ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗುಜರಾತ್‌ನಿಂದ ದೆಹಲಿಯವರೆಗೆ; ಸರ್ಕಾರದ ಮುಖ್ಯಸ್ಥರಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಯಾಗಿ ತಮ್ಮ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿದ್ದಾರೆ. 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿದ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಇಂಟರ್ ನೆಟ್ ಚಿತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಪ್ರಧಾನ ಮಂತ್ರಿಯಾಗಿ ತಮ್ಮ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿದ್ದಾರೆ. ಮೋದಿ ಅವರ ಈ ಸುದೀರ್ಘ ಸಾರ್ವಜನಿಕ ಸೇವೆಯ ಮೈಲಿಗಲ್ಲನ್ನು ಗೌರವಿಸಲು ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಭಿನಂದನಾ ನಿರ್ಣಯವನ್ನು ಅಂಗೀಕರಿಸಲಾಯಿತು.

ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿ, "ಪ್ರಧಾನಿ ಮೋದಿ ಅವರ 25 ವರ್ಷಗಳ ಈ ಅಪ್ರತಿಮ ಯಾನವು 'ರಾಷ್ಟ್ರ ಪ್ರಥಮ, ನಾಗರಿಕ ಪ್ರಥಮ' (Nation First, Citizen First) ಎಂಬ ಆಡಳಿತ ತತ್ವಕ್ಕೆ ಸಾಕ್ಷಿಯಾಗಿದೆ" ಎಂದು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರ 25 ವರ್ಷಗಳ ಆಡಳಿತದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತ್ತು ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ದೇಶದಾದ್ಯಂತ ವ್ಯಾಪಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ.

ಮೋದಿ ಜನ್ಮದಿನದಂದು ಆರಂಭವಾದ 'ಸೇವಾ ಸಂಕಲ್ಪ ಅಭಿಯಾನ' ಇಂದು ಮುಕ್ತಾಯಗೊಂಡಿದ್ದು, ದೇಶಾದ್ಯಂತ ರಕ್ತದಾನ ಶಿಬಿರಗಳು, ಸ್ವಚ್ಛತಾ ಆಂದೋಲನಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳು ನಡೆಯಲಿದೆ. 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿದ ಸ್ಮರಣಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. "ದೇಶದ 140 ಕೋಟಿ ಜನರ ಅದಮ್ಯ ವಿಶ್ವಾಸ ಹಾಗೂ ಪ್ರೀತಿಯೇ ನನ್ನ ಈ ಸುದೀರ್ಘ ಯಾನಕ್ಕೆ ಶ್ರೀರಕ್ಷೆ. 2047 ರ ವೇಳೆಗೆ 'ವಿಕಸಿತ ಭಾರತ' ನಿರ್ಮಾಣ ಮಾಡುವುದೇ ನಮ್ಮ ಗುರಿ" ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Raghava Sharma Nidle Column: ಉ.ಪ್ರ. ಕ್ಕೆ ಮೋದಿ-ಶಾ ಆಪ್ತರ ಅಧಿಕೃತ ಪ್ರವೇಶ

2001 ರ ಅಕ್ಟೋಬರ್ 7 ರಂದು ಗುಜರಾತ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಮೋದಿ, ಸತತ 12 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಮುನ್ನಡೆಸಿದರು. 'ವೈಬ್ರಂಟ್ ಗುಜರಾತ್' ನಂತಹ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಗೆ ಹೊಸ ವೇಗ ನೀಡಿದ ಅವರು, 'ಗುಜರಾತ್ ಮಾದರಿ'ಯನ್ನು ದೇಶದಾದ್ಯಂತ ಪರಿಚಯಿಸಿದರು. 2014 ರಲ್ಲಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿದ ಅವರು, ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ವಿಜಯದತ್ತ ಮುನ್ನಡೆಸುವ ಮೂಲಕ ಸದ್ಯ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Vishakha Bhat Heggar

View all posts by this author