Pak Citizen Arrested: ಪೂಂಚ್ ಬಳಿ ಅಕ್ರಮವಾಗಿ ಗಡಿ ದಾಟುತ್ತಿದ್ದ ಪಾಕ್ ಪ್ರಜೆಯ ಬಂಧನ
ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ಇದೀಗ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


ಶ್ರೀನಗರ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ಇದೀಗ ಪಾಕಿಸ್ತಾನಿ ಪ್ರಜೆಯೊಬ್ಬನನ್ನು (Pak Citizen Arrested) ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದಕ್ಕೂ ಮೊದಲು, ಪಾಕಿಸ್ತಾನದ ಗಡಿಯನ್ನು ಅಜಾಗರೂಕತೆಯಿಂದ ದಾಟಿದ್ದಕ್ಕಾಗಿ ಬಿಎಸ್‌ಎಫ್ ಕಾನ್‌ಸ್ಟೆಬಲ್‌ನನ್ನು ಪಾಕಿಸ್ತಾನ ವಶಕ್ಕೆ ಪಡೆದ ಕೆಲವು ದಿನಗಳ ನಂತರ, ರಾಜಸ್ಥಾನದಲ್ಲಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಲಾಗಿತ್ತು.
ಏಪ್ರಿಲ್‌ನಲ್ಲಿ, ತಪ್ಪಾಗಿ ಗಡಿ ದಾಟಿ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದ ಬಿಎಸ್‌ಎಫ್ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ವಶಕ್ಕೆ ಪಡೆದುಕೊಂಡಿದೆ. ಹಲವಾರು ಸುತ್ತಿನ ಮಾತುಕತೆ ಬಳಿಕೂ ಪಾಕಿಸ್ತಾನ ಯೋಧನನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿಲ್ಲ. ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಜವಾನ್ ಪಿ.ಕೆ ಸಿಂಗ್ ಆಕಸ್ಮಿಕವಾಗಿ ಗಡಿ ದಾಟಿದ್ದರು. ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದ ಪಾಕಿಸ್ತಾನಿ ರೇಂಜರ್ಸ್ ಯೋಧನನ್ನು ಭಾರತದ ಗಡಿ ಭದ್ರತಾ ಪಡೆ ಶನಿವಾರ ವಶಕ್ಕೆ ಪಡೆದುಕೊಂಡಿದೆ . ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಿದ್ದಾರೆ. ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತದ ಗಡಿಯಲ್ಲಿ ಬೇಹುಗಾರಿಕೆ ನಡೆಸುತ್ತಿದ್ದಾಗ ಬಹಾವಲ್ಪುರ್ ವಲಯದಿಂದ ಬಿಎಸ್‌ಎಫ್ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಿದ್ದಾಗಿ ವರದಿಯಾಗಿದೆ.
ಏತನ್ಮಧ್ಯೆ LoC ಅಲ್ಲಿ ಪಾಕಿಸ್ತಾನದ ಸೇನೆ ಸತತ 12 ನೇ ದಿನವೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್‌ಗಳ ಎದುರಿನ ಪ್ರದೇಶಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಗೆ ಭಾರತೀಯ ಸೇನೆ ಸೂಕ್ತ ಪ್ರತಿಕ್ರಿಯೆ ನೀಡಿದೆ.
ಈ ಸುದ್ದಿಯನ್ನೂ ಓದಿ: Mallikarjun Kharge: ಪಹಲ್ಗಾಮ್ ದಾಳಿ ಬಗ್ಗೆ ಪ್ರಧಾನಿಗೆ ಮೊದಲೇ ಗೊತ್ತಿತ್ತು- ಖರ್ಗೆ ಸ್ಫೋಟಕ ಹೇಳಿಕೆ
ಇದೀಗ ವಿಶ್ವಸಂಸ್ಥೆ ಉಭಯ ದೇಶಗಳಿಗೆ ಯುದ್ಧ ಮಾಡಬೇಡಿ ಎಂದು ಹೇಳಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡಿಸಿದ್ದು, ಭಾರತ ಮತ್ತು ಪಾಕಿಸ್ತಾನಗಳು ಸಂಯಮದಿಂದ ವರ್ತಿಸುವಂತೆ ಸಲಹೆ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಲವಾರು ವರ್ಷಗಳಲ್ಲಿ ಅತ್ಯುನ್ನತ ಮಟ್ಟದಲ್ಲಿದೆ ಎಂದು ಗುಟೆರೆಸ್ ಸೋಮವಾರ ಹೇಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಎರಡೂ ಪಕ್ಷಗಳು ಸಂಯಮದಿಂದ ವರ್ತಿಸಬೇಕು ಮತ್ತು ಉದ್ವಿಗ್ನತೆಯನ್ನು ಪರಿಹರಿಸುವತ್ತ ಗಮನಹರಿಸಬೇಕು ಎಂದು ಹೇಳಿದ್ದಾರೆ.