ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದ; ಪ್ರಧಾನಿ ಮೋದಿಯನ್ನು ಸನ್ಮಾನಿಸಿದ NDA ಸಂಸದರು

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ದಿನವಾದ ಇಂದು ಎನ್‌ಡಿಎ ಸಂಸದರು ಪ್ರಧಾನಿ ಮೋದಿಯನ್ನು ಸನ್ಮಾನಿಸಿದ್ದಾರೆ. ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ನಂತರ, ಸಂಸತ್ತಿನ ಆವರಣದಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಸಂಸದರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸನ್ಮಾನಿಸಿದರು.

ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದ;

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 3, 2026 11:09 AM

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ದಿನವಾದ ಇಂದು ಎನ್‌ಡಿಎ (India-US Trade Deal) ಸಂಸದರು ಪ್ರಧಾನಿ (PM Modi) ಮೋದಿಯನ್ನು ಸನ್ಮಾನಿಸಿದ್ದಾರೆ. ಅಮೆರಿಕ-ಭಾರತ ವ್ಯಾಪಾರ ಒಪ್ಪಂದದ ನಂತರ, ಸಂಸತ್ತಿನ ಆವರಣದಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಸಂಸದರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸನ್ಮಾನಿಸಿದರು. ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರನ್ನು "ಜೈ ಮೋದಿ," "ವಂದೇ ಮಾತರಂ," ಮತ್ತು "ಭಾರತ್ ಮಾತಾ ಕಿ ಜೈ" ಎಂಬ ಜೋರು ಘೋಷಣೆಗಳನ್ನು ಕೂಗಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸುವುದಾಗಿ ಒಪ್ಪಂದ ಮಾಡಿಕೊಂಡಿರುವುದಾಗಿ ಘೋಷಿಸಿದ್ದಾರೆ. ಕಾಲಾನಂತರದಲ್ಲಿ ಈ ಸುಂಕ ದರಗಳು ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. ಈ ವಿಷಯದ ಬಗ್ಗೆ ಟ್ರಂಪ್ ಮತ್ತು ಪ್ರಧಾನಿ ಮೋದಿ ಮಹತ್ವದ ಒಪ್ಪಂದಕ್ಕೆ ಬಂದಿದ್ದು, ಸುಂಕವನ್ನು ಶೇ. 18ರಿಂದ ಶೂನ್ಯಕ್ಕೆ ಇಳಿಸುವುದು ನಮ್ಮ ಗುರಿಯಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.



ದೂರವಾಣಿ ಸಂಭಾಷಣೆ ವೇಳೆ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಾರ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ಟ್ರೂತ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, “ಪ್ರಧಾನಿ ಮೋದಿ ನನ್ನ ಆತ್ಮೀಯ ಸ್ನೇಹಿತರಲ್ಲಿ ಒಬ್ಬರು. ಹಾಗೇ, ಅವರು ಭಾರತ ದೇಶದ ಪ್ರಭಾವಿ ಮತ್ತು ಗೌರವಾನ್ವಿತ ನಾಯಕ. ವ್ಯಾಪಾರ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ನಾವು ಚರ್ಚಿಸಿದೆವು” ಎಂದು ತಿಳಿಸಿದ್ದರು.

ಹೆಚ್ಚಿನ ಸುಂಕ ಎದುರಿಸುತ್ತಿರುವ ದೇಶಗಳು

ಅಮೆರಿಕದಿಂದ ಅತಿ ಹೆಚ್ಚು ಸುಂಕ ವಿಧಿಸುತ್ತಿರುವ ಕೆಲವು ದೇಶಗಳಲ್ಲಿ ಬ್ರೆಜಿಲ್ (ಶೇ. 50), ಮ್ಯಾನ್ಮಾರ್ (ಶೇ. 40), ಲಾವೋಸ್ (ಶೇ. 40), ಚೀನಾ (ಶೇ. 37) ಮತ್ತು ದಕ್ಷಿಣ ಆಫ್ರಿಕಾ (ಶೇ. 30) ಸೇರಿವೆ. ಆಗ್ನೇಯ ಏಷ್ಯಾದಲ್ಲಿ, ಹೆಚ್ಚಿನ ಸುಂಕವನ್ನು ಎದುರಿಸುತ್ತಿರುವ ದೇಶಗಳಲ್ಲಿ ವಿಯೆಟ್ನಾಂ (ಶೇಕಡಾ 20), ಬಾಂಗ್ಲಾದೇಶ (ಶೇಕಡಾ 20), ಪಾಕಿಸ್ತಾನ (ಶೇಕಡಾ 19), ಮಲೇಷ್ಯಾ (ಶೇಕಡಾ 19), ಕಾಂಬೋಡಿಯಾ (ಶೇಕಡಾ 19) ಮತ್ತು ಥೈಲ್ಯಾಂಡ್ (ಶೇಕಡಾ 19) ಸೇರಿವೆ.