

ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ 2026– 27ರಲ್ಲಿ ಸಚಿವಾಲಯಗಳಿಗೆ ಅನುದಾನಕ್ಕಾಗಿ ಬೇಡಿಕೆಗಳ ಪರಿಶೀಲನೆ, ಈಗಾಗಲೇ ಘೋಷಿಸಲಾದ ತೆರಿಗೆ ಪ್ರಸ್ತಾವನೆಗಳನ್ನು ಒಳಗೊಂಡಿರುವ ಹಣಕಾಸು ಮಸೂದೆ 2026 ರ ಅಂಗೀಕಾರದ ಮೇಲೆ ಕೇಂದ್ರ ಸರ್ಕಾರ ಗಮನ ಹರಿಸುವ ಸಾಧ್ಯತೆ ಇದೆ.

ಬೆಂಗಳೂರನ್ನು ಗ್ರೇಟರ್‌ ಮಾಡಲು ಬದ್ಧ

ಈ ಬಾರಿ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಸಂಘರ್ಷದೊಂದಿಗೆ ಪುನರಾರಂಭಗೊಳ್ಳಲಿದೆ. ಒಂದೆಡೆ ವಿರೋಧ ಪಕ್ಷದ ಸಂಸದರು ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರುವ ನಿರ್ಣಯವನ್ನು ಮಂಡಿಸಲಿದ್ದಾರೆ. ಇನ್ನೊಂದೆಡೆ ಫೆಬ್ರವರಿ 28ರಿಂದ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ನಡೆಸುತ್ತಿರುವ ಯುದ್ಧದ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸರ್ಕಾರಕ್ಕೆ ಮಾಹಿತಿ ನೀಡಲಿದ್ದಾರೆ.

ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಹಿ ಮಾಡಿದ ನಿರ್ಣಯದಲ್ಲಿ ಅವರು ಸದನದಲ್ಲಿ ಕಲಾಪಗಳನ್ನು ನಡೆಸುವಾಗ ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ನೊಟೀಸ್ ಸಿಕ್ಕಿದ ಮೇಲೆ ಬಿರ್ಲಾ ಅವರು ಲೋಕಸಭೆಯ ಅಧ್ಯಕ್ಷತೆ ಸ್ಥಾನದಿಂದ ಕೆಳಗೆ ಇಳಿದಿದ್ದು, ಈ ವಿಷಯ ಇತ್ಯರ್ಥವಾದ ಬಳಿಕವೇ ಅವರು ಮರಳಿ ಅಧ್ಯಕ್ಷ ಸ್ಥಾನ ಸ್ವೀಕರಿಸುವ ನಿರೀಕ್ಷೆ ಇದೆ.

ಎನ್‌ಡಿಎ ಬಹುಮತ ಹೊಂದಿರುವುದರಿಂದ ವಿರೋಧ ಪಕ್ಷಗಳ ನಿರ್ಣಯಕ್ಕೆ ಯಶಸ್ಸು ದೊರೆಯುವ ಸಾಧ್ಯತೆಯಿಲ್ಲ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಬಿರ್ಲಾ ಅವರನ್ನು ಸಾರ್ವಜನಿಕವಾಗಿ ಬೆಂಬಲಿಸಿದ್ದು, ಸ್ಪೀಕರ್ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ತತ್ತ್ವಗಳನ್ನು ಎತ್ತಿಹಿಡಿದಿದ್ದಾರೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತ ತನ್ನ ನಾಗರಿಕರ ಸುರಕ್ಷತೆಗೆ ಹೆಚ್ಚಿನ ಗಮನ ನೀಡುತ್ತಿದೆ. ಈ ಕುರಿತು ಪ್ರಧಾನಿ ಮೋದಿ ಅವರು ಇತ್ತೀಚೆಗೆ ಹೈಥಮ್ ಬಿನ್ ತಾರಿಕ್, ತಮೀಮ್ ಬಿನ್ ಹಮದ್ ಅಲ್ ಥಾನಿ ಮತ್ತು ಮೊಹಮ್ಮದ್ ಬಿನ್ ಸಲ್ಮಾನ್ ಸೇರಿದಂತೆ ಹಲವಾರು ಪ್ರಾದೇಶಿಕ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಉತ್ತರ ಕರ್ನಾಟಕಕ್ಕೆ ಸಾವಿರ ಎಕರೆ ಕೈಗಾರಿಕಾ ಪಾರ್ಕ್

ಈ ಬಾರಿ ಕಲಾಪದಲ್ಲಿ ಭಾರತದ ರಾಜತಾಂತ್ರಿಕ ನಿಲುವು, ಏರುತ್ತಿರುವ ತೈಲ ಬೆಲೆಗಳು ಮತ್ತು ಜಾಗತಿಕ ಇಂಧನ ಪೂರೈಕೆಗೆ ಉಂಟಾಗಿರುವ ಅಡ್ಡಿ ಆತಂಕಗಳ ಬಗ್ಗೆ ವಿರೋಧ ಪಕ್ಷಗಳು ಸರ್ಕಾರವನ್ನು ಪ್ರಶ್ನಿಸುವ ನಿರೀಕ್ಷೆಯಿದೆ. ವಿದೇಶಾಂಗ ನೀತಿ ವಿಷಯಗಳು ಜೊತೆಗೆ ದೇಶೀಯ ರಾಜಕೀಯ ವಿವಾದಗಳು ಕೂಡ ಚರ್ಚೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ , ದ್ರೌಪದಿ ಮುರ್ಮು ಅವರ ಇತ್ತೀಚಿನ ರಾಜ್ಯ ಭೇಟಿಯ ಸಮಯದಲ್ಲಿ ಬಿಜೆಪಿ ಶಿಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳ ಬಗ್ಗೆ ವಾದ, ಪ್ರತಿವಾದ ನಡೆಯಬಹುದು ಎನ್ನಲಾಗಿದೆ.