ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಹುಟ್ಟುಹಬ್ಬದಂದೇ ಯುವತಿ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

ಕೆಲವು ತಿಂಗಳ ಹಿಂದೆಯಷ್ಟೇ ಪರಿಚಿತರಾಗಿದ್ದ ಗೆಳೆಯರು ಯುವತಿಯೊಬ್ಬಳ ಮೇಲೆ ಆಕೆಯ ಹುಟ್ಟುಹಬ್ಬದ ದಿನದಂದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರವೆಂದು ಕರೆಯಲ್ಪಡುವ ಕೋಲ್ಕತಾ ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಗೆಳೆಯರಿಂದಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

-

ಕೋಲ್ಕತಾ: ಹುಟ್ಟುಹಬ್ಬದ (Birthday) ದಿನದಂದೇ ಯುವತಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೆ (Physical Abuse) ಒಳಗಾಗಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ (Kolkata) ನಡೆದಿದೆ. ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರವೆಂದು (Safest city for women) ಕರೆಯಲ್ಪಡುವ ಕೋಲ್ಕತಾ ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ (Regent Park) ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. 20 ವರ್ಷದ ಯುವತಿ ತನ್ನ ಹುಟ್ಟುಹಬ್ಬದಂದು ಇಬ್ಬರು ಪರಿಚಯಸ್ಥರು ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಪೊಲೀಸರಿಗೆ (Kolkata police) ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಅಪರಾಧದ ಅನಂತರ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎನ್ನಲಾಗಿದೆ.

ಹುಟ್ಟುಹಬ್ಬವನ್ನು ಆಚರಿಸುವ ನೆಪದಲ್ಲಿ ಹರಿದೇವ್‌ಪುರದ ಯುವತಿಯನ್ನು ಚಂದನ್ ಎಂಬಾತ ದೀಪ್‌ನ ಮನೆಗೆ ಕರೆದೊಯ್ದಿದ್ದು, ಬಳಿಕ ಅಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಆರೋಪಿ ಚಂದನ್ ಮತ್ತು ದೀಪ್ ಯುವತಿಯನ್ನು ಫ್ಲಾಟ್‌ಗೆ ಕರೆದೊಯ್ದು ಅಲ್ಲಿ ಒಟ್ಟಿಗೆ ಊಟ ಮಾಡಿದರು. ಯುವತಿ ಮನೆಗೆ ಮರಳಲು ಬಯಸಿದಾಗ ಆರೋಪಿಗಳಿಬ್ಬರು ಆಕೆಯನ್ನು ತಡೆದರು. ಅವರು ಬಾಗಿಲನ್ನು ಲಾಕ್ ಮಾಡಿ, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಅಲ್ಲಿಂದ ತಪ್ಪಿಸಿಕೊಂಡ ಯುವತಿ ಮನೆಗೆ ಬಂದು ಘಟನೆಯ ಬಗ್ಗೆ ತಮ್ಮ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಅನಂತರ ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆಯಷ್ಟೇ ಚಂದನ್ ಪರಿಚಿತನಾಗಿದ್ದ. ದಕ್ಷಿಣ ಕೋಲ್ಕತಾದಲ್ಲಿರುವ ದೊಡ್ಡ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಆತ ತನ್ನನ್ನು ಪರಿಚಿಯಿಸಿಕೊಂಡಿದ್ದ. ಅವರ ಮೂಲಕ ದೀಪ್‌ ಪರಿಚಿತನಾಗಿದ್ದು, ತಾವು ಅವರೊಂದಿಗೆ ಸಂಪರ್ಕದಲ್ಲಿ ಇದ್ದುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಪೂಜಾ ಸಮಿತಿಯಲ್ಲಿ ತಮ್ಮನ್ನು ಸೇರಿಸುವುದಾಗಿ ಇಬ್ಬರು ಆರೋಪಿಗಳು ಭರವಸೆ ನೀಡಿದ್ದರು ಎಂದು ಆಕೆ ತಮ್ಮ ದೂರಿನಲ್ಲಿ ತಿಳಿಸಿದ್ದಾಳೆ. ದಕ್ಷಿಣ ಕೋಲ್ಕತಾ ಕಾನೂನು ಕಾಲೇಜು ಆವರಣದಲ್ಲಿ ಜೂನ್ 25ರಂದು ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದ ಬಳಿಕ ಇದು ಎರಡನೇ ಪ್ರಕರಣವಾಗಿದೆ. ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ ಮೋನೋಜಿತ್ ಮಿಶ್ರಾ ಎಂಬಾತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Tulu language: ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿಕೆಶಿ

ಕಳೆದ ವರ್ಷ ರಾಜ್ಯ ಸರ್ಕಾರ ನಡೆಸುತ್ತಿರುವ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿರುವ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅನಂತರ ಈ ಘಟನೆಗಳು ನಡೆದಿದೆ. ಆಸ್ಪತ್ರೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ನಾಗರಿಕ ಪೊಲೀಸ್ ಸ್ವಯಂಸೇವಕ ಸಂಜಯ್ ರಾಯ್‌ಗೆ ಈ ವರ್ಷದ ಆರಂಭದಲ್ಲಿ ಸ್ಥಳೀಯ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.