ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವೆನೆಜುವೆಲಾ ಜತೆ ಸಂಬಂಧ ಸದೃಢಗೊಳಿಸಲು ಹಂಗಾಮಿ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕ ಸೇನಾ ಪಡೆ ಬಂಧಿಸಿದ ಬಳಿಕ ಮೊದಲ ಬಾರಿಗೆ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳನ್ನು ಸದೃಢಗೊಳಿಸಲು ಇಬ್ಬರು ನಾಯಕರು ಮಾತುಕತೆ ನಡೆಸಿದ್ದಾರೆ.

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಸಂಗ್ರಹ ಚಿತ್ರ -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ (Venezuela Acting President Delcy Rodríguez) ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ (Nicolás Maduro) ಅವರನ್ನು ಅಮೆರಿಕ (America) ಸೇನಾ ಪಡೆ ಬಂಧಿಸಿದ ಬಳಿಕ ಮೊದಲ ಬಾರಿಗೆ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ಎರಡು ರಾಷ್ಟ್ರಗಳ ನಡುವೆ ಬಹುಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸಲು ಮತ್ತು ವಿಸ್ತರಿಸಲು ಚರ್ಚೆ ನಡೆಸಿದ್ದಾರೆ.

ಜನವರಿ ೩ರಂದು ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ವೈಮಾನಿಕ ದಾಳಿ ನಡೆಸಿದ ಅಮೇರಿಕ ಸೇನಾ ಪದೇ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ವಶಕ್ಕೆ ಪಡೆದಿತ್ತು.

ರಷ್ಯಾದಿಂದ ಆಮದು ಕಡಿಮೆಯಾದ ಮೇಲೆ ಭಾರತಕ್ಕೆ ಕಚ್ಚಾ ತೈಲ ಎಲ್ಲಿಂದ ಬರುತ್ತೆ?

ಅಮೆರಿಕದ ಕಾನೂನು ಜಾರಿ ಸಂಸ್ಥೆಗಳ ಜೊತೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ವಶಕ್ಕೆ ತೆಗೆದುಕೊಂಡು ನ್ಯೂಯಾರ್ಕ್ ಗೆ ಕರೆ ತರಲಾಗಿತ್ತು. ಮಾದಕ ವಸ್ತು ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆಗೆ ವೆನೆಜುವೆಲಾ ಸಹಕಾರ ನೀಡುತ್ತಿದೆ ಎನ್ನುವ ಆರೋಪದಲ್ಲಿ ವೆನುಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಸಲುವಾಗಿ ಅಮೆರಿಕ ಈ ದಾಳಿ ನಡೆಸಿತ್ತು.



ಈ ಘಟನೆಯ ಬಳಿಕ ಡೆಲ್ಸಿ ರೊಡ್ರಿಗಸ್ ಅವರು ಜನವರಿ 5ರಂದು ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದರು. ಇದರ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಕರೆ ಮಾಡಿ ಮುಂಬರುವ ವರ್ಷಗಳಲ್ಲಿ ಭಾರತ ಮತ್ತು ವೆನೆಜುವೆಲಾ ನಡುವಿನ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ದೃಷ್ಟಿಕೋನದ ಕುರಿತು ಚರ್ಚೆ ನಡೆಸಿದರು. ಇದರೊಂದಿಗೆ ಬಹು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸಲು ಮತ್ತು ವಿಸ್ತರಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು.

ಪೂರ್ವ ಕಾಂಗೋದಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರ ದಾಳಿಗೆ 25 ಜನ ಬಲಿ

ಈ ಕುರಿತು ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಮಾತನಾಡಿದೆ. ಮುಂದಿನ ವರ್ಷಗಳಲ್ಲಿ ಭಾರತ-ವೆನೆಜುವೆಲಾ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಹಂಚಿಕೆಯ ದೃಷ್ಟಿಕೋನದೊಂದಿಗೆ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಮತ್ತು ವಿಸ್ತರಿಸಲು ನಾವು ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದರು.