ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack: ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಸಂಪೂರ್ಣ ಬೆಂಬಲ; ರಾಹುಲ್ ಗಾಂಧಿ

ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 26 ಜನರ ಸಾವಿಗೆ ಕಾರಣವಾದ ಹತ್ಯಾಕಾಂಡಕ್ಕೆ ಪ್ರತ್ಯುತ್ತರ ನೀಡಲೇ ಬೇಕು ಅದಕ್ಕಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ವಿರೋಧ ಪಕ್ಷವು ಸಂಪೂರ್ಣ ಬೆಂಬಲವನ್ನು ನೀಡಿದೆ ಎಂದು ಹೇಳಿದರು.

ಸರ್ಕಾರಕ್ಕೆ ಬೆಂಬಲ ಸೂಚಿಸುತ್ತೇವೆ; ರಾಹುಲ್‌ ಗಾಂಧಿ

Profile Vishakha Bhat Apr 24, 2025 9:53 PM

ನವದೆಹಲಿ: ಪಹಲ್ಗಾಮ್‌ನಲ್ಲಿ (Pahalgam Terror Attack) ನಡೆದ ದಾಳಿ ಬಳಿಕ ಇಂದು (ಗುರುವಾರ) ಸಂಸತ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆದಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಸಭೆ ಮುಗಿದ ನಂತರ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 26 ಜನರ ಸಾವಿಗೆ ಕಾರಣವಾದ ಹತ್ಯಾಕಾಂಡಕ್ಕೆ ಪ್ರತ್ಯುತ್ತರ ನೀಡಲೇ ಬೇಕು ಅದಕ್ಕಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ವಿರೋಧ ಪಕ್ಷವು ಸಂಪೂರ್ಣ ಬೆಂಬಲವನ್ನು ನೀಡಿದೆ ಎಂದು ಹೇಳಿದರು. ಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್‌ ಶಾ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

"ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಖಂಡಿಸಿದರು. ಯಾವುದೇ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವಿರೋಧ ಪಕ್ಷವು ಸಂಪೂರ್ಣ ಬೆಂಬಲ ನೀಡಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಲ್ಲಿದ್ದರು. ನಾವೆಲ್ಲರೂ ದಾಳಿಯನ್ನು ಖಂಡಿಸಿದ್ದೇವೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದಕ್ಕೆ ಬೆಂಬಲವಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ನಾವು ಹೇಳಿದ್ದೇವೆ ಎಂದರು.



ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರವು ಭಯೋತ್ಪಾದಕ ಗುಂಪುಗಳಿಗೆ ಆಶ್ರಯ ನೀಡುವ ರಾಷ್ಟ್ರದ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಬೈಸರನ್ ಹುಲ್ಲುಗಾವಲಿನಲ್ಲಿ CRPF ಅನ್ನು ಏಕೆ ನಿಯೋಜಿಸಲಿಲ್ಲ? ಭದ್ರತಾ ಪಡೆಗಳಿಗೆ ಅಲ್ಲಿಗೆ ತಲುಪಲು ಒಂದು ಗಂಟೆಗಳು ಬೇಕಾಯಿತು ಎಂದು ಹೇಳಿದ್ದಾರೆ. ಕಾಶ್ಮೀರಿಗಳು ಮತ್ತು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧದ ಸುಳ್ಳು ಪ್ರಚಾರವನ್ನು ನಿಲ್ಲಿಸಬೇಕು.ಭಯೋತ್ಪಾದಕರು ಅವರ ಧರ್ಮದ ಬಗ್ಗೆ ಕೇಳಿ ಜನರನ್ನು ಕೊಂದ ರೀತಿಯನ್ನು ನಾನು ಖಂಡಿಸುತ್ತೇನೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿರುವುದು ತುಂಬಾ ಒಳ್ಳೆಯದು ಎಂದು ಅವರು ಹೇಳಿದರು.



ಈ ಸುದ್ದಿಯನ್ನೂ ಓದಿ: Assam MLA: ಪುಲ್ವಾಮಾ, ಪಹಲ್ಗಾಮ್ ದಾಳಿ, "ಸರ್ಕಾರದ ಪಿತೂರಿ" ; ವಿವಾದಾತ್ಮಕ ಹೇಳಿಕೆ ನೀಡಿದ ಅಸ್ಸಾಂ ಶಾಸಕನ ಬಂಧನ

ಸರ್ವಪಕ್ಷ ಸಭೆಯ ನಂತರ, ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಭಾರತವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಭಾರತ ಹಿಂದೆಯೂ ಭಯೋತ್ಪಾದನೆಯ ವಿರುದ್ಧ ಬಲವಾದ ಕ್ರಮ ಕೈಗೊಂಡಿದೆ ಮತ್ತು ಅದನ್ನು ಮುಂದುವರಿಸುತ್ತದೆ. ಸರ್ಕಾರದ ಪರವಾಗಿ ಸರ್ವಪಕ್ಷಗಳು ಬೆಂಬಲ ಸೂಚಿಸಿವೆ. ಗುಪ್ತಚರ ಇಲಾಖೆ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳು ಘಟನೆಯ ಬಗ್ಗೆ, ಘಟನೆ ಹೇಗೆ ಸಂಭವಿಸಿತು ಮತ್ತು ಎಲ್ಲಿ ಲೋಪ ಸಂಭವಿಸಿತು ಎಂಬುದರ ಕುರಿತು ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.