Plane Crashes: ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ
ಗುಜರಾತ್‌ನಲ್ಲಿ ಅಹಮದಾಬಾದ್ ಏರ್‌ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 200ಕ್ಕಿಂತ ಅಧಿಕ ಮಂದಿ ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಗುಜರಾತ್‌ನ ಮೇಘನಿ ನಗರದ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು , ಅಲ್ಲಿಗೆ ತೆರಳುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ.


ಗಾಂಧಿನಗರ: ಗುಜರಾತ್‌ನಲ್ಲಿ ಅಹಮದಾಬಾದ್ ಏರ್‌ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಮಂದಿ ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ. ಗುಜರಾತ್‌ನ ಮೇಘನಿ ನಗರದ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು , ಅಲ್ಲಿಗೆ ತೆರಳುವ ಎಲ್ಲ ರಸ್ತೆಗಳನ್ನು ಮುಚ್ಚಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿತ್ತು. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Reports have emerged of a plane crash in #Ahmedabad, Gujarat, in the Meghani Nagar area near Sardar Vallabhbhai Patel International Airport.#planecrash pic.twitter.com/s7Or8aqLZB
— Ashok (@ashoksah) June 12, 2025
ಈ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರು ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ಮಧ್ಯಾಹ್ನ 1ರಿಂದ 2 ಗಂಟೆಯ ನಡುವೆ ಸಂಭವಿಸಿದೆ.
5 ಗಂಟೆವರೆಗೆ ಏರ್‌ಪೋರ್ಟ್ ಶಟ್‌ಡೌನ್
ಸದ್ಯ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಶಟ್‌ಡೌನ್ ಮಾಡಲಾಗಿದೆ. ಸುಮಾರು 800 ಅಡಿ ಎತ್ತರದಿಂದ ಪತನಾವಾಗಿದ್ದು, ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.