ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಪ್ರಧಾನಿಯಾದ ಬಳಿಕ ಮೊದಲ ಬಾರಿ RSS ಕಚೇರಿಗೆ ಮೋದಿ ಭೇಟಿ; ಹೆಡ್ಗೆವಾರ್‌ಗೆ ಪುಷ್ಪ ನಮನ ಸಲ್ಲಿಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ನಾಗ್ಪುರದ ಡಾ.ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಎಂಎಸ್ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರಧಾನಿಯಾದ ಬಳಿಕ ಮೊದಲ ಬಾರಿ RSS ಕಚೇರಿಗೆ ಮೋದಿ ಭೇಟಿ

Profile Vishakha Bhat Mar 30, 2025 11:07 AM

ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ನಾಗ್ಪುರದ ಡಾ.ಹೆಡಗೇವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಎಂಎಸ್ ಗೋಳ್ವಾಲ್ಕರ್ ಅವರ ಸ್ಮಾರಕಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಆರ್‌ಎಸ್‌ಎಸ್‌ನ ಆಡಳಿತ ಕೇಂದ್ರ ಕಚೇರಿಯಾದ ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್‌, ನಿತಿನ್‌ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ಪ್ರಧಾನಿ ಮೋದಿ ಅವರು ಸಂಘದ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. 1956ರಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಅವರು ಬೌದ್ಧ ದೀಕ್ಷೆ ಸ್ವೀಕರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ನವೀನ ವಿಸ್ತೃತ ಕಟ್ಟಡವಾದ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಈ ಹಿಂದೆ 2000 ನೇ ಇಸವಿಯಲ್ಲಿ ಅಟಲ್‌ ಬಿಹಾರಿ ವಾಯಪೇಯಿ ಅವರು ಸಂಘದ ಕಚೇರಿಗೆ ಭೇಟಿ ನೀಡಿದ್ದರು. ಮೋದಿ ಕೊನೆಯ ಬಾರಿಗೆ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಕೊನೆಯ ಬಾರಿಗೆ 2013ರಲ್ಲಿ ಭೇಟಿ ನೀಡಿದ್ದರು. ಈ ವೇಳೆ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

ಈ ಸುದ್ದಿಯನ್ನೂ ಓದಿ: PM Narendra Modi : 2022-2024ರವರೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶಿ ಪ್ರವಾಸಗಳಿಗಾಗಿ ಕೇಂದ್ರ ಸರ್ಕಾರ ಎಷ್ಟು ಖರ್ಚು ಮಾಡಿದೆ?

ಸ್ಮೃತಿ ಮಂದಿರದ ಸಂದರ್ಶಕರ ಪುಸ್ತಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶಕ್ಕೆ ಸಹಿ ಹಾಕಿದರು. 'ಅತ್ಯಂತ ಗೌರವಾನ್ವಿತ ಡಾ. ಹೆಡ್ಗೆವಾರ್ ಮತ್ತು ಪೂಜ್ಯ ಗುರೂಜಿ ಅವರಿಗೆ ಹೃತ್ಪೂರ್ವಕ ನಮನಗಳು' ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. ಅವರ ನೆನಪುಗಳನ್ನು ಸ್ಮರಿಸಿಕೊಳ್ಳಲು ಈ ಸ್ಮಾರಕ ದೇವಾಲಯಕ್ಕೆ ಬರಲು ನನಗೆ ಅತೀವ ಸಂತೋಷವಾಗಿದೆ. ಭಾರತೀಯ ಸಂಸ್ಕೃತಿ, ರಾಷ್ಟ್ರೀಯತೆ ಮತ್ತು ಸಂಘಟನೆಯ ಮೌಲ್ಯಗಳಿಗೆ ಮೀಸಲಾಗಿರುವ ಈ ಸ್ಥಳವು ದೇಶ ಸೇವೆಯಲ್ಲಿ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದಿದ್ದಾರೆ.