ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pakistan's Firing: ಪಾಕಿಸ್ತಾನದಿಂದ ಮತ್ತೆ ಕಿಡಿಗೇಡಿ ಕೃತ್ಯ; ಗಡಿಯಲ್ಲಿ ಗುಂಡಿನ ದಾಳಿ- ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ

Firing Across Line Of Control:ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (LOC) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಭಾರತೀಯ ಪೋಸ್ಟ್‌ಗಳ ಮೇಲೆ ತಡರಾತ್ರಿ ದಾಳಿ(India Retaliates)ನಡೆಸಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

ಗಡಿಯಲ್ಲಿ ಪಾಕ್‌ ಸೇನೆಯಿಂದ ಗುಂಡಿನ ದಾಳಿ- ಸೇನೆಯಿಂದ ತಕ್ಕ ಪ್ರತ್ಯುತ್ತರ

Profile Rakshita Karkera Apr 25, 2025 9:15 AM

ಶ್ರೀನಗರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿ(Pakistan's Firing) ಬೆನ್ನಲ್ಲೇ ಕುತಂತ್ರಿ ಪಾಕಿಸ್ತಾನ ಮತ್ತೆ ಕಿಡಿಗೇಡಿ ಕೃತ್ಯವನ್ನು ಶುರು ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ (LOC) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಭಾರತೀಯ ಪೋಸ್ಟ್‌ಗಳ ಮೇಲೆ ತಡರಾತ್ರಿ ದಾಳಿ(India Retaliates)ನಡೆಸಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಅವರು ಹೇಳಿದರು.

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಶ್ರೀನಗರ ಮತ್ತು ಉಧಂಪುರಕ್ಕೆ ಭೇಟಿ ನೀಡಲಿರುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದೆ. ಈ ಭೇಟಿಯ ಸಮಯದಲ್ಲಿ, ಅವರು ಕಾಶ್ಮೀರ ಕಣಿವೆಯಲ್ಲಿ ಬೀಡುಬಿಟ್ಟಿರುವ ಹಿರಿಯ ಸೇನಾ ಕಮಾಂಡರ್‌ಗಳು ಮತ್ತು ಇತರ ಭದ್ರತಾ ಸಂಸ್ಥೆಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯ ಕುರಿತು ಚರ್ಚಿಸಲಿದ್ದಾರೆ. ಸೇನಾ ಮುಖ್ಯಸ್ಥರು ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ನಿರ್ಣಯಿಸುವ ಮತ್ತು ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯ ಇತ್ತೀಚಿನ ಕದನ ವಿರಾಮ ಉಲ್ಲಂಘನೆಗಳನ್ನು ಪರಿಶೀಲಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ಸೇನೆಯ ಗುಂಡಿನ ದಾಳಿ ನಡೆದಿದೆ.

ಈ ಸುದ್ದಿಯನ್ನೂ ಓದಿ: Pahalgam Terror Attack: ವೈದ್ಯಕೀಯ ವೀಸಾ ಹೊಂದಿದ್ದರೂ 5 ದಿನಗಳೊಳಗೆ ದೇಶ ತೊರೆಯಬೇಕು ; ಪಾಕಿಸ್ತಾನಿಯರಿಗೆ ವಿದೇಶಾಂಗ ಇಲಾಖೆ ಸೂಚನೆ

ಪಹಲ್ಗಾಮ್ ದಾಳಿಯ ನಂತರ, ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂಬ ಆರೋಪದ ಮೇಲೆ ಪಾಕಿಸ್ತಾನದ ವಿರುದ್ಧ ಭಾರತ ಬಲವಾದ ಪ್ರತಿ-ಕ್ರಮಗಳನ್ನು ಪ್ರಾರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಬುಧವಾರ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ, 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲು ಭಾರತ ನಿರ್ಧರಿಸಿತು.