ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಆಪರೇಷನ್ ಸಿಂಧೂರ್ ಬಗ್ಗೆ ಸುದ್ದಿ ಓದುತ್ತಲೇ ಕಣ್ಣೀರಿಟ್ಟ ಪಾಕ್‌ ನ್ಯೂಸ್ ಆ್ಯಂಕರ್

Pakistani journalist: ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಎಂಬ ದಿಟ್ಟ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಪ್ರತೀಕಾರದ ದಾಳಿಯನ್ನು ನಡೆಸಿದೆ. ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕ ಶಿಬಿರಗಳನ್ನು ಕೇವಲ 23 ನಿಮಿಷಗಳಲ್ಲಿ ಧ್ವಂಸಗೊಳಿಸಲಾಗಿದೆ.

ಲೈವ್ ಅಲ್ಲಿಯೇ ಗಳಗಳನೇ ಅತ್ತ ಪಾಕ್ ಆ್ಯಂಕರ್

Profile Sushmitha Jain May 8, 2025 5:48 PM

ನವದೆಹಲಿ: ಭಾರತೀಯ ಸೇನೆಯು (Indian Army) ಆಪರೇಷನ್ ಸಿಂಧೂರ್ (Operation Sindoor) ಎಂಬ ದಿಟ್ಟ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಪಾಕಿಸ್ತಾನದ (Pakistan Journalist) ಭಯೋತ್ಪಾದಕ ಶಿಬಿರಗಳ ವಿರುದ್ಧ ಪ್ರತೀಕಾರದ ದಾಳಿಯನ್ನು ನಡೆಸಿದೆ. ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (Pakistan-occupied Kashmir) 9 ಭಯೋತ್ಪಾದಕ ಶಿಬಿರಗಳನ್ನು ಕೇವಲ 23 ನಿಮಿಷಗಳಲ್ಲಿ ಧ್ವಂಸಗೊಳಿಸಲಾಗಿದೆ. ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಕಾರ್ಯಾಚರಣೆಯು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿದೆ, ಇದರಲ್ಲಿ ಹಲವಾರು ನಿರಪರಾಧಿ ನಾಗರಿಕರು ಮೃತಪಟ್ಟಿದ್ದರು. ಈ ದಾಳಿಯನ್ನು ಎಲ್ಲರೂ ತೀವ್ರವಾಗಿ ಖಂಡಿಸಿದ್ದರು, ಮತ್ತು ಭಾರತವು ಯಾವುದೇ ರೀತಿಯ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದೆ.

ಈ ಸುದ್ದಿಯನ್ನೂ ಓದಿ: Operation Sindoor: ಆಪರೇಷನ್ ಸಿಂದೂರ್ ದಿನವೇ ಹುಟ್ಟಿದ ಮಗುವಿಗೆ ಸಿಂದೂರಿ ಎಂದು ಹೆಸರು!

ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪಾಕಿಸ್ತಾನ ನ್ಯೂಸ್ ಆ್ಯಂಕರ್ ಒಬ್ಬರು ವರದಿ ಮಾಡುವಾಗ ಲೈವ್‌ನಲ್ಲೇ ಕಣ್ಣೀರಿಟ್ಟಿದ್ದಾಳೆ. ಪಹಲ್ಲಾಮ್‌ನಲ್ಲಿ 26 ಭಾರತೀಯ ಪ್ರವಾಸಿಗರನ್ನು ಪಾಕ್ ಉಗ್ರರು ಹತ್ಯೆಮಾಡಿದಾಗ ಮೌನವಾಗಿದ್ದ ಪಾಕ್ ನ್ಯೂಸ್ ಆ್ಯಂಕರ್‌ಗಳು ಇಂದು ಕಣ್ಣೀರು ಇಡುವಂತ ಪರಿಸ್ಥಿತಿ ಎದುರಾಗಿದೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಆಗ ಪಾಕಿಸ್ತಾನದ ಸುದ್ದಿ ನಿರೂಪಕರು ಭಾರತ ಪಾಕಿಸ್ತಾನದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎನ್ನುತ್ತಿದ್ದರು. ಆದರೆ ಇದೀಗ ಸ್ಟುಡಿಯೋದಲ್ಲಿ ಕುಳಿತುಕೊಂಡಿದ್ದ ಕಣ್ಣೀರು ಹಾಕಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಭಾರತ ಸರ್ಕಾರದ ಈ ದೃಢ ಕ್ರಮವು ಭಯೋತ್ಪಾದಕರನ್ನು ಪೋಷಿಸುವ ಶಕ್ತಿಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ. ಆಪರೇಷನ್ ಸಿಂಧೂರ್ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಒದಗಿಸುವ ಭಾರತದ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ. ಈ ಕಾರ್ಯಾಚರಣೆಯನ್ನು ವ್ಯಾಪಕವಾಗಿ ಶ್ಲಾಘಿಸಲಾಗಿದೆ. ಪಾಕಿಸ್ತಾನವು ಈ ದಾಳಿಗೆ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದು ಇನ್ನೂ ತಿಳಿದಿಲ್ಲ. ಆದರೆ, ಒಂದು ವಿಷಯ ಸ್ಪಷ್ಟವಾಗಿದೆ ಭಾರತವು ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂಬ ಸಂದೇಶವನ್ನು ಜಗತ್ತಿಗೆ ಸಾರಿ ಹೇಳಿದೆ.