ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್‌ನಲ್ಲಿ (France) ನಡೆಯಲಿರುವ AI ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಫ್ರಾನ್ಸ್‌ನತ್ತ ಸೋಮವಾರ ಪ್ರಯಾಣ ಬೆಳೆಸಿದ್ದಾರೆ. ಅವರು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಫ್ರಾನ್ಸ್‌ನಲ್ಲಿ ಮೊದಲ ಭಾರತೀಯ ಕಚೇರಿಯನ್ನು ಉದ್ಘಾಟಿಸಲು ಮಾರ್ಸಿಲ್ಲೆಗೆ ಭೇಟಿ ನೀಡಲಿದ್ದಾರೆ ಮತ್ತು ಅಂತಾರಾಷ್ಟ್ರೀಯ ಥರ್ಮೋನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್ ಯೋಜನೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ನಂತರ ಮೋದಿ ಫೆ. 13 ರಂದು ಅಮೆರಿಕಕ್ಕೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿ ಮೋದಿ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಫ್ರಾನ್ಸ್‌ಗೆ ತೆರಳುವ ಮುನ್ನ ಮೋದಿ,AI ಕ್ರಿಯಾ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ತಂತ್ರಜ್ಞಾನ ಪರಮಾಣು ಶಕ್ತಿ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸುವುದಾಗಿ ಹೇಳಿದ್ದಾರೆ. AI ಆ್ಯಕ್ಷನ್ ಶೃಂಗಸಭೆಯು ಫೆಬ್ರವರಿ 11 ರಂದು ನಡೆಯಲಿದೆ. . AI ಭವಿಷ್ಯದ ಕುರಿತು ಜಾಗತಿಕ ಚರ್ಚೆಗಳಲ್ಲಿ ಇದು ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. AI ತಂತ್ರಜ್ಞಾನಗಳ ಜವಾಬ್ದಾರಿಯುತ ಮತ್ತು ನೈತಿಕ ಬಳಕೆಯನ್ನು ಉತ್ತೇಜಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ.
ಶೃಂಗಸಭೆಯ ನಂತರ, ಮೋದಿ ಮತ್ತು ಮ್ಯಾಕ್ರನ್ ಬಂದರು ನಗರಿ ಮಾರ್ಸಿಲ್ಲೆಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಫೆಬ್ರವರಿ 12 ರಂದು ಹೊಸ ಭಾರತೀಯ ರಾಯಭಾರಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಮೋದಿ , ನಾವು ಫ್ರಾನ್ಸ್‌ನಲ್ಲಿ ಮೊದಲ ಭಾರತೀಯ ರಾಯಭಾರ ಕಚೇರಿಯನ್ನುಉದ್ಘಾಟಿಸಲು ಐತಿಹಾಸಿಕ ಫ್ರೆಂಚ್ ನಗರವಾದ ಮಾರ್ಸಿಲ್ಲೆಗೆ ಪ್ರಯಾಣ ಬೆಳೆಸುತ್ತೇವೆ ಎಂದು ಹೇಳಿದ್ದಾರೆ. ನಂತರ ಅಂತಾರಾಷ್ಟ್ರೀಯ ಥರ್ಮೋನ್ಯೂಕ್ಲಿಯರ್ ಪ್ರಾಯೋಗಿಕ ರಿಯಾಕ್ಟರ್ ಯೋಜನೆ ಬಗ್ಗೆ ಮಾಹಿತಿ ಪಡೆಯಲಿದ್ದೇನೆ ಎಂದು ಹೇಳಿದ್ದಾರೆ. ನಂತರ ಮೊದಲ ಮತ್ತು ಎರಡನೇ ಮಹಾಯುದ್ಧಗಳಲ್ಲಿ ಮಡಿದ ಭಾರತೀಯ ಸೈನಿಕರಿಗೆ ಮಜಾರ್ಗ್ಸ್ ಯುದ್ಧ ಸ್ಮಶಾನದಲ್ಲಿ ಮೋದಿ ಗೌರವ ಸಲ್ಲಿಸಲಿದ್ದಾರೆ.
ಮೋದಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಫ್ರಾನ್ಸ್ ಅಧ್ಯಕ್ಷ ಎರಡೂ ದೇಶಗಳು ಸಾಮಾನ್ಯ ಹಿತಾಸಕ್ತಿ ಹೊಂದಿವೆ ಎಂದು ಹೇಳಿದ್ದಾರೆ. ತಂತ್ರಜ್ಞಾನ ಮತ್ತು ಶಿಕ್ಷಣದಲ್ಲಿ ಭಾರತದ ಸಾಮರ್ಥ್ಯಗಳನ್ನು ಅವರು ಒತ್ತಿ ಹೇಳಿದ್ದಾರೆ. ಸಂದರ್ಶನದ ಆರಂಭದಲ್ಲಿ ಅವರು ಭಾರತದ ಜನರಿಗೆ ನನ್ನ ನಮಸ್ಕಾರ ಎಂದು ಹೇಳುವ ಮೂಲಕ ಸ್ವಾಗತಿಸಿದ್ದಾರೆ.
ಫೆ. 12 ರಂದು ಮೋದಿ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಟ್ರಂಪ್ ಅವರ ಜೊತೆ ಮಾತುಕತೆ ನಡೆಯಲಿದೆ. ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ. ಜನವರಿಯಲ್ಲಿ ಅವರ ಐತಿಹಾಸಿಕ ಚುನಾವಣಾ ಗೆಲುವು ಮತ್ತು ಅಧಿಕಾರ ಸ್ವೀಕಾರದ ನಂತರ ಇದು ನಮ್ಮ ಮೊದಲ ಭೇಟಿಯಾಗಿದ್ದರೂ, ಭಾರತ ಮತ್ತು ಅಮೆರಿಕ ನಡುವೆ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ನಿರ್ಮಿಸುವಲ್ಲಿ ಅವರ ಮೊದಲ ಅವಧಿಯಲ್ಲಿ ಒಟ್ಟಾಗಿ ಕೆಲಸ ಮಾಡಿದ ನೆನಪು ನನಗೆ ತುಂಬಾ ಚೆನ್ನಾಗಿದೆ ಎಂದು ಮೋದಿ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Narendra Modi: ಫೆ.12,13 ರಂದು ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ: ಟ್ರಂಪ್ ಜೊತೆ ಮಹತ್ವದ ಚರ್ಚೆ!
ಮೋದಿ ಮತ್ತು ಟ್ರಂಪ್ ನಡುವಿನ ಮಾತುಕತೆಯಲ್ಲಿ ವ್ಯಾಪಾರ, ಹೂಡಿಕೆ ಮತ್ತು ಇಂಧನ ಖರೀದಿ ವಿಷಯಗಳು ಪ್ರಮುಖವಾಗುವ ನಿರೀಕ್ಷೆಯಿದೆ. ಭಾರತವು ಅಮೆರಿಕದಿಂದ ತೈಲ ಮತ್ತು ಅನಿಲವನ್ನು ಖರೀದಿಸಬಹುದು ಎಂದು ಊಹಿಸಲಾಗಿದೆ.