ತಿರುವನಂತಪುರಂ: ಮುಂದಿನ ಏಪ್ರಿಲ್ ನಲ್ಲಿ ನಡೆಯಲಿರುವ ಕೇರಳ ವಿಧಾನ ಸಭಾ ಚುನಾವಣೆಗೆ (Kerala Assembly Elections) ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಶುಕ್ರವಾರ ಕೇರಳಕ್ಕೆ (kerala) ಆಗಮಿಸಿದ್ದು, ಮೂರು ಅಮೃತ ಭಾರತ್ ಎಕ್ಸ್‌ಪ್ರೆಸ್ ರೈಲುಗಳು (Amrutha Bharat trains) ಸೇರಿದಂತೆ ನಾಲ್ಕು ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು.ಸ್ವಾನಿಧಿ ಕ್ರೆಡಿಟ್ ಕಾರ್ಡ್ ಯೋಜನೆ (SVANidhi Credit Card Scheme) ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಅವರು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು.
ಕಾರ್ಯಕ್ರಮದ ನಿಮಿತ್ತ ಶುಕ್ರವಾರ ಬೆಳಗ್ಗೆ 10.25ರ ಸುಮಾರಿಗೆ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಹಿರಿಯ ಗಣ್ಯರು ಸ್ವಾಗತಿಸಿದರು. ತಿರುವನಂತಪುರಂನ ಬೀದಿಗಳಲ್ಲಿ ದಾರಿಯುದ್ದಕ್ಕೂ ಅಪಾರ ಜನಸಮೂಹ ಸಾಲುಗಟ್ಟಿ ನಿಂತು ಪ್ರಧಾನಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿತ್ತು.
ಗಣರಾಜ್ಯೋತ್ಸವಕ್ಕೆ ಮುನ್ನ ನೋಯ್ಡಾ, ಅಹಮದಾಬಾದ್ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್
ನಾಗರಿಕ ಚುನಾವಣೆಯಲ್ಲಿ ಬಿಜೆಪಿ ಇತ್ತೀಚೆಗೆ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) 45 ವರ್ಷಗಳ ಸ್ಥಳೀಯ ಸಂಸ್ಥೆಯ ಹಿಡಿತವನ್ನು ಕೊನೆಗೊಳಿಸಿ ತಿರುವನಂತಪುರಂ ಕಾರ್ಪೊರೇಷನ್ ಮೇಲೆ ಹಿಡಿತ ಸಾಧಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇರಳದ ಅಭಿವೃದ್ಧಿಯನ್ನು ಹೆಚ್ಚಿಸಲು ಸರ್ಕಾರದ ಪ್ರಯತ್ನಗಳನ್ನು ಎತ್ತಿ ತೋರಿಸಿದರು
ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ರೈಲು ಸಂಪರ್ಕವನ್ನು ಬಲಪಡಿಸಲಾಗಿದೆ ಮತ್ತು ತಿರುವನಂತಪುರಂ ಅನ್ನು ಪ್ರಮುಖ ನವೋದ್ಯಮ ಕೇಂದ್ರವನ್ನಾಗಿ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಕೇಂದ್ರದ ಪ್ರಚೋದನೆಯಿಂದ ಕೇರಳ ಇಂದು ಅಭಿವೃದ್ಧಿಯ ಕಡೆಗೆ ಹೊಸ ಹೆಜ್ಜೆ ಇಟ್ಟಿದೆ. ಇಂದಿನಿಂದ, ಕೇರಳದ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ಪ್ರಧಾನ ಮಂತ್ರಿ ಸ್ವನಿಧಿ ಕ್ರೆಡಿಟ್ ಕಾರ್ಡ್ ಯೋಜನೆಗೆ ಚಾಲನೆ ನೀಡಿ, ದೇಶಾದ್ಯಂತ ಬಡವರ ಕಲ್ಯಾಣಕ್ಕಾಗಿ ಇದು ಕೇರಳದಿಂದ ಮಾಡಿರುವ ವಿಶಾಲವಾದ ಕಾರ್ಯಕ್ರಮದ ಒಂದು ಭಾಗವಾಗಿದೆ. ಇದರಿಂದ ದೇಶಾದ್ಯಂತ ಇರುವ ಬೀದಿ ವ್ಯಾಪಾರಿಗಳು, ತಳ್ಳು ಗಾಡಿ ವ್ಯಾಪಾರಿಗಳಿಗೆ ಪ್ರಯೋಜನವನ್ನು ನೀಡಲಿದೆ ಎಂದು ತಿಳಿಸಿದರು.
ಗಣರಾಜ್ಯೋತ್ಸವಕ್ಕೆ ಬೆದರಿಕೆ ಹಾಕಿದ ಖಲಿಸ್ತಾನಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್
ಇದಕ್ಕೂ ಮೊದಲು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಾದ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡು, ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಿರುವುದನ್ನು ಉಲ್ಲೇಖಿಸಿ, ತಿರುವನಂತಪುರ ಮಹಾನ್ ನಗರದಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಲಾಗುವುದು. ಇದರಲ್ಲಿ ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಉದ್ಘಾಟನೆ, 1 ಲಕ್ಷ ಫಲಾನುಭವಿಗಳಿಗೆ ಪಿಎಂ ಸ್ವನಿಧಿ ಸಾಲಗಳ ವಿತರಣೆ. ಕೇರಳದ ಸಂಪರ್ಕವನ್ನು ಹೆಚ್ಚಿಸುವ ಮೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಉದ್ಘಾಟನೆ, ತಿರುವನಂತಪುರದಲ್ಲಿ ಸಿಎಸ್ಐಆರ್-ಎನ್ಐಐಎಸ್ ಟಿ ನವೀನ ತಂತ್ರಜ್ಞಾನ ಮತ್ತು ಉದ್ಯಮಶೀಲತಾ ಕೇಂದ್ರಕ್ಕೆ ಅಡಿಪಾಯ ಹಾಕುವುದಾಗಿ ತಿಳಿಸಿದರು.