Pahalgam Terror Attack: ಕೈಯಲ್ಲಿ ಬಂದೂಕು ಹಿಡಿದ ಉಗ್ರನ ಮೊದಲ ಫೋಟೋ ರಿವೀಲ್
Pahalgam Terrorist Photo Revealed: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರಲ್ಲಿ ಒಬ್ಬ ಉಗ್ರನ ಫೋಟೋ ರಿಲೀಸ್ ಆಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ಫೋಟೋದಲ್ಲಿ ಉಗ್ರನೊಬ್ಬ ಬಂದೂಕು ಹಿಡಿದಿರುವುದನ್ನು ಕಾಣಬಹುದಾಗಿದೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಶಂಕೆಯ ಆಧಾರದಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ಬಂಧನಕ್ಕೆ ಬಹುಮಾನ ಘೋಷಿಸಿದ್ದಾರೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಗುಂಡು ಹಾರಿಸಿದ(Pahalgam Terror Attack) ಭಯೋತ್ಪಾದಕರಲ್ಲಿ ಒಬ್ಬ ಉಗ್ರನ ಫೋಟೋ ರಿಲೀಸ್ ಆಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ಫೋಟೋದಲ್ಲಿ ಉಗ್ರನೊಬ್ಬ ಬಂದೂಕು ಹಿಡಿದಿರುವುದನ್ನು ಕಾಣಬಹುದಾಗಿದೆ. ದಾಳಿಯ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಶಂಕೆಯ ಆಧಾರದಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ಬಂಧನಕ್ಕೆ ಬಹುಮಾನ ಘೋಷಿಸಿದ್ದಾರೆ. ಆದಾಗ್ಯೂ, ಈ ಭಯೋತ್ಪಾದಕರ ಗುರುತು ಮತ್ತು ಈ ದಾಳಿಯಲ್ಲಿ ಅವರ ಪಾತ್ರ ಸ್ಪಷ್ಟವಾಗಿಲ್ಲ. ಇದೀಗ ದಾಳಿ ನಡೆಸಿದ ಭಯೋತ್ಪಾದಕನ ಮೊದಲ ಫೋಟೋ ಬಹಿರಂಗವಾಗಿದೆ.
ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ಘಟನೆಯಲ್ಲಿ ಇದುವರೆಗೆ 26ಜನ ಬಲಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕ ಮೂಲದ ಮೂವರು ಸೇರಿದ್ದಾರೆ.
ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್ ಬಳಿಕ ಉರಿ ಗಡಿಯಲ್ಲಿ ನುಸುಳಲು ಯತ್ನಿಸಿದ ಉಗ್ರರು, ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ(Pahalgam Terror Attack) ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ರಾತ್ರಿಯೇ ಭಾರತಕ್ಕೆ ಮರಳಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಅವರು ನಿನ್ನೆ ಮಧ್ಯಾಹ್ನ ಸೌದಿ ಪ್ರವಾಸ ಕೈಗೊಂಡಿದ್ದರು. ಇದು ಎರಡು ದಿನಗಳ ಅಧಿಕೃತ ಪ್ರವಾಸವಾಗಿತ್ತು. ಇದೀಗ ಭೀಕರ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ, ಇಂದೇ ಭಾರತಕ್ಕೆ ವಾಪಾಸಾಗಿದ್ದಾರೆ. ವಿಮಾನದಿಂದ ಇಳಿದ ತಕ್ಷಣ, ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲೇ ತುರ್ತು ಪರಿಶೀಲನಾ ಸಭೆ ನಡೆಸಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು.