ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Attack: ಪಹಲ್ಗಾಮ್ ದಾಳಿಯ ಮೃತರು ಮತ್ತು ಗಾಯಾಳುಗಳ ಪಟ್ಟಿ ಬಿಡುಗಡೆ

ಪಹಲ್ಗಾಮ್ ದಾಳಿಯಲ್ಲಿ (Pahalgam Attack) 16 ಮಂದಿ ಸಾವನ್ನಪ್ಪಿರುವುದಾಗಿ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೃತಪಟ್ಟವರಲ್ಲಿ ಕರ್ನಾಟಕ, ಹರಿಯಾಣ, ಉತ್ತರಪ್ರದೇಶ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ನೇಪಾಳ,ಯುಎಇ ಪ್ರವಾಸಿಗರ ಹೆಸರನ್ನು ಒಳಗೊಂಡಿದೆ. ಗಾಯಾಳುಗಳಲ್ಲಿ ಗುಜರಾತ್, ಮಹಾರಾಷ್ಟ, ತಮಿಳುನಾಡು, ಕರ್ನಾಟಕ, ಒಡಿಶಾ, ಮುಂಬೈ ಒಟ್ಟು ಹತ್ತು ಮಂದಿಯನ್ನು ಹೆಸರಿಸಲಾಗಿದೆ. ಗಾಯಾಳುಗಳಲ್ಲಿ ಕರ್ನಾಟಕದ ಅಭಿಜವಂ ರಾವ್ ಎಂಬವರ ಹೆಸರಿದೆ. ಮೃತರಲ್ಲಿ ಮಂಜುನಾಥ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ಪಹಲ್ಗಾಮ್ ದಾಳಿಯಲ್ಲಿ ಮೃತ ಪಟ್ಟವರ ಪಟ್ಟಿ ರಿಲೀಸ್‌

ಪಹಲ್ಗಾಮ್: ಜಮ್ಮು ಮತ್ತು ಕಾಶ್ಮೀರದ (jammu and kashmir) ಪಹಲ್ಗಾಮ್ ( Pahalgam) ನಲ್ಲಿ ಅಟ್ಟಹಾಸ ಮೆರೆದಿರುವ ಉಗ್ರರ ದಾಳಿಯಲ್ಲಿ ( terrorist attack) 26 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಯಾರು, ಯಾವ ಊರಿನವರು ಎಂಬ ಮಾಹಿತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಬೇಸಿಗೆ ರಜೆ ಪ್ರಯುಕ್ತ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಪ್ರವಾಸಿಗರು ಈ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ. ಈ ದಾಳಿಯಲ್ಲಿ ಮೃತಪಟ್ಟ ಮೂವರು ಕನ್ನಡಿಗರ ಶವಗಳನ್ನು ಬೆಂಗಳೂರಿಗೆ ತರಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸ್ಥಳದಲ್ಲಿದ್ದು ವ್ಯವಸ್ಥೆ ಮಾಡುತ್ತಿದ್ದಾರೆ.

ಈ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್​, ಬೆಂಗಳೂರಿನ ಭರತ್​ ಭೂಷಣ್, ಆಂಧ್ರ ಮೂಲದ ಬೆಂಗಳೂರಿನ ಮಧುಸೂದನ್ ರಾವ್ ಸೇರಿದಂತೆ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.



ಮೃತರಲ್ಲಿ ಕರ್ನಾಟಕ, ಹರಿಯಾಣ, ಉತ್ತರಪ್ರದೇಶ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ನೇಪಾಳ,ಯುಎಇ ಪ್ರವಾಸಿಗರ ಹೆಸರನ್ನು ಒಳಗೊಂಡಿದೆ. ಗಾಯಾಳುಗಳಲ್ಲಿ ಗುಜರಾತ್, ಮಹಾರಾಷ್ಟ, ತಮಿಳುನಾಡು, ಕರ್ನಾಟಕ, ಒಡಿಶಾ, ಮುಂಬೈ ಒಟ್ಟು ಹತ್ತು ಮಂದಿಯನ್ನು ಹೆಸರಿಸಲಾಗಿದೆ. ಗಾಯಾಳುಗಳಲ್ಲಿ ಕರ್ನಾಟಕದ ಅಭಿಜವಂ ರಾವ್ ಎಂಬವರ ಹೆಸರಿದೆ. ಗಾಯಾಳುಗಳನ್ನು ಅನಂತ್ ನಾಗ್ ಹಾಗೂ ಬಾದಾಮಿಬಾಗ್ ಕಂಟೋನ್ಮೆಂಟ್ ಬೋರ್ಡ್ ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರಲ್ಲಿ ಮಂಜುನಾಥ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Terrorists killed: ʻಆಪರೇಷನ್‌ ಟಿಕ್ಕಾʼ ಶುರು; ಇಬ್ಬರು ಉಗ್ರರು ಫಿನೀಶ್‌

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್​ನ ಮಿನಿ ಸ್ವಿಜರ್‌ಲ್ಯಾಂಡ್‌ ಎಂದು ಕರೆಯಲಾಗುವ ಬೈಸರನ್ ಕಣಿವೆಗೆ ಬೇಸಗೆ ರಜೆಯ ಪ್ರಯುಕ್ತ ದೇಶದ ವಿವಿಧ ಭಾಗಗಳಿಂದ ನೂರಾರು ಪ್ರವಾಸಿಗರು ಆಗಮಿಸಿದ್ದರು. ಇವರ ಮೇಲೆ ಮಂಗಳವಾರ ಉಗ್ರರು ದಾಳಿ ನಡೆಸಿದ್ದಾರೆ. ಅಪರಿಚಿತ ಬಂದೂಕುಧಾರಿಗಳು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯಲಿ ಕನಿಷ್ಠ 28 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದು, ತುರ್ತು ಸಭೆಯನ್ನು ನಡೆಸಿದ್ದಾರೆ. ಮೃತರು ಮತ್ತು ಗಾಯಾಳುಗಳ ಪಟ್ಟಿಯನ್ನು ಟ್ವಿಟ್ಟರ್ ಖಾತೆಯಲ್ಲಿ ಬಿಡುಗಡೆ ಮಾಡಲಾಗಿದೆ.