ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಮೀಟಿಂಗ್‌ ಮೇಲೆ ಮೀಟಿಂಗ್‌ ನಡೆಸುತ್ತಿರುವ ಕೇಂದ್ರ; ಗುಜರಾತ್‌ ಸಿಎಂ ಜೊತೆ ಮೋದಿ ಚರ್ಚೆ

ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಗಡಿಯಲ್ಲಿ ಉಭಯ ಸೇನೆಗಳು ಯುದ್ಧ ಸನ್ನದ್ಧರಾಗಿವೆ. ಕೇಂದ್ರ ಸರ್ಕಾರ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಇಡೀ ದೇಶಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಭೆ ಕರೆದಿದ್ದಾರೆ. , ಅವರು ಗಡಿ ಭದ್ರತಾ ಪಡೆ (BSF) ಸೇರಿದಂತೆ ದೇಶದ ಗಡಿ ಕಾವಲು ಪಡೆಗಳ ಮುಖ್ಯಸ್ಥರೊಂದಿಗೆ ಗುರುವಾರ ತಡರಾತ್ರಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮೀಟಿಂಗ್‌ ಮೇಲೆ ಮೀಟಿಂಗ್‌ ನಡೆಸುತ್ತಿರುವ ಕೇಂದ್ರ ಸರ್ಕಾರ

Profile Vishakha Bhat May 9, 2025 1:47 PM

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಗಡಿಯಲ್ಲಿ ಉಭಯ ಸೇನೆಗಳು ಯುದ್ಧ ಸನ್ನದ್ಧರಾಗಿವೆ. ಕೇಂದ್ರ ಸರ್ಕಾರ ಸಭೆ ಮೇಲೆ ಸಭೆ ನಡೆಸುತ್ತಿದ್ದು, ಇಡೀ ದೇಶಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಭೆ ಕರೆದಿದ್ದಾರೆ. , ಅವರು ಗಡಿ ಭದ್ರತಾ ಪಡೆ (BSF) ಸೇರಿದಂತೆ ದೇಶದ ಗಡಿ ಕಾವಲು ಪಡೆಗಳ ಮುಖ್ಯಸ್ಥರೊಂದಿಗೆ ಗುರುವಾರ ತಡರಾತ್ರಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಗಡಿಯುದ್ಧಕ್ಕೂ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚು ಮಾಡುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗಡಿ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಗಡಿ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪ್ರಧಾನಿ ಸೂಚಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮೋದಿ ಫೋನ್‌ ಕರೆ ಮೂಲಕ ಮಾತನಾಡಿದ್ದಾರೆ. ಬನಸ್ಕಾಂತ, ಪಠಾಣ್, ಕಚ್ ಮತ್ತು ಜಾಮ್ನಗರದ ಗಡಿ ಜಿಲ್ಲೆಗಳ ನಾಗರಿಕರ ಸ್ಥಿತಿಯನ್ನು ಪ್ರಧಾನಿ ಮೋದಿ ಪರಿಶೀಲಿಸಿದರು.

ಆರೋಗ್ಯ ಸಚಿವ ಜೆಪಿ ನಡ್ಡಾ ಕೂಡ ಪ್ರತ್ಯೇಕ ಸಭೆ ನಡೆಸಿ ಎಲ್ಲಾ ರಾಜ್ಯದ ಆರೋಗ್ಯ ಕಾರ್ಯದರ್ಶಿಗಳಿ ಹೆಚ್ಚುವರಿ ಔಷಧ ಸೇರಿದಂತೆ ವೈದ್ಯಕೀಯ ಸಲಕರಣೆಗಳನ್ನು ಸಂಗ್ರಹಿಸಿ ಎಂದು ಹೇಳಿದ್ದಾರೆ. ಅಗತ್ಯ ಸಿದ್ದತೆಗೆ ಸೂಚನೆ ನೀಡಲಾಗಿದೆ. ಹೆಚ್ಚಿನ ಸೈನಿಕರನ್ನು ಗಡಿಯಲ್ಲಿ ನಿಯೋಜಿಸಲಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೂಡ ಸಭೆ ಕರೆದಿದ್ದು, ಇಂದು ಸಂಜೆ ಸಭೆ ನಡೆಯಲಿದೆ. "ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ನವದೆಹಲಿಯ ಸೌತ್ ಬ್ಲಾಕ್‌ನಲ್ಲಿ ಮೂರು ಸೇನೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindoor: ಪಾಕಿಸ್ತಾನದ ಕ್ಷಿಪಣಿ-ಡ್ರೋನ್ ದಾಳಿಗೆ ರಷ್ಯಾ, ಇಸ್ರೇಲ್ ಶಸ್ತ್ರಾಸ್ತ್ರಗಳಿಂದ ತಿರುಗೇಟು ಕೊಟ್ಟ ಭಾರತ

ಪಾಕಿಸ್ತಾನಿ ಸೇನೆಯು ನಿನ್ನೆ ರಾತ್ರಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್‌ಗಳನ್ನು ಗುರಿಯಾಗಿಸಲು ಪ್ರಯತ್ನಿಸಿತು. ಈ ಪ್ರಯತ್ನಗಳನ್ನು ಭಾರತೀಯ ವಾಯುಸೇನೆ ವಿಫಲಗೊಳಿಸಿದೆ.