Pahalgam terror Attack: ಭಾರತೀಯ ಸೇನೆಯ ಭರ್ಜರಿ ಬೇಟೆ- ಲಷ್ಕರ್ ತೊಯ್ಬಾ ಟಾಪ್ ಕಮಾಂಡರ್ ಫಿನೀಶ್!
LeT commander encounter:ಪಹಲ್ಗಾಮ್‌ನಲ್ಲಿ ಮೂರು ದಿನಗಳ ಹಿಂದೆ ನಡೆದ ರಣ ಭೀಕರ ಉಗ್ರ ದಾಳಿ ಬೆನ್ನಲ್ಲೇ ಭಯೋತ್ಪಾದಕರ ಬೇಟೆಗೆ ಇಳಿದಿರುವ ಭಾರತೀಯ ಸೇನೆ ಲಷ್ಕರ್- ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್‌ನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.


ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ(Pahalgam terror Attack) ಬೆನ್ನಲ್ಲೇ ಕಾರ್ಯಾಚರಣೆ ಕೈಗೆತ್ತಿಕೊಂಡಿರುವ ಭಾರತೀಯ ಸೇನೆ ಲಷ್ಕರ್- ತೊಯ್ಬಾ ಉಗ್ರ(Lashkar Terrorists) ಸಂಘಟನೆಯ ಟಾಪ್ ಕಮಾಂಡರ್‌ನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಎಲ್‌ಇಟಿಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾದ ಎಲ್‌ಇಟಿ ಭಯೋತ್ಪಾಕರ ಶೋಧ ಕಾರ್ಯಾಚರಣೆ ವೇಳೆ ಈ ಎನ್‌ಕೌಂಟರ್ ನಡೆದಿದ
"ಮಿನಿ ಸ್ವಿಟ್ಜರ್ಲೆಂಡ್" ಎಂದು ಕರೆಯಲ್ಪಡುವ ಪಹಲ್ಗಾಮ್‌ನ ಬೈಸರನ್‌ನಲ್ಲಿ ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ಘಟನೆಯಲ್ಲಿ ಇದುವರೆಗೆ 26ಜನ ಬಲಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕ ಮೂಲದ ಮೂವರು ಸೇರಿದ್ದಾರೆ. ಇದರ ಬೆನ್ನಲ್ಲೇ ಭಯೋತ್ಪಾದಕರ ಅವಿತಿರುವ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಭಾರೀ ಗುಂಡಿನ ಚಕಚಕಿ ನಡೆದಿತ್ತು. ಉಗ್ರರು ಏಕಾಏಕಿ ಗುಂಡಿನ ದಾಳಿ ಶುರು ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಸೇನೆ ನಡೆಸಿದ ದಾಳಿಯಲ್ಲಿ ಲಲ್ಲಿ ಹತನಾಗಿದ್ದಾನೆ. ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನು ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಗಾಯಾಳು ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಭಯೋತ್ಪಾದಕರನ್ನು ಮಟ್ಟ ಹಾಕಲು ಬೇಟೆ ಶುರು ಮಾಡಿದೆ. ಈಗಾಗಲೇ ಸಾವಿರಾರು ಶಂಕಿತರನ್ನು ಅನುಮಾನದ ಮೇರೆಗೆ ವಶಕ್ಕೆ ಪಡೆದಿರುವ NIA ತನಿಖೆ ಚುರುಕುಗೊಳಿಸಿದೆ. ಈ ನಡುವೆ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಬರೋಬ್ಬರಿ 26ಜನರನ್ನು ಬಲಿಪಡೆದ ಲಷ್ಕರ್-ಎ-ತೈಬಾ (LET) ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳು ಗುರುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಸ್ಫೋಟಗಳಲ್ಲಿ ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Assam MLA: ಪುಲ್ವಾಮಾ, ಪಹಲ್ಗಾಮ್ ದಾಳಿ, "ಸರ್ಕಾರದ ಪಿತೂರಿ" ; ವಿವಾದಾತ್ಮಕ ಹೇಳಿಕೆ ನೀಡಿದ ಅಸ್ಸಾಂ ಶಾಸಕನ ಬಂಧನ
ಮೂಲಗಳು ಹೇಳುವಂತೆ ಅವರ ಮನೆಗಳಲ್ಲಿ ಸ್ಫೋಟಕಗಳನ್ನು ಇಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಮೂಲದ ಥೋಕರ್ ಮಂಗಳವಾರದ ಪಹಲ್ಗಾಮ್ ಹತ್ಯಾಕಾಂಡದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದರೆ, ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಥೋಕರ್ ಮತ್ತು ಇತರ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಅನಂತ್‌ನಾಗ್ ಪೊಲೀಸರು ಗುರುವಾರ ಬಿಡುಗಡೆ ಮಾಡಿದ್ದಾರೆ. ಇತರ ಇಬ್ಬರು ಶಂಕಿತರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರ ಬಂಧನಕ್ಕೆ 20 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. X ನಲ್ಲಿ ಪೊಲೀಸರ ಪ್ರಕಟಿಸಿರುವ ಪೋಸ್ಟ್ ಪ್ರಕಾರ, ಇತರ ಇಬ್ಬರು ಶಂಕಿತರನ್ನು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಎಂದು ಗುರುತಿಸಲಾಗಿದೆ. ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಸದಸ್ಯರು ಎನ್ನಲಾಗಿದೆ.