ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಪುಟಿನ್‌ಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ಕೊಟ್ಟ ಮೋದಿ

Putin in India: ಇಂದು(ಶುಕ್ರವಾರ) ಮಧ್ಯಾಹ್ನ ಹೈದರಾಬಾದ್‌ ಹೌಸ್‌ನಲ್ಲಿ ಮೋದಿ ಅವರೊಂದಿಗೆ ಪುಟಿನ್‌ ಭೋಜನ ಸೇವಿಸಲಿದ್ದಾರೆ. ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ಔತಣದಲ್ಲಿ ಭಾಗಿಯಾಗಿ, ರಾತ್ರಿ 9ರ ಸುಮಾರಿಗೆ ಮರಳಿ ರಷ್ಯಾದತ್ತ ಪ್ರಯಾಣ ಬೆಳೆಸಲಿದ್ದಾರೆ.

ನವದೆಹಲಿ: 23ನೇ ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ(Putin in India) ಬಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ(Vladimir Putin) ಪ್ರಧಾನಿ ನರೇಂದ್ರ ಮೋದಿ(PM Modi) ಅವರು ರಷ್ಯಾ ಭಾಷೆಯಲ್ಲಿರುವ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಗ್ರಂಥವು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಮೂಲವಾಗಿದೆ ಎಂದು ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಬಣ್ಣಿಸಿದ್ದಾರೆ.

'ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ರಷ್ಯಾ ಭಾಷೆಯಲ್ಲಿರುವ ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದೆ. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತವೆ’ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಇಂದು(ಶುಕ್ರವಾರ) ಪುಟಿನ್‌ ಜತೆ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಐದನೇ ತಲೆಮಾರಿನ ಸುಖೋಯ್‌ ಎಸ್‌ಯು-57, ಎಸ್‌-400 ಕ್ಷಿಪಣಿ ರಕ್ಷಣಾ ವ್ಯವಸ್ಥೆ, ನಾಗರಿಕ ಅಣು ಸಹಕಾರ, ಸಬ್‌ಮರೀನ್‌, ಹೊಸ ತಲೆಮಾರಿದನ ಬ್ರಹ್ಮೋಸ್‌ ಕ್ಷಿಪಣಿ ಅಭಿವೃದ್ಧಿ ಸೇರಿ ಹಲವು ಮಹತ್ವದ ವಿಚಾರಗಳು ಚರ್ಚೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ Narendra Modi Biopic: ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್ ಅನೌನ್ಸ್ ! ಮೋದಿ‌ ಪಾತ್ರದಲ್ಲಿ ಮಲಯಾಳಂ ನಟ ಉಣ್ಣಿ ಮುಕುಂದನ್

ಕಾರ್ಮಿಕರ ಕುರಿತು ಮಹತ್ವದ ಒಪ್ಪಂದ ನಡೆಯುವ ನಿರೀಕ್ಷೆ ಇದೆ. ಈ ಒಪ್ಪಂದದಿಂದಾಗಿ ಈಗಾಗಲೇ ರಷ್ಯಾದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಕಾರ್ಮಿಕರಿಗೆ ಕಾನೂನು ರಕ್ಷಣೆ ಮತ್ತು ಅಲ್ಲಿ ಉದ್ಯಮಗಳಲ್ಲಿ ಇನ್ನಷ್ಟು ಮಂದಿ ಭಾರತೀಯರಿಗೆ ಉದ್ಯೋಗಾವಕಾಶ ಸಿಗುವ ಸಾಧ್ಯತೆ ಇದೆ.



ಇಂದು ಬೆಳಗ್ಗೆ ಪುಟಿನ್‌ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಗುವುದು. ಬಳಿಕ ರಾಜ್‌ಘಾಟ್‌ಗೂ ಭೇಟಿ ನೀಡಿ, ಅವರು ಶೃಂಗದಲ್ಲಿ ಭಾಗವಹಿಸಲಿದ್ದಾರೆ. ಅದಾದ ನಂತರ, ರಷ್ಯಾದ ಸರ್ಕಾರಿ ಸ್ವಾಮ್ಯದ ಪ್ರಸಾರಕರ ಒಡೆತನದ ‘ಆರ್‌ಟಿ’ ಆಂಗ್ಲ ಚಾನಲ್‌ಅನ್ನು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ ಹೈದರಾಬಾದ್‌ ಹೌಸ್‌ನಲ್ಲಿ ಮೋದಿ ಅವರೊಂದಿಗೆ ಪುಟಿನ್‌ ಭೋಜನ ಸೇವಿಸಲಿದ್ದಾರೆ. ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ಔತಣದಲ್ಲಿ ಭಾಗಿಯಾಗಿ, ರಾತ್ರಿ 9ರ ಸುಮಾರಿಗೆ ಮರಳಿ ರಷ್ಯಾದತ್ತ ಪ್ರಯಾಣ ಬೆಳೆಸಲಿದ್ದಾರೆ.