ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

New Delhi Stampede : ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ ಜನರು ಏಕಾಏಕಿ ಜನರು ರೈಲು ಹತ್ತಲು ಹೋಗಿದ್ದಾರೆ ಆಗ ಊಂಟಾದ ನೂಕು ನುಗ್ಗಲಿನಿಂದಾಗಿ ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದು, ಶನಿವಾರ ರಾತ್ರಿ ನಡೆದ ಘಟನೆಯ ಬಗ್ಗೆ ಹೇಳಿದ್ದಾರೆ.

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸದ್ದು ಹೇಗೆ?

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ

Profile Vishakha Bhat Feb 16, 2025 9:41 AM

ನವದೆಹಲಿ: ಶನಿವಾರ ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ (New Delhi Stampede) ಸಂಭವಿಸಿದ್ದು, ಈ ವರೆಗೆ 18 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ ಜನರು ಏಕಾಏಕಿ ಜನರು ರೈಲು ಹತ್ತಲು ಹೋಗಿದ್ದಾರೆ ಆಗ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ಫ್ಲಾಟ್‌ಫಾರ್ಮ್‌ ನಂಬರ್‌ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಾಲ್ತುಳಿತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದು, ಶನಿವಾರ ರಾತ್ರಿ ನಡೆದ ಘಟನೆಯ ಬಗ್ಗೆ ಹೇಳಿದ್ದಾರೆ.



ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಗಧ ಎಕ್ಸ್‌ಪ್ರೆಸ್ ನಿಗದಿತ ನಿರ್ಗಮನಕ್ಕೆ ಮುಂಚಿತವಾಗಿ ಪ್ಲಾಟ್‌ಫಾರ್ಮ್ ಸಂಖ್ಯೆ 15 ಕ್ಕೆ ಬಂದಿದೆ. ರೈಲು ಹತ್ತಲು ಅಲ್ಲಿ ಭಾರಿ ಜನಸಮೂಹ ಸೇರಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಹಲವಾರು ಜನರು ಹಳಿಗಳನ್ನು ದಾಟಿ ಬೇರೆ ಬೇರೆ ಬೋಗಿಗಳಿಗೆ ನುಗ್ಗಿದರು, ಮತ್ತು ಪ್ಲಾಟ್‌ಫಾರ್ಮ್‌ನಲ್ಲಿದ್ದ ಇತರರು ಸಹ ರೈಲಿನೊಳಗೆ ಹತ್ತಲು ಧಾವಿಸಿದರು, ಇದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಹೇಳಿದ್ದಾರೆ. ಮತ್ತೊಬ್ಬ ಪ್ರತ್ಯಕ್ಷದರ್ಶಿ ಮಾತನಾಡಿ ಶನಿವಾರ ಭಾರೀ ಜನಸಂದಣಿ ಇತ್ತು. ಆದರೆ ಅಲ್ಲಿ ಯಾವ ಪೊಲೀಸರೂ ಇರಲಿಲ್ಲ. ರೈಲು ಬಂದಾಕ್ಷಣ ಒಂದೇ ಸಮ ಎಲ್ಲರೂ ನುಗ್ಗಿದ್ದಾರೆ. ಕಾಲ್ತುಳಿತ ಸಂಭವಿಸುತ್ತಿದ್ದಂತೆ, ನಮ್ಮ ಸಹೋದ್ಯೋಗಿಗಳು ಜನರಿಗೆ ಸಹಾಯ ಮಾಡಲು ಧಾವಿಸಿದರು. ಅಲ್ಲಿ ದೊಡ್ಡ ಗದ್ದಲ ಉಂಟಾಯಿತು. ನಾವು ಜನರನ್ನು ಅಡಿಯಿಂದ ಹೊರಗೆಳೆಯಲು ಪ್ರಯತ್ನಿಸಿದೆವು. ಆದರೆ ಕೆಲವರು ಆಗಲೇ ಮೃತಪಟ್ಟಿದ್ದರು. ಕೆಲವರ ಶವಗಳನ್ನು ನಾವೇ ಹೊರತೆಗೆದಿದ್ದೇವೆ ಎಂದು ಅವರು ಹೇಳಿದ್ದಾರೆ.



ರೈಲು ಹತ್ತಲು ಪ್ರಯತ್ನಿಸಿದ್ದ ಮಹಿಳೆಯೊಬ್ಬರು ಮಾತನಾಡಿ, ನಾನು ಹಾಗೂ ನನ್ನ ಪತಿ ಇಬ್ಬರೂ ಮಹಾಕುಂಭ ಮೇಳಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ತೆರಳಿದ್ದೆವು. ರೈಲು ಬರುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ನನ್ನ ಪತಿ ಕೂಡ ಕೆಳಗೆ ಬಿದ್ದರು, ಆದರೆ ನಾವು ಅವರನ್ನು ಸಮಯಕ್ಕೆ ಸರಿಯಾಗಿ ಹೊರಗೆಳೆದು ರಕ್ಷಿಸಿದೆವು. ನಮ್ಮ ಬಳಿ ಕಾಯ್ದಿರಿಸಿದ ಟಿಕೆಟ್‌ ಇದ್ದರೂ ಸಹ ನಮಗೆ ರೈಲು ಹತ್ತಲಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: New Delhi Stampede : ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; 18 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.