Ceasefire Violation: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ
ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್ ಸೈನಿಕರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಪಾಕ್ ಸೇನೆಯ ಹಲವು ಸೈನಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ಬಗ್ಗೆ ಇನ್ನೂ ಭಾರತೀಯ ಸೇನೆ ಎಲ್ಲಿಯೂ ಸ್ಪಷ್ಟವಾದ ಮಾಹಿತಿಯನ್ನು ಹಂಚಿಕೊಂಡಿಲ್ಲ.
![ಸೇನೆಯಿಂದ್ ಪಾಕ್‌ಗೆ ಶಾಸ್ತಿ; ಗಡಿಯಲ್ಲಿ ಮುಂದುವರಿದ ಉದ್ವಿಗ್ನತೆ](https://cdn-vishwavani-prod.hindverse.com/media/original_images/Ceasefire_Violation.jpg)
Ceasefire Violation
![Profile](https://vishwavani.news/static/img/user.png)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ(Ceasefire Violation) ಪಾಕ್ ಸೈನಿಕರಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಪಾಕ್ ಸೇನೆಯ ಹಲವು ಸೈನಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯ (LOC) ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದೀಗ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು (Indian Army) ಸೂಕ್ತ ಉತ್ತರ ನೀಡಿದೆ. ಈಗ ನಡೆದ ದಾಳಿಯಲ್ಲಿ ಎಷ್ಟು ಪಾಕ್ ಸೈನಿಕರು ಮೃತ ಪಟ್ಟಿದ್ದಾರೆ ಎಂದು ಇನ್ನೂ ತಿಳಿದು ಬಂದಿಲ್ಲ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ಬಗ್ಗೆ ಇನ್ನೂ ಭಾರತೀಯ ಸೇನೆ ಎಲ್ಲಿಯೂ ಸ್ಪಷ್ಟವಾದ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಶಂಕಿತ ಉಗ್ರರು ನಡೆಸಿದ ಐಇಡಿ ಸ್ಫೋಟದಲ್ಲಿ ಕ್ಯಾಪ್ಟನ್ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಹುತಾತ್ಮರಾದ ಒಂದು ದಿನದ ನಂತರ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ 25, 2021 ರಂದು ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ನವೀಕರಿಸಿದ ನಂತರ ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆಯ ಘಟನೆಗಳು ಬಹಳ ಕಡಿಮೆ ದಾಖಲಾಗಿವೆ.
ಈ ಸುದ್ದಿಯನ್ನೂ ಓದಿ: Terrorist Encounter: ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ; 5 ಉಗ್ರರು ಉಡೀಸ್
ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಪಾಕಿಸ್ತಾನಿ ಸೇನಾ ಅಧಿಕಾರಿಯೊಬ್ಬರು ಹುತಾತ್ಮ ಸೈನಿಕರಿಗೆ ಅಂತಿಮ ನಮನ ಸಲ್ಲಿಸುತ್ತಿರುವುದು ಕಂಡು ಬಂದಿದೆ. ಈ ವೀಡಿಯೊದಲ್ಲಿ ದಿನಾಂಕವನ್ನು ಉಲ್ಲೇಖಿಸಲಾಗಿಲ್ಲ. ಕಳೆದ ವಾರದಲ್ಲಿ ಗಡಿಯಲ್ಲಿ ಗುಂಡಿನ ದಾಳಿ ನಡೆದ ನಂತರ ಎಲ್‌ಒಸಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬ್ರವರಿ 11ರಂದು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಎಂದು ಭಾರತೀಯ ಸೇನೆ ತಿಳಿಸಿದೆ. ಅಖ್ನೂರ್ ಸೆಕ್ಟರ್‌ನ ಲಲೇಲಿಯಲ್ಲಿ ಬೇಲಿ ಗಸ್ತು ತಿರುಗುತ್ತಿದ್ದಾಗ ಐಇಡಿ ಸಾಧನ ಸ್ಫೋಟ ವರದಿಯಾಗಿದ್ದು, ಇದರ ಪರಿಣಾಮವಾಗಿ ಇಬ್ಬರು ಸೈನಿಕರು ಮೃತಪಟ್ಟಿದ್ದರು.