Mann Ki Baat: ಮನ್ ಕಿ ಬಾತ್‌ನಲ್ಲಿ ರಾಜ್ಯದ ಬುಡಕಟ್ಟು ಜನಾಂಗವನ್ನು ಶ್ಲಾಘಿಸಿದ ಮೋದಿ
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣಾ ಪ್ರಯತ್ನಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬುಡಕಟ್ಟು ಜನರಿಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಕರ್ನಾಟಕದ ಬುಡಕಟ್ಟು ಜನಾಂಗದ ಬಗ್ಗೆ ಅವರು ಮಾತನಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಹುಲಿಗಳು, ಚಿರತೆಗಳು, ಏಷ್ಯಾಟಿಕ್ ಸಿಂಹಗಳು, ಘೇಂಡಾಮೃಗಗಳು ಮತ್ತು ಜೌಗು ಜಿಂಕೆಗಳ ಸಂಖ್ಯೆ ಗಮನಾರ್ಹವಾಗಿ ಬೆಳೆದಿದೆ ಎಂದು ಅವರು ಹೇಳಿದ್ದಾರೆ.

ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ "ಮನ್ ಕಿ ಬಾತ್" ನ (Mann Ki Baat) 119 ನೇ ಸಂಚಿಕೆಯಲ್ಲಿ ಮಾತನಾಡಿದರು. ಈ ವೇಳೆ ಪ್ರಧಾನಿ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ವನ್ಯ ಜೀವಿ ರಕ್ಷಣೆ ಬಗ್ಗೆ ಮಾತನಾಡಿದ ಅವರು ಭಾರತವು ಅಪಾರ ಸಸ್ಯ ಮತ್ತು ಪ್ರಾಣಿ ಸಂಪತ್ತನ್ನು ಹೊಂದಿದೆ ಎಂದು ಹೇಳಿದ್ದಾರೆ. ಈ ವನ್ಯ ಜೀವಿ ಸಂಪತ್ತು ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿವೆ. ಅನೇಕ ಪ್ರಾಣಿಗಳನ್ನು ನಮ್ಮ ದೇವತೆಗಳ ಪವಿತ್ರ ವಾಹನಗಳು ಎಂದು ಕರೆಯಲ್ಪಡುತ್ತಿದ್ದವು ಎಂದು ಅವರು ಹೇಳಿದ್ದಾರೆ.
ವನ್ಯಜೀವಿ ಸಂರಕ್ಷಣಾ ಪ್ರಯತ್ನಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬುಡಕಟ್ಟು ಜನರಿಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಕರ್ನಾಟಕದ ಬುಡಕಟ್ಟು ಜನಾಂಗದ ಬಗ್ಗೆ ಮಾತನಾಡಿದ ಮೋದಿ ಕರ್ನಾಟಕದ ಬಿಆರ್‌ಟಿ ಹುಲಿ ಅಭಯಾರಣ್ಯದಲ್ಲಿ, ಹುಲಿಗಳ ಸಂಖ್ಯೆ ಸ್ಥಿರವಾಗಿ ಹೆಚ್ಚುತ್ತಿದೆ. ಹುಲಿಗಳನ್ನು ಪೂಜಿಸುವ ಸೋಲಿಗ ಬುಡಕಟ್ಟು ಜನಾಂಗದವರಿಗೆ ಹೆಚ್ಚಿನ ಶ್ರೇಯಸ್ಸು ಸಲ್ಲುತ್ತದೆ. ಅವರ ಕಾರಣದಿಂದಾಗಿ, ಈ ಪ್ರದೇಶದಲ್ಲಿ ಮನುಷ್ಯ-ಪ್ರಾಣಿ ಸಂಘರ್ಷ ಬಹುತೇಕ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ. . ಅದೇ ರೀತಿ, ಗುಜರಾತ್‌ನಲ್ಲಿ, ಸ್ಥಳೀಯ ಜನರು ಗಿರ್‌ನಲ್ಲಿ ಏಷ್ಯಾಟಿಕ್ ಸಿಂಹಗಳನ್ನು ರಕ್ಷಿಸುವಲ್ಲಿ ಮತ್ತು ಸಂರಕ್ಷಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಪ್ರಕೃತಿಯೊಂದಿಗೆ ನಿಜವಾದ ಸಹಬಾಳ್ವೆ ಹೇಗಿರುತ್ತದೆ ಎಂಬುದನ್ನು ಅವರು ಜಗತ್ತಿಗೆ ತೋರಿಸಿದ್ದಾರೆ" ಎಂದು ಪ್ರಧಾನಿ ಹೇಳಿದರು. ಕಳೆದ ಕೆಲವು ವರ್ಷಗಳಿಂದ ಹುಲಿಗಳು, ಚಿರತೆಗಳು, ಏಷ್ಯಾಟಿಕ್ ಸಿಂಹಗಳು, ಘೇಂಡಾಮೃಗಗಳು ಮತ್ತು ಜೌಗು ಜಿಂಕೆಗಳ ಸಂಖ್ಯೆ ಗಮನಾರ್ಹವಾಗಿ ಬೆಳೆದಿದೆ ಎಂದು ಅವರು ಹೇಳಿದ್ದಾರೆ.
ಜಿಂಕೆ ಮಹಿಳೆ ಎಂದು ಕರೆಯಲ್ಪಡುವ "ಅನುರಾಧಾ ರಾವ್ ಎಂಬುವವರ ಬಗ್ಗೆ ಮಾತನಾಡಿ ಅನುರಾಧಾ ರಾವ್ ಅವರ ಕುಟುಂಬವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳೊಂದಿಗೆ ತಲೆಮಾರುಗಳಿಂದ ಸಂಪರ್ಕ ಹೊಂದಿದೆ. ಕಳೆದ ಮೂರು ದಶಕಗಳಿಂದ, ಅವರು ಜಿಂಕೆ ಮತ್ತು ನವಿಲುಗಳನ್ನು ರಕ್ಷಿಸುವುದನ್ನು ತಮ್ಮ ಧ್ಯೇಯವನ್ನಾಗಿ ಮಾಡಿಕೊಂಡಿದ್ದಾರೆ. ಸ್ಥಳೀಯರು ಅವರನ್ನು ಪ್ರೀತಿಯಿಂದ 'ಜಿಂಕೆ ಮಹಿಳೆ' ಎಂದು ಕರೆಯುತ್ತಾರೆ ಎಂದು ಮೋದಿ ಹೇಳಿದ್ದಾರೆ. ವನ್ಯಜೀವಿ ರಕ್ಷಣೆಗಾಗಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಬೇಕು ಮತ್ತು ಬೆಂಬಲಿಸಬೇಕು ಎಂದು ಪ್ರಧಾನಿ ಮೋದಿ ದೇಶವಾಸಿಗಳನ್ನು ಒತ್ತಾಯಿಸಿದರು.
ಈ ಸುದ್ದಿಯನ್ನೂ ಓದಿ : Mann Ki Baat : ಮನ್ ಕಿ ಬಾತ್; ಇಸ್ರೋ ಯಶಸ್ಸನ್ನು ಉಲ್ಲೇಖಿಸಿದ ಮೋದಿ, ವಿಜ್ಞಾನಿಯಾಗಿ ಒಂದು ದಿನ ಕಳೆಯಿರಿ ಎಂದು ಸಲಹೆ
ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಕೇಂದ್ರ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ, ಬಿಜೆಪಿ ಸಂಸದ ಬಾನ್ಸುರಿ ಸ್ವರಾಜ್ ಮತ್ತು ಇತರರು ರೇಡಿಯೊ ಕಾರ್ಯಕ್ರಮವನ್ನು ಆಲಿಸಿದ್ದಾರೆ.