ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

9.34 ಕೋಟಿ ರೈತರಿಗೆ ದೀಪಾವಳಿ ಗಿಫ್ಟ್: ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ದೀಪಾವಳಿಗೂ ಮುನ್ನ, ದೇಶಾದ್ಯಂತ ರೈತರಿಗಾಗಿ ಸಿಹಿ ಸುದ್ದಿ ದೊರಕಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 30 ಅಕ್ಟೋಬರ್ 2026 ರಂದು ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಭಿಲ್ಡಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24 ನೇ ಕಂತನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ದೀಪಾವಳಿಗೂ ಮುನ್ನ, ದೇಶಾದ್ಯಂತ ರೈತರಿಗಾಗಿ ಸಿಹಿ ಸುದ್ದಿ ದೊರಕಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Modi) ಅವರು 30 ಅಕ್ಟೋಬರ್ 2026 ರಂದು ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಭಿಲ್ಡಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 24 ನೇ ಕಂತನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ಸುಮಾರು 9.34 ಕೋಟಿ ಅರ್ಹ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ಒಟ್ಟು 18,680 ರೂ. ಕೋಟಿಗೂ ಅಧಿಕ ಹಣವನ್ನು ಜಮಾ ಮಾಡಲಾಗಿದೆ.

ಈ ಬಾರಿಯ ಕಂತು ಬಿಡುಗಡೆ ಪ್ರಕ್ರಿಯೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಟ್ಟುನಿಟ್ಟಿನ ಕ್ಷೇತ್ರಮಟ್ಟದ ತಪಾಸಣೆ ಹಾಗೂ ಇ-ಕೆವೈಸಿ ಪರಿಶೀಲನೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ ಹಾಗೂ ಅನರ್ಹರೆಂದು ಕಂಡುಬಂದ ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರ ಹೆಸರುಗಳನ್ನು ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ.

ಜುಲೈನಲ್ಲಿ ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯನ್ನು 2026-27 ರಿಂದ 2030-31 ರವರೆಗೆ ಮುಂದುವರಿಸಲು ಅನುಮೋದನೆ ನೀಡಿತು, ಇದರ ಒಟ್ಟು ವೆಚ್ಚ ರೂ.3.15 ಲಕ್ಷ ಕೋಟಿ. ಜೂನ್ 2026 ರವರೆಗೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ 23 ಕಂತುಗಳ ಮೂಲಕ ರೂ.4.47 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ನೇರವಾಗಿ ರೈತರಿಗೆ ವರ್ಗಾಯಿಸಲಾಗಿದೆ.

ಹಣ ಜಮೆ ಪರಿಶೀಲಿಸುವುದು ಹೇಗೆ?

ರೈತರು ತಮ್ಮ ಖಾತೆಗೆ ಹಣ ಬಂದಿದೆಯೇ ಎಂಬುದನ್ನು ತಿಳಿಯಲು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ (pmkisan.gov.in) ಭೇಟಿ ನೀಡಿ, 'Know Your Status' ಲಿಂಕ್ ಕ್ಲಿಕ್ ಮಾಡಿ, ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ವಿವರಗಳನ್ನು ಪಡೆದುಕೊಳ್ಳಬಹುದು. ಒಂದು ವೇಳೆ ಅರ್ಹತೆ ಇದ್ದರೂ ಹಣ ಬರದೇ ಇದ್ದಲ್ಲಿ, ತಕ್ಷಣವೇ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಲು ಸೂಚಿಸಲಾಗಿದೆ.

ಕರ್ನಾಟಕದಲ್ಲಿ ತೀವ್ರ ಬರ; 20,585 ಕೋಟಿ ತುರ್ತು ಪರಿಹಾರ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಡಿಸಿಎಂ ಪತ್ರ

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಲಾದ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ರೈತರು ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಿರುವ ಒಟಿಪಿ ಆಧಾರಿತ ಆಯ್ಕೆಯ ಮೂಲಕ ಅಥವಾ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (ಸಿಎಸ್‌ಸಿ) ಬಯೋಮೆಟ್ರಿಕ್ ಪರಿಶೀಲನೆಯ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

Vishakha Bhat Heggar

View all posts by this author